ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

Date:

  • ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಂಜಯ್‌ ರಾವುತ್‌ ಉತ್ತರ
  • ಮೋದಿ ಪದವಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ₹25 ಸಾವಿರ ದಂಡ

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌ ಆಗ್ರಹಿಸಿದ್ದಾರೆ.

ನೂತನವಾಗಿ ನಿರ್ಮಾಣಗೊಂಡಿರುವ ಸಂಸತ್ತಿನ ಮುಖ್ಯದ್ವಾರದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಶೈಕ್ಷಣಿಕ ಅರ್ಹತೆಯ ದಾಖಲೆಗಳನ್ನು ತೋರ್ಪಡಿಸಬೇಕು. ಪ್ರಧಾನಿ ಮೋದಿ ಅವರ ಪದವಿಯ ಬಗೆಗಿನ ದಾಖಲೆಗಳನ್ನು ಗೋಪ್ಯವಾಗಿರಿಸುವುದರ ಅಗತ್ಯವೇನು ಎಂದು ಸಂಸದರಾಗಿರುವ ರಾವುತ್‌ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾವುತ್‌, ಪದವಿ ವಿಚಾರ ಗೋಪ್ಯವಾಗಿರಿಸಿರುವುದು ಜನತೆಯ ಅನುಮಾನಕ್ಕೆ ಕಾರಣವಾಗಿದೆ. ದೇಶದ ಕಾನೂನು ರೂಪಿಸುವವರು ಹಾಗೂ ಜನತೆಗೆ ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿಚಾರದ ಅರಿವಾಗಲಿ ಎಂದು ಸಂಜಯ್‌ ರಾವುತ್ ಹೇಳಿದರು.

ಗುಜರಾತ್ ವಿಶ್ವವಿದ್ಯಾಲಯದಿಂದ ಪ್ರಧಾನಿ ಮೋದಿ ಅವರ ಶೈಕ್ಷಣಿಕ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ ಮೂರು ದಿನಗಳ ನಂತರ ರಾವುತ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ಶೈಕ್ಷಣಿಕ ಮಾಹಿತಿ ಕೋರಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ ₹25 ಸಾವಿರ ದಂಡ ವಿಧಿಸಿತ್ತು. ಈ ಬಗ್ಗೆಯೂ ಸಂಜಯ್ ರಾವುತ್ ಮಾತನಾಡಿದ್ದಾರೆ.

“ಪ್ರಧಾನಿ ಮೋದಿ ಪದವಿ ವಿವರ ಕೇಳಿದರೆ, ಅದರಲ್ಲಿ ಬಚ್ಚಿಡಲು ಏನಿದೆ? ಮೋದಿಯವರು ಸ್ವತಃ ಮುಂದೆ ಬಂದು, ತಮ್ಮ ಶೈಕ್ಷಣಿಕ ಪದವಿಯ ಬಗ್ಗೆ ಸ್ಪಷ್ಟನೆ ನೀಡಬೇಕು” ಎಂದು ಸಂಜಯ್ ರಾವುತ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

“ಪ್ರಧಾನಿ ಮೋದಿ ಅವರ ಪದವಿ ದಾಖಲೆಗಳು ನಕಲಿ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಸಂಪೂರ್ಣ ರಾಜಕೀಯ ಶಾಸ್ತ್ರದಲ್ಲಿನ ಅವರ ಪದವಿಯು ಐತಿಹಾಸಿಕ ಮತ್ತು ಕ್ರಾಂತಿಕಾರಕವಾದದ್ದು. ಆದ್ದರಿಂದ ಆ ದಾಖಲೆಗಳನ್ನು ನಮ್ಮ ನೂತನ ಸಂಸತ್ತಿನ ಭವ್ಯ ಪ್ರವೇಶ ದ್ವಾರದಲ್ಲಿ ಪ್ರದರ್ಶನ ಮಾಡಬೇಕು” ಎಂದು ರಾವುತ್ ಕುಟುಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...