ಹಿಂದೂ – ಮುಸ್ಲಿಂ ದ್ವೇಷದ ಮಾತುಗಳಿಂದ ಹೊರಬರದ ಪ್ರಧಾನಿ: ಕಾಂಗ್ರೆಸ್ ವಾಗ್ದಾಳಿ

Date:

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ ಪ್ರತಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

- Advertisement -

ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಕಷ್ಟಪಡುತ್ತಿದ್ದು, ಪ್ರಧಾನಿ ಮೋದಿ ತಮ್ಮ ಹಿಂದಿನ ‘ಅದೇ ಹಿಂದೂ-ಮುಸ್ಲಿಂ ಮಾತುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಸುಪ್ರಿಯಾ ಅವರು, ಬಿಜೆಪಿ ನಿರಂತರವಾಗಿ ತನ್ನ ಮೂಲ ನೆಲೆ ಕಳೆದುಕೊಳ್ಳುತ್ತಿದ್ದು, ಪ್ರಧಾನಿಯ ಹೇಳಿಕೆಗಳು ಮುಸ್ಲಿಂ ಸಮುದಾಯದ ಬಗ್ಗೆಯೆ ಮರುಕಳಿಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆಯನ್ನು ವಿಸ್ತೃತವಾಗಿ ಚರ್ಚಿಸಿದ್ದು,ಇದು ದೇಶದ ಭವಿಷ್ಯದ ನೀಲನಕ್ಷೆ ಎಂದು ಸುಪ್ರಿಯಾ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದತ್ತ ದೇಶ ದಾಪುಗಾಲು ಹಾಕುತ್ತಿಲ್ಲವೇ? ಅವರಿಗಾದದ್ದು ನಮಗಾಗುವುದಿಲ್ಲವೇ?

“10 ವರ್ಷ ಅಧಿಕಾರ ನಡೆಸಿದ ನಂತರ ಚುನಾವಣೆಗಳು ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿ ತಮ್ಮ ಸಾಧನೆಯನ್ನು ಮತದಾರರಿಗೆ ತಿಳಿಸಲು ಪ್ರಧಾನಿ ಅವರಿಗೆ ನಡುಕವಾಗುತ್ತಿದೆ. ಇವರು ಮತ್ತೆ ಹಿಂದೂ-ಮುಸ್ಲಿಂ ಮಾತುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂದು ಸುಪ್ರಿಯಾ ಅವರು ಪ್ರಧಾನಿ ಅವರನ್ನು ತರಾಟೆಗೆ ತೆಗೆದುಕೊಂಡರು.

“ಕಾಂಗ್ರೆಸ್‌ನ ಪ್ರಣಾಳಿಕೆ ನ್ಯಾಯದ ಐದು ಆಧಾರಸ್ತಂಭಗಳ ಆಧಾರದ ಮೇಲಿರುವ ಧ್ವನಿಯಾಗಿದೆ.ಇದು ದೇಶದ ಜನರಿಗೆ ಅಳಿಸಲಾಗದ ಮುದ್ರೆಯಾಗಿದೆ. ಇದು ಭಾರತ್‌ ಜೋಡೋ ಯಾತ್ರೆ ಹಾಗೂ ಭಾರತ್‌ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ನಮ್ಮನ್ನು ಒಗ್ಗೂಡಿಸಿದ ಕೋಟ್ಯಂತರ ಜನರ ನಿರೀಕ್ಷೆಗಳು, ಭರವಸೆಗಳು ಹಾಗೂ ಸವಾಲುಗಳಾಗಿವೆ” ಎಂದು ಹೇಳಿದರು.

“ ಈ ಮುದ್ರೆಯು 10 ವರ್ಷದಲ್ಲಿ ಕಳೆದುಕೊಂಡ ಉತ್ಸಾಹವನ್ನು ಹೊಸ ಭರವಸೆಯೊಂದಿಗೆ ಉದಯಿಸುತ್ತದೆ. ಇದು ಯುವಕರ, ರೈತರ, ಮಹಿಳೆಯರ ಕಾರ್ಮಿಕರ ಮುದ್ರೆಯಾಗಿದ್ದು, ಈ ಮುದ್ರೆಯಿಂದ ಸಮಾಜದ ಅಂಚಿನಲ್ಲಿರುವ ಜನರು ಖಂಡಿತವಾಗಿಯು ಮುಂದೆ ಬರುವುದಲ್ಲದೆ ಹೆಚ್ಚಿನ ಪ್ರಾತಿನಿಧ್ಯ ಕಂಡುಕೊಳ್ಳಲಿದ್ದಾರೆ” ಎಂದು ಸುಪ್ರಿಯಾ ಶ್ರೀನಾಥೆ ತಿಳಿಸಿದರು.

ಕಾಂಗ್ರೆಸ್‌ ನ್ಯಾಯಪತ್ರವು ಮೋದಿ ಸರ್ಕಾರ ದೇಶದಲ್ಲಿ 10 ವರ್ಷ ವಿಧಿಸಿದ್ದ ಪ್ರತಿಯೊಬ್ಬರ ಸಮಸ್ಯೆಗೂ ಪರಿಹಾರ ಒದಗಿಸುತ್ತದೆ. ಈ ನ್ಯಾಯ ಪತ್ರ ಭಾರತದ ಜನರ ಧ್ವನಿ, ದೇಶದ ಧ್ವನಿ” ಎಂದು ಸುಪ್ರಿಯಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...