ನಾಸಿಕ್‌ನಲ್ಲಿ ದೇವಸ್ಥಾನವನ್ನು ಸ್ವಚ್ಛಗೊಳಿಸಿದ ಪ್ರಧಾನಿ ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಮುಂಬೈನಲ್ಲಿ 21.8 ಕಿ.ಮೀ ಉದ್ದದ ಭಾರತದ ಅತೀ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೂ ಮುನ್ನ ನಾಸಿಕ್‌ನ ಕಲಾರಾಂ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

- Advertisement -

ಕಲಾರಾಂ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಸಂತ ಏಕನಾಥ್ ರಚಿಸಿದ ಮರಾಠಿ ಕವಿತೆ ಭಾವಾರ್ಥ ರಾಮಾಯಣವನ್ನು ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಿಂದಿನ ದಿನ ನರೇಂದ್ರ ಮೋದಿ ನಾಸಿಕ್‌ನಲ್ಲಿ ಜನವರಿ 11 ರಂದು ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ನಂತರ ನಾಸಿಕ್‌ನಲ್ಲಿನ ತಪೋವನ ಮೈದಾನದಲ್ಲಿ ನಡೆದ ರಾಷ್ಟ್ರೀಯ ಯುವ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೂ ಮುನ್ನ ದೇಶಾದ್ಯಂತವಿರುವ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಅಭಿಯಾನ ಹಮ್ಮಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ದಿನದಂದು ದೇಶಾದ್ಯಂತವಿರುವ ದೇಗುಲಗಳು ಹಾಗೂ ಪುಣ್ಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕೆಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಭಾರತವು ಯುವಕರಿಂದಾಗಿ ವಿಶ್ವದ ಮೊದಲ ಐದು ಆರ್ಥಿಕ ರಾಷ್ಟ್ರಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಸ್ಟಾರ್ಟ್‌ಪ್ ಕಂಪನಿಗಳಲ್ಲಿಯು ಸಹ ಪ್ರಮುಖ ಮೂರು ಸ್ಥಾನಗಳಲ್ಲಿ ಒಂದಾಗಿದೆ. ಭಾರತವು ನೂತನ ಆವಿಷ್ಕಾರಗಳನ್ನು ಸಹ ಕೈಗೊಳ್ಳುತ್ತಿದೆ. ಪೆಟೆಂಟ್‌ ಪಡೆದುಕೊಳ್ಳುವುದರಲ್ಲಿಯೂ ಭಾರತವು ಮುಂದಿದೆ. ದೇಶದ ಇವೆಲ್ಲ ಸಾಧನೆಗಳ ಹಿಂದೆ ಯುವಕರಿದ್ದಾರೆ. ಈ ಕಾರಣದಿಂದ ಅಮೃತ ಕಾಲ ದೇಶದ ಯುವಕರಿಗೆ ಸುವರ್ಣಯುಗ” ಎಂದು ಮೋದಿ ಬಣ್ಣಿಸಿದರು.

“ಇಂದು ದೇಶದ ಯುವಶಕ್ತಿಯ ದಿನ. ಗುಲಾಮಗಿರಿ ದಿನಗಳಿಂದ ದೇಶಕ್ಕೆ ಹೊಸ ಶಕ್ತಿ ತುಂಬಿದ ಮಹಾನ್‌ ನಾಯಕನಿಗೆ ಈ ದಿನವನ್ನು ಸಮರ್ಪಿಸಲಾಗಿದೆ. ನಾನು ಆ ಮಹಾನ್ ನಾಯಕ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಆಗಮಿಸಿರುವುದಕ್ಕೆ ಸಂತೋಷವಾಗಿದೆ. ರಾಷ್ಟ್ರೀಯ ಯುವ ದಿನಕ್ಕಾಗಿ ನಾನು ಶುಭ ಕೋರುತ್ತಾನೆ. ಇಂದು ಭಾರತದ ನಾರಿ ಶಕ್ತಿಯ ಸಂಕೇತವಾದ ರಾಜ ಮಾತೆ ಜೀಜಾ ಬಾಯಿ ಅವರ ಜನ್ಮ ಮಹೋತ್ಸವ ದಿನವಾಗಿದೆ” ಎಂದು ಪ್ರಧಾನಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...