ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಬದಲಾಯಿಸಿ ಡೀಪ್‌ಫೇಕ್ (Deepfake) ಚಿತ್ರಗಳನ್ನು ಹರಡಿದ್ದ ಪ್ರಕರಣಕ್ಕೆ ಸಂಬಂಧಿಸಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಆಕ್ಷೇಪಾರ್ಹ ಚಿತ್ರಗಳನ್ನು 24 ಗಂಟೆಗಳ ಒಳಗೆ ತಕ್ಷಣವೇ ತೆರವುಗೊಳಿಸುವಂತೆ ಮೆಟಾ ಸಂಸ್ಥೆಗೆ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.

- Advertisement -

ಅಲ್ಲದೆ, ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕಾಕರೂಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಭಿಜೀತ್ ದೀಪ್ಕೆ, ಅಶುತೋಷ್ ರಾಂಕಾ, ರತ್ನ ಸಿಂಗ್ ಹಾಗೂ ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. 25 ವರ್ಷದ ಸಂತ್ರಸ್ತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗಿರೀಶ್ ಕಥ್‌ಪಾಲಿಯಾ ಅವರ ಪೀಠ ಈ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಇತ್ತೀಚೆಗೆ ಜಂತರ್ ಮಂತರ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತನ್ನ ವೈಯಕ್ತಿಕ ಫೋಟೋವನ್ನು ಅನುಮತಿಯಿಲ್ಲದೆ ಪಡೆದು, AI ಫೇಸ್-ಸ್ವಾಪಿಂಗ್ ಉಪಕರಣಗಳ ಮೂಲಕ ಪ್ರಧಾನಿ ಮೋದಿಯವರೊಂದಿಗೆ ವಿಕೃತವಾಗಿ ಹಾಗೂ ಅಶ್ಲೀಲವಾಗಿ ಬಿಂಬಿಸಿ ಬ್ಯಾನರ್‌ಗಳನ್ನು ಪ್ರದರ್ಶಿಸಲಾಗಿತ್ತು ಎಂದು ಮಹಿಳೆ ಆರೋಪಿಸಿದ್ದಾರೆ.

ಜತೆಗೆ, ಈ ಚಿತ್ರಗಳನ್ನು ಇನ್‌ಸ್ಟಾಗ್ರಾಮ್ ಹಾಗೂ ವಿವಿಧ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡಲಾಗಿದ್ದು, ತನಗೆ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಕೋರ್ಟ್‌ಗೆ ತಿಳಿಸಿದ್ದರು.

ವಿಚಾರಣೆ ವೇಳೆ ಗರಂ ಆದ ನ್ಯಾಯಪೀಠ, “ಇದು ಕೇವಲ ಒಬ್ಬ ಮಹಿಳೆಯ ಗೌರವದ ವಿಚಾರವಲ್ಲ, ಬದಲಿಗೆ ದೇಶದ ಪ್ರಧಾನಮಂತ್ರಿಯವರಿಗೆ ಸಂಬಂಧಿಸಿದ ಗಂಭೀರ ವಿಚಾರ. ಈ ವಿಷಯದಲ್ಲಿ ಸಂಬಂಧಪಟ್ಟವರು ಸ್ಪಂದಿಸದಿದ್ದರೆ ಅಥವಾ ಸಂವೇದನಾಶೀಲರಾಗಿರದಿದ್ದರೆ, ಅವರನ್ನು ಹೇಗೆ ಸಂವೇದನಾಶೀಲರನ್ನಾಗಿ ಮಾಡಬೇಕೆಂದು ನ್ಯಾಯಾಲಯಕ್ಕೆ ತಿಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿತು.

“ಜೀವ ಬೆದರಿಕೆ ಎದುರಿಸುತ್ತಿರುವ ಸಂತ್ರಸ್ತೆಗೆ ದೆಹಲಿ ಪೊಲೀಸರು ತಕ್ಷಣವೇ ಸಂಪೂರ್ಣ ಭದ್ರತೆ ಒದಗಿಸಬೇಕು. ದೆಹಲಿ ಸೈಬರ್ ಪೊಲೀಸರು ಈಗಾಗಲೇ ದಾಖಲಾಗಿರುವ ಎಫ್‌ಐಆರ್ ಆಧಾರದ ಮೇಲೆ ಕೈಗೊಂಡಿರುವ ತನಿಖೆಯ ಪ್ರಗತಿಯ ಬಗ್ಗೆ ಒಂದು ವಾರದ ಒಳಗೆ ಸ್ಥಿತಿ ವರದಿ ಸಲ್ಲಿಸಬೇಕು. ಸಾಮಾಜಿಕ ಜಾಲತಾಣಗಳಿಂದ ಎಲ್ಲಾ ಆಕ್ಷೇಪಾರ್ಹ ಲಿಂಕ್‌ಗಳು ಹಾಗೂ ಫೋಟೋಗಳನ್ನು ತಕ್ಷಣ ಬ್ಲಾಕ್ ಮಾಡಬೇಕು” ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಸಂತ್ರಸ್ತೆ ಪರ ವಾದ ಮಂಡಿಸಿದ ವಕೀಲ ಉಮೇಶ್ ಶರ್ಮಾ, FIR ದಾಖಲಾಗಿದ್ದರೂ ಸೈಬರ್ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಹಾಗೂ ಲಿಂಕ್‌ಗಳನ್ನು ಬ್ಲಾಕ್ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕಲಿಕೆ ಪ್ರತ್ಯೇಕ ವಿಷಯವಾಗದೆ; ತೃತೀಯ ಭಾಷೆಗೆ ಪರ್ಯಾಯವಾಗಿ ಬೇಕೆ! ತಜ್ಞರು ಹೇಳುವುದೇನು?

NSQF ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ವೃತ್ತಿಪರ AI ವಿಷಯವನ್ನು ಆಯ್ಕೆ ಮಾಡಿಕೊಂಡರೆ,...

ಸಿಇಸಿ ರಾಜೀನಾಮೆಗೆ ಬಿಗಿಪಟ್ಟು: ಜಂತರ್ ಮಂತರ್ ಭದ್ರಕೋಟೆ, ಅಸ್ಸಾಂನಲ್ಲಿ ಗೌರವ್ ಗೊಗೊಯ್ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...

ಪ್ರಧಾನಿಗಳು ರೈತರ ಆದಾಯ ಡಬಲ್ ಮಾಡಲಿಲ್ಲ; ಯುದ್ಧ ನಡೆಯುತ್ತಿದ್ದಾಗಲೂ ರೈತರು ವಿಶ್ರಾಂತಿ ಪಡೆಯಲಿಲ್ಲ-ಸಿಎಂ

ಪ್ರಧಾನಿ ದೇಶವನ್ನು, ಮುಖ್ಯಮಂತ್ರಿ ರಾಜ್ಯವನ್ನು ಹಾಗೂ ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದರೆ, ರೈತ...