ರಾಹುಲ್ ಗಾಂಧಿಯನ್ನು ‘56 ವರ್ಷದ ಯುವಜನ ನಾಯಕ’ನೆಂದು ಮೂದಲಿಸಿದ ಪ್ರಧಾನಿ ಮೋದಿ

Date:

ಇಂದಿನಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನಕ್ಕೆ ತೆರಳುವ ಮುನ್ನ ಮಾತನಾಡಿರುವ ಪ್ರಧಾನಿ ಮೋದಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. “ನಾನು ಯುವಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆದರೆ, 56 ವರ್ಷದ ಯುವಜನ ನಾಯಕನ ಬಗ್ಗೆ ನಾನು ಮಾತನಾಡುತ್ತಿಲ್ಲ” ಎಂದು ಮೂದಲಿಸಿದ್ದಾರೆ.

- Advertisement -

 ಭಾರತದ ಮೊದಲ ಖಾಸಗಿ ರಾಕೆಟ್‌ಅನ್ನು ಯಶಸ್ವಿಯಾಗಿ ಕಕ್ಷೆಗೆ ಉಡಾಯಿಸಿದ ಸ್ಕೈರೂಟ್ ಏರೋಸ್ಪೇಸ್ ತಂಡದ ಸಾಧನೆಯನ್ನು ಮೋದಿ ಶ್ಲಾಘಿಸಿದ್ದಾರೆ. “ಭಾರತದ ಮೊದಲ ಖಾಸಗಿ ರಾಕೆಟ್ ವಿಕ್ರಮ್-1 ಯಶಸ್ವಿಯಾಗಿ ಕಕ್ಷೆ ತಲುಪಿರುವುದು ದೇಶದ ಯುವಶಕ್ತಿಯ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಭಾರತದ ಯುವಜನತೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಹಾರಾಟ ಆರಂಭಿಸಿದೆ. ಇದು ದೇಶಕ್ಕೆ ಅತ್ಯಂತ ಹೆಮ್ಮೆಯ ಸಂಗತಿ. ಸ್ಕೈರೂಟ್ ಏರೋಸ್ಪೇಸ್‌ನಲ್ಲಿ ಕೆಲಸ ಮಾಡುತ್ತಿರುವ ಸರಾಸರಿ 28 ವರ್ಷದ ಯುವಜನರ ಕುರಿತು ನಾನು ಮಾತನಾಡುತ್ತಿದ್ದೇನೆ. ನಾನು 56 ವರ್ಷದ ‘ಯುವಜನ ನಾಯಕ’ನ ಬಗ್ಗೆ ಮಾತನಾಡುತ್ತಿಲ್ಲ” ಎಂದು ರಾಹುಲ್ ಕುರಿತು ಮೋದಿ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಅವರು ಕಳೆದ ಜೂನ್‌ನಲ್ಲಿ ತಮ್ಮ 56ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಕಾಂಗ್ರೆಸ್ ಅವರನ್ನು ಹಲವು ವರ್ಷಗಳಿಂದ ಯುವ ನಾಯಕನಾಗಿ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ, ರಾಹುಲ್ ವಯಸ್ಸಿನ ಕುರಿತು ಪ್ರಧಾನಿ ಮೋದಿ ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...