ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ

Date:

ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯ ವಿರುದ್ಧವಾಗಿದ್ದು, ಜನರ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

- Advertisement -

ತೆಲಂಗಾಣದ ಅದಿಲಾಬಾದ್‌ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವೆ ನಡೆಯುತ್ತಿದೆ. ಒಂದು ಸಂವಿಧಾನವನ್ನು ಉಳಿಸಲು ಬಯಸುವ ಕಾಂಗ್ರೆಸ್ ನಡುವೆ ಹಾಗೂ ಮತ್ತೊಂದು ಜನರ ಹಕ್ಕುಗಳನ್ನು ಕೊನೆಗೊಳಿಸುವ ಬಿಜೆಪಿ – ಆರ್‌ಎಸ್‌ಎಸ್‌ ಒಳಗೊಂಡ ಪಕ್ಷಗಳ ನಡುವೆ ಎಂದು ರಾಹುಲ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ನರೇಂದ್ರ ಮೋದಿ ಅವರು ಮೀಸಲಾತಿ ವಿರುದ್ಧವಾಗಿದ್ದಾರೆ. ಅವರು ನಿಮ್ಮಿಂದ ಮೀಸಲಾತಿಗಳನ್ನು ಕಿತ್ತುಕೊಳ್ಳಲು ಬಯಸುತ್ತಾರೆ. ಮೀಸಲಾತಿಯನ್ನು ಶೇ.50 ರಷ್ಟು ಹೆಚ್ಚಿಸುವುದು ದೇಶದ ಅತೀ ದೊಡ್ಡ ಸವಾಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

“ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಮೀಸಲಾತಿಗಿರುವ ಶೇ.50ರ ಮಿತಿಯನ್ನು ತೆಗೆದುಹಾಕಲಿದೆ. ಆದರೆ ಬಿಜೆಪಿ ನಾಯಕರು ಮೀಸಲಾತಿಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಅಮೇಥಿ, ರಾಯ್‌ಬರೇಲಿಗೆ ಪ್ರಿಯಾಂಕಾ ಗಾಂಧಿ ಉಸ್ತುವಾರಿ

ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಸ್ತುವಾರಿ ವಹಿಸಿಕೊಂಡು ಪ್ರಚಾರ ನಡೆಸಲಿದ್ದಾರೆ. ಕೈ ಪಕ್ಷದ ಭದ್ರಕೋಟೆ ಹಾಗೂ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರುವ ಇವೆರೆಡು ಕ್ಷೇತ್ರಗಳಲ್ಲಿ ಗೆಲುವು ಖಚಿತಪಡಿಸಿಕೊಳ್ಳಲು ಪಕ್ಷ ಮುಂದಾಗಿದೆ.

ಕೊನೇ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಇವೆರೆಡೂ ಕ್ಷೇತ್ರಗಳಿಗೆ ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಹಾಗೂ ಅಮೇಥಿಗೆ ಕಿಶೋರ್‌ ಲಾಲ್‌ ಶರ್ಮಾ ಅವರ ಹೆಸರನ್ನು ಪ್ರಕಟಿಸಲಾಯಿತು.

ರಾಯ್‌ ಬರೇಲಿಯಿಂದ ಕಳೆದ 2 ದಶಕಗಳಿಂದ ಸೋನಿಯಾ ಗಾಂಧಿ ಗೆಲುವು ಸಾಧಿಸಿದ್ದರೆ, 2004ರಿಂದ 2019ರವರೆಗೆ ಅಮೇಥಿಯಲ್ಲಿ ರಾಹುಲ್‌ ಗಾಂಧಿ ಜಯಗಳಿಸಿದ್ದರು. ಮತದಾನ ಮುಗಿಯುವವರೆಗೂ ಇವೆರೆಡೂ ಕ್ಷೇತ್ರಗಳಲ್ಲಿ ಉಳಿದುಕೊಳ್ಳಲು ಪ್ರಿಯಾಂಕಾ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...