ಬೈಡನ್‌ ಮೇಲೆ ತೋರಿಸಿದ ಪ್ರೀತಿ ಮಣಿಪುರ ಮಹಿಳೆಯರ ಮೇಲೆಯೂ ಪ್ರಧಾನಿ ತೋರಿಸಲಿ: ಕೇರಳ ಬಿಷಪ್‌

Date:

ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ತೋರಿಸಿದ ಪ್ರೀತಿಯ ಕುರಿತು ವ್ಯಂಗ್ಯವಾಡಿರುವ ಕೇರಳ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ಬಿಷಪ್‌ ಮಾರ್‌ ಜೋಸೆಫ್‌ ಪಂಪ್ಲನಿ, “ದೌರ್ಜನ್ಯಕ್ಕೊಳಗಾಗಿರುವ ಮಣಿಪುರದ ಸಹೋದರಿಯರ ಮೇಲೂ ಬೈಡನ್‌ ಅವರಿಗೆ ತೋರಿಸದಷ್ಟೇ ಪ್ರೀತಿಯನ್ನು ತೋರಿಸಿ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ತಾವು ಯಾವುದೇ ಒಂದು ಸಮುದಾಯದ ಪ್ರಧಾನಿ ಅಲ್ಲ ಎಂಬುದು ನೆನಪಿನಲ್ಲಿಟ್ಟುಕೊಳ್ಳಬೇಕು,” ಎಂದು ಕಾಸರಗೋಡು ಸಂಸದ ರಾಜಮೋಹನ್‌ ಉನ್ನಿತ್ತನ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ 24 ಗಂಟೆಗಳ ಉಪವಾಸ ಸತ್ಯಾಗ್ರಹದಲ್ಲಿ ಆರ್ಚ್‌ ಬಿಷಪ್‌ ಮಾತನಾಡಿದರು.

ಮಣಿಪುರದ ಹಿಂಸಾಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶ್ಲಾಘಿಸಿದ ಬಿಷಪ್‌, ‘ರಾಹುಲ್‌ ಗಾಂಧಿ ಅವರ ಪ್ರಯತ್ನಗಳು ಅವರು ಅಲ್ಪಸಂಖ್ಯಾತರೊಂದಿಗಿದ್ದಾರೆ ಎಂಬುದನ್ನು ಸೂಚಿಸುತ್ತದೆ. ದೇಶದ ಹೆಸರನ್ನು ಭಾರತ ಎಂದು ಬದಲಾಯಿಸಿದರಷ್ಟೇ ಸಾಲದು. ಎಲ್ಲರ ಮೇಲೂ ಪ್ರೀತಿಯಿರಬೇಕು” ಎಂದೂ ಅವರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್ | ಭಾರತ್–ಪಾಕ್‌ ಪಂದ್ಯದ ಮೀಸಲು ದಿನದಲ್ಲೂ ಮಳೆ ಕಾಟ; ಫೈನಲ್‌ ಪಂದ್ಯ ಸ್ಥಳಾಂತರ!

ಸಮಾನ ನಾಗರಿಕ ಸಂಹಿತೆ ಪ್ರಸ್ತಾಪ ಸಹಿತ ಕೇಂದ್ರದ ನಿಲುವನ್ನು ಖಂಡಿಸಿ ಕಾಸರಗೋಡು ಸಂಸದ ಉನ್ನಿತ್ತನ್‌ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌, ‘ಜಿ20 ಶೃಂಗಸಭೆಯನ್ನು ಮೋದಿ ತಮ್ಮ ಜನಪ್ರಿಯತೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರವು ತಮ್ಮ ಅಧಿಕೃತ ಕಾರ್ಯಕ್ರಮಗಳಲ್ಲಿ ‘ಭಾರತ್’ ಅನ್ನು ಬಳಸಲು ಪ್ರಾರಂಭಿಸಿತು. ಏಕೆಂದರೆ ಅದು ವಿರೋಧ ಪಕ್ಷದ ಇಂಡಿಯಾ ಒಕ್ಕೂಟಕ್ಕೆ ಹೆದರುತ್ತದೆ” ಎಂದು ಅವರು ಆರೋಪಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ...

ತೆಲಂಗಾಣ | ಮಳೆ ಅನಾಹುತಕ್ಕೆ ಭಾನುವಾರ 12 ಮಂದಿ ಬಲಿ

ದಕ್ಷಿಣ ಭಾರತದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಿದೆ. ಭಾನುವಾರವೂ...