ತ್ರಿವಳಿ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ; ಹಲವು ರೈಲುಗಳು ರದ್ದು

Date:

ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಸರಣಿ ಅಪಘಾತದ ದುರಂತ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸ್ಥಳೀಯ ಆಸ್ಪತ್ರೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

- Advertisement -

ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ದುರಂತ ಉಂಟಾದ ಬಗ್ಗೆ ಪರಿಸ್ಥಿತಿಯ ಅವಲೋಕನದ ಬಗ್ಗೆ ರೈಲ್ವೆ ಇಲಾಖೆ ಸೇರಿದಂತೆ ಇತರ ಇಲಾಖೆಯೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಸದ್ಯ ಮಾಹಿತಿಯ ಪ್ರಕಾರ 288 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ನಡುವೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.

ಘಟನಾ ಸ್ಥಳಕ್ಕೆ ನೆರವು ನೀಡಲು ಹಾಗೂ ಗಾಯಾಳುಗಳಿಗೆ ಸಹಾಯ ಮಾಡಲು ಭಾರತೀಯ ಸೇನೆಯನ್ನು ನಿಯೋಜಿಸಲಾಗಿದೆ. ಸೇನೆಯ ವೈದ್ಯಕೀಯ ಹಾಗೂ ಇಂಜಿನಿಯರಿಂಗ್‌ ತಂಡಗಳು ಆಂಬುಲೆನ್ಸ್ ಹಾಗೂ ಹಲವು ಸೇವಾ ತಂಡಗಳೊಂದಿಗೆ ಘಟನಾ ಸ್ಥಳಕ್ಕೆ ಶೀಘ್ರದಲ್ಲೇ ಆಗಮಿಸಿ ನೆರವು ಕಾರ್ಯ ಆರಂಭಿಸಲಿವೆ.

ಈ ಸುದ್ದಿ ಓದಿದ್ದೀರಾ? 300ಕ್ಕೂ ಹೆಚ್ಚು ಸಾವು, ತ್ರಿವಳಿ ರೈಲು ದುರಂತ ಸಂಭವಿಸಿದ್ದು ಹೇಗೆ? ರಾಜ್ಯದ 110 ಪ್ರಯಾಣಿಕರು ಸುರಕ್ಷಿತ

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಕೋಲ್ಕತಾದಿಂದ ಬರುತ್ತಿದ್ದ ಶಾಲಿಮಾರ್ – ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿ ತಪ್ಪುತ್ತದೆ. ಹಳಿ ತಪ್ಪಿದ ನಂತರ ಒಂದೇ ಹಳಿಯ ಮೇಲೆ ಹೋಗುತ್ತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ರೈಲು ಢಿಕ್ಕಿ ಹೊಡೆಯುತ್ತದೆ. ಢಿಕ್ಕಿ ಹೊಡೆದ ನಂತರ ಪಕ್ಕದ ಹಳಿ ಮೇಲೆ ಕೋರಮಂಡಲ್ ರೈಲಿನ ಬೋಗಿಗಳು ಬೀಳುತ್ತವೆ. ಆಗ ಇದೇ ಸಂದರ್ಭದಲ್ಲಿ ಬೋಗಿಗಳು ಬಿದ್ದ ಹಳಿಯ ಮೇಲೆ ಬಂದ ಯಶವಂತಪುರ – ಹೌರಾ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಇತ್ತೀಚಿನ ವರ್ಷಗಳಲ್ಲಿ ನಡೆದ ಅತಿದೊಡ್ಡ ರೈಲು ದುರಂತ ಇದಾಗಿದೆ ಎಂದು ಹೇಳಲಾಗಿದೆ.

49 ರೈಲುಗಳ ಸಂಚಾರ ರದ್ದು

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು ತೆರವುಗೊಳಿಸಿ, ಹಳಿಗಳನ್ನು ಸರಿಪಡಿಸುವ ಕಾರ್ಯ ನಡೆಯಬೇಕಿದೆ. ಅಲ್ಲಿಯವರೆಗೂ ಈ ಮಾರ್ಗದಲ್ಲಿ ರೈಲುಗಳ ಓಡಾಟ ಸಾಧ್ಯವಿಲ್ಲ. ಈ ಹಿನ್ನೆಲೆ ಹಲವಾರು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅಲ್ಲದೇ 10 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ತಿರುವನಂತಪುರಂ- ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಾಫರ್ ಎಕ್ಸ್‌ಪ್ರೆಸ್ (20889) ರೈಲುಗಳು ರದ್ದಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP)...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ...