ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ; ಪ್ರಧಾನಿ ಮೋದಿ ಕ್ಷಮೆ ಕೇಳಬೇಕು – ರಾಜೀನಾಮೆ ನೀಡಬೇಕು: ರಾಹುಲ್‌ ಗಾಂಧಿ ಆಗ್ರಹ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಅನ್ನು ಖಂಡಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಈ ದೌರ್ಜನ್ಯವು ಸಂಪೂರ್ಣವಾಗಿ ‘ಭಾರತೀಯತೆ ವಿರುದ್ಧ’ವಾಗಿದೆ. ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತು ಪ್ರಧಾನಿ ಮೋದಿ ತುಟಿಬಿಚ್ಚಿಲ್ಲ. ಅವರು ವಿದ್ಯಾರ್ಥಿ ಸಮುದಾಯದ ಬಳಿ ತಕ್ಷಣವೇ ಬೇಷರತ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ತಕ್ಷಣವೇ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ವಿಪಕ್ಷಗಳ ನಿಯೋಗವು ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದೆ. ಆದರೆ, ಅವಕಾಶ ನೀಡಲು ತಮಗೆ ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ ಎಂದು ಸ್ಪೀಕರ್ ನೇರವಾಗಿ ತಿಳಿಸಿದ್ದಾರೆ. ದೇಶದ ಸಂಸತ್ತಿನಲ್ಲಿ ಪ್ರಜಾಸತ್ತಾತ್ಮಕವಾಗಿ ಚರ್ಚೆ ನಡೆಸಲು ಸಭಾಪತಿಯವರೇ ಸರ್ಕಾರದ ಅನುಮತಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ಪ್ರಜಾಪ್ರಭುತ್ವದ ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಭಾರತದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ವಿದ್ಯಾರ್ಥಿಗಳು ನ್ಯಾಯಯುತವಾಗಿ ಧ್ವನಿ ಎತ್ತುತ್ತಿದ್ದಾರೆ. ದೇಶದ ಪರೀಕ್ಷಾ ವ್ಯವಸ್ಥೆಯು ಗೆದ್ದಲು ಹಿಡಿದು ಸಂಪೂರ್ಣವಾಗಿ ಟೊಳ್ಳಾಗಿದೆ. ಯುವಜನರ ಭವಿಷ್ಯದ ಕಾಳಜಿಯನ್ನು ಆಲಿಸಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಬದಲು, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

“ವಿದ್ಯಾರ್ಥಿಗಳ ಮೇಲಿನ ಈ ದೌರ್ಜನ್ಯದ ಸಂಪೂರ್ಣ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು. ಗೃಹ ಸಚಿವರು ಪ್ರಧಾನಿಯವರಿಗೆ ವರದಿ ಮಾಡುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಜೆಪಿಗೆ ಬಿಸಿತುಪ್ಪವಾದ ಪರೀಕ್ಷಾ ಹಗರಣ, ವಾಂಗ್ಚುಕ್, ರಾಮಮಂದಿರ, ಎಥೆನಾಲ್!

ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಸರ್ಕಾರವು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕಲು ತಮ್ಮ ಖಾಸಗಿ ಪಡೆಯನ್ನು ಬಳಸಿಕೊಂಡಿದೆ. ಹಿಂದೆ, ಹಿಟ್ಲರ್ ತನ್ನ ಸ್ವಂತ ದೇಶದ ಜನರ ವಿರುದ್ಧ ಖಾಸಗಿ ಪಡೆಯನ್ನು ಹೇಗೆ ಬಳಸುತ್ತಿದ್ದನೋ, ಅದೇ ಮಾದರಿಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಯುವಜನರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತಮ್ಮ ಸಂಪುಟದ ಸಚಿವರ ಬಳಿ ಸರ್ಕಾರದ ಹಲವು ರಹಸ್ಯಗಳಿರುವುದರಿಂದ, ಅವರು ಆ ರಹಸ್ಯಗಳನ್ನು ಎಲ್ಲಿ ಬಹಿರಂಗಪಡಿಸಿಬಿಡುತ್ತಾರೆ ಎಂಬ ಭಯದಿಂದ ಕೇಂದ್ರ ಸರ್ಕಾರವು ಸಚಿವರನ್ನು ವಜಾಗೊಳಿಸಲು ಹಿಂಜರಿಯುತ್ತಿದೆ” ಎಂದೂ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...