33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ವಿಕೃತ ದಂಪತಿಗೆ ಮರಣದಂಡನೆ

Date:

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ಚಿತ್ರೀಕರಿಸಿ, ವಿಡಿಯೋಗಳನ್ನು ‘ಪೋರ್ನ್’ ವೆಬ್‌ಸೈಟ್‌ನಲ್ಲಿ ಹರಿಬಿಟ್ಟಿದ್ದ ವಿಕೃತ ದಂಪತಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

- Advertisement -

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಈ ಐತಿಹಾಸಿಕ ತೀರ್ಪು ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಆರು ವರ್ಷಗಳ ಹಿಂದೆ ಚಿತ್ರಕೂಟ ಪ್ರದೇಶದಲ್ಲಿ 33 ಮಕ್ಕಳನ್ನು ಅಪಹರಣ ಮಾಡಿ ದೌರ್ಜನ್ಯ ಎಸಗಿದ್ದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪು ಪ್ರಕಟಿಸಿದೆ. ನೀರಾವರಿ ಇಲಾಖೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿದ್ದ ರಾಮ್ ಭವನ್ ಮತ್ತು ಆತನ ಪತ್ನಿ ದುರ್ಗಾವತಿಗೆ ಮರಣದಂಡನೆ ವಿಧಿಸಿದೆ.

ಬಂದಾ, ಚಿತ್ರಕೂಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ 2020ರ ಅಕ್ಟೋಬರ್‌ನಲ್ಲಿ ಆಪಾದಿತ ದಂಪತಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಆರೋಪಿಗಳು 5ರಿಂದ 16 ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು, ದೌರ್ಜನ್ಯ ಎಸಗಿದ್ದಾರೆ. ಕೃತ್ಯವನ್ನು ಚಿತ್ರೀಕರಿಸಿ, ಹರಿಬಿಟ್ಟಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು.

ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಾಲಯವು ವಿಕೃತ ದಂಪತಿಗಳಿಗೆ ಮರಣದಂಡನೆ ವಿಧಿಸಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...