ಮಧ್ಯಪ್ರದೇಶ| ಮೋದಿ ರೋಡ್‌ಶೋ; ವೇದಿಕೆ ಕುಸಿದು ನಾಲ್ವರಿಗೆ ಗಾಯ

Date:

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಪಿಡಬ್ಲ್ಯೂಡಿ ಸಚಿವ ರಾಕೇಶ್ ಸಿಂಗ್ ಮತ್ತು ಪಕ್ಷದ ಜಬಲ್ಪುರ ಲೋಕಸಭಾ ಅಭ್ಯರ್ಥಿ ಆಶಿಶ್ ದುಬೆ ಅವರೊಂದಿಗೆ ಈ ಪ್ರಚಾರ ಕಾರ್ಯವನ್ನು ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಪ್ರಚಾರದ ಬಳಿಕ ಬಹಿರಂಗ ಸಭೆಯ ಸಂದರ್ಭದಲ್ಲಿ ಜನರಿಗಾಗಿ ಮರದ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಈ ಮರದ ವೇದಿಕೆಯಲ್ಲಿ ನಿಲ್ಲಲು ನೂಕುನುಗ್ಗಲು ಉಂಟಾಗಿದ್ದು ವೇದಿಕೆಯೇ ಕುಸಿದು ಬಿದ್ದಿದೆ.

ಇದನ್ನು ಓದಿದ್ದೀರಾ?   ಕೇರಳ | ಅಭ್ಯರ್ಥಿ ಇಲ್ಲದೆಯೇ ಮೋದಿ ರೋಡ್‌ಶೋ; ‘ನನ್ನ ಕರೆದಿಲ್ಲ’ ಎಂದ ಸಲಾಮ್!

ವೇದಿಕೆ ಕುಸಿದ ಕಾರಣದಿಂದಾಗಿ ಓರ್ವ ಪೊಲೀಸ್ ಸೇರಿದಂತೆ ಸುಮಾರು ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

“ಕೆಲವರು ಪ್ರಥಮ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ 4-5 ಜನರು ಸಣ್ಣ ಗಾಯಗಳನ್ನು ಹೊಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಸಚಿವ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಜಬಲ್ಪುರ್ ರಾಜ್ಯದ ಮಹಾಕೋಶಲ್ ಪ್ರದೇಶದ ಭಾಗವಾಗಿದೆ. ಇದು 2019 ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಫಲವಾದ ಏಕೈಕ ಲೋಕಸಭಾ ಕ್ಷೇತ್ರವಾದ ಛಿಂದ್ವಾರಾವನ್ನು ಸಹ ಒಳಗೊಂಡಿದೆ. ಉಳಿದ 28 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು.

ಸಿಧಿ, ಶಹದೋಲ್ (ಎಸ್‌ಟಿ), ಮಂಡ್ಲಾ (ಎಸ್‌ಟಿ) ಮತ್ತು ಬಾಲಾಘಾಟ್‌ ಸೇರಿದಂತೆ ಜಬಲ್ಪುರ್ ಮತ್ತು ಛಿಂದ್ವಾರಾದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...