ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಾಗೀರಥ್ ಸಾಯಿ ಅವರ ವಿರುದ್ಧ ಹೈದರಾಬಾದ್‌ನಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ಭಾಗೀರಥ್ ಅವರು ಈ ಆರೋಪಗಳನ್ನು ನಿರಾಕರಿಸಿದ್ದು, ಬಾಲಕಿ ಮತ್ತು ಅವಳ ಪೋಷಕರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.
ಮೊಯಿನಾಬಾದ್‌ನ ಫಾರ್ಮ್ ಹೌಸ್ ಒಂದರಲ್ಲಿ ಕಳೆದ ಡಿಸೆಂಬರ್ 31ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಆರೋಪಿ ಮತ್ತು ಬಾಲಕಿ ಕಳೆದ ಕೆಲವು ತಿಂಗಳುಗಳಿಂದ ಪರಿಚಯದಲ್ಲಿದ್ದರು ಎನ್ನಲಾಗಿದೆ.
ಇದನ್ನು ಓದಿದ್ದೀರಾ? ತೆಲುಗು ಸಿನಿಮಾಗಳನ್ನು ‘ರಾಜಕೀಯ ಅಸ್ತ್ರ’ವಾಗಿ ಬಳಸುತ್ತಿರುವ ಬಿಜೆಪಿ; ಟಾಲಿವುಡ್‌ಗೆ ಹಿಂದುತ್ವದ ಲೇಪನ
ಈ ಸಂಬಂಧ ಹೈದರಾಬಾದ್‌ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಆದರೆ ಭಾಗೀರಥ್ ಈ ಆರೋಪಗಳನ್ನು ನಿರಾಕರಿಸಿದ್ದು, ಬಾಲಕಿ ಮತ್ತು ಅವಳ ಪೋಷಕರ ವಿರುದ್ಧ ಕರಿಂನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. “ನನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದು, ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಬಾರದೆಂದಾರೆ ₹5 ಕೋಟಿ ಹಣ ನೀಡಬೇಕು ಎಂದು ಬೆದರಿಕೆ ಹಾಕುತ್ತಿದ್ದರು” ಎಂದು ದೂರಿದ್ದಾರೆ.




