ಮುಸ್ಲಿಮರಿಗೆ ಶೇ.15 ರಷ್ಟು ಹಣ ಮೀಸಲು ಎಂಬ ಪ್ರಧಾನಿ ಹೇಳಿಕೆ ಮೂರ್ಖತನದ್ದು: ಶರದ್ ಪವಾರ್

Date:

ಬಜೆಟ್‌ನಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್‌ನವರು ಶೇ.15 ರಷ್ಟು ಹಣ ನೀಡಲು ಬಯಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನದಿಂದ ಕೂಡಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ಯಾವುದೇ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಒಳಗೊಂಡಿರುವುದಿಲ್ಲ. ಬಜೆಟ್‌ಅನ್ನು ಯಾವುದೇ ಧರ್ಮ ಹಾಗೂ ಜಾತಿಯ ಆಧಾರದ ಮೇಲೆ ಮಂಜೂರು ಮಾಡಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಮೋದಿ ಅವರು ಶೇ.1 ರಷ್ಟು ನಿಜವನ್ನು ಹೇಳಿಲ್ಲ. ಅವರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೋದಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷಿಯ ಅಭಿವೃದ್ಧಿಯ ಬಗ್ಗೆ ಆಸಕ್ತಿ ಹೊಂದಿದ್ದರು. ಆದರೆ ಈಗ ಕೇವಲ ರಾಜಕೀಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಜನರು ಬದಲಾವಣೆ ಬಯಸಿದ್ದಾರೆ. ಅದು ಲೋಕಸಭಾ ಚುನಾವಣೆಯ ಬಳಿಕ ತಿಳಿಯಲಿದೆ ಎಂದು ಶರದ್‌ ಪವಾರ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಇತ್ತೀಚಿಗೆ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಹಿಂದಿನ ಕಾಂಗ್ರೆಸ್ ಆಡಳಿತದ ಬಜೆಟ್‌ನಲ್ಲಿ ಶೇ.15 ರಷ್ಟು ಹಣವನ್ನು ಮುಸ್ಲಿಮರಿಗೆ ನೀಡಲು ಬಯಸಿದ್ದರು. ಆದರೆ ನಾವು ಧರ್ಮದ ಆಧಾರದ ಮೇಲೆ ಬಜೆಟ್‌ನ ಹಣವನ್ನು ಮೀಸಲಿಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದರು.

ಮೇ. 20 ರಂದು ಮಹಾರಾಷ್ಟ್ರದ 13 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೋದಿ ಇಲ್ಲಿನ ಕೆಲವು ಪ್ರದೇಶಗಳಲ್ಲಿ ಪ್ರಚಾರ ಹಮ್ಮಿಕೊಳ್ಳಲಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 48 ಲೋಕಸಭಾ ಕ್ಷೇತ್ರಗಳಿದ್ದು, 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ 4 ಹಂತಗಳಲ್ಲಿ 35 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ.20 ರಂದು ಕೊನೆಯ ಹಂತದ ಚುನಾವಣೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...