ರಾಜಿ ಮಾಡಿಕೊಂಡರೂ ಪೋಕ್ಸೋ ಪ್ರಕರಣ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Date:

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧಗಳನ್ನು ಕೇವಲ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿ ಆಧಾರದ ಮೇಲೆ ರದ್ದುಗೊಳಿಸಲಾಗುವುದಿಲ್ಲ ಎಂದು ಹೇಳಿದೆ.

- Advertisement -

ಪೋಕ್ಸೋ ಕಾಯಿದೆಯಡಿ ಆರೋಪಿಯಾಗಿರುವ ಸಂಜೀವ್ ಕುಮಾರ್ ಎಂಬಾತ ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸಮಿತ್ ಗೋಪಾಲ್ ವಜಾಗೊಳಿಸಿದ್ದಾರೆ. “ಅಪರಾಧದಲ್ಲಿ ಸಂತ್ರಸ್ತೆಯ ಒಪ್ಪಿಗೆ ಇರಲಿಲ್ಲ. ಹೀಗಿರುವಾಗ, ರಾಜಿ ಕೂಡ ಇನ್ನೂ ಅಪ್ರಸ್ತುತವಾಗಿರುತ್ತದೆ. ಅಪ್ರಾಪ್ತ ಸಂತ್ರಸ್ತೆಯು ಅರ್ಜಿದಾರರೊಂದಿಗೆ (ಆರೋಪಿ) ರಾಜಿ ಮಾಡಿಕೊಳ್ಳಲು ಒಪ್ಪಿಕೊಂಡಿರುವುದು ಮಾತ್ರವೇ, ಪೋಕ್ಸೋ ಕಾಯಿದೆಯಡಿ ವಿಚಾರಣೆಯನ್ನು ರದ್ದುಗೊಳಿಸಲು ಸಾಕಾಗುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಆರೋಪಿ ವಿರುದ್ಧ ಅಜಂಗಢ್ ಜಿಲ್ಲೆಯ ಬಿಲಾರಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 376 (ಅತ್ಯಾಚಾರ), 313 (ಮಹಿಳೆಯರ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್‌ 3/4  ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಪೊಲೀಸರು ತನಿಖೆ ನಡೆಸಿ, ಜಾರ್ಜ್‌ಶೀಟ್‌ ಸಲ್ಲಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗೆ ಸಮನ್ಸ್‌ ನೀಡಲಾಗಿತ್ತು. ಈ ಬಳಿಕ, ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಆದರೂ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಉಳಿದಿದೆ. ಪ್ರಕರಣವನ್ನು ರದ್ದುಗೊಳಿಸಬೇಕೆಂದು ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ಮನವಿಯನ್ನು ವಿರೋಧಿಸಿದ ರಾಜ್ಯದ ವಕೀಲರು, “ಆರೋಪಿಯ ವಿರುದ್ಧದ ಆರೋಪಗಳು – ಮೂರು ವರ್ಷಗಳ ಅವಧಿಯಲ್ಲಿ ಬಾಲಕಿಯನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗಿಸಿವೆ. ಅಪರಾಧ ನಡೆದಾಗ ಸಂತ್ರಸ್ತೆಗೆ 15 ವರ್ಷ ವಯಸ್ಸಾಗಿತ್ತು. ಘಟನೆಗಳ ಸಮಯದಲ್ಲಿ ಸಂತ್ರಸ್ತೆ ಅಪ್ರಾಪ್ತ ವಯಸ್ಸಿನವನಾಗಿದ್ದರಿಂದ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ತನಿಖೆ ವೇಳೆ ಆರೋಪಿ ವಿರುದ್ಧ ಪ್ರಾಥಮಿಕ ಅಪರಾಧ ಸಾಬೀತಾಗಿದೆ. ಹೀಗಾಗಿ, ವಿಚಾರಣಾ ನ್ಯಾಯಾಲಯವು ಅವನಿಗೆ ಸಮನ್ಸ್ ನೀಡಿತ್ತು. ಈ ರೀತಿಯ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಬೇಕು” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ. ಪೋಕ್ಸೋ ಪ್ರಕರಣಗಳಲ್ಲಿ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿಯ ಕಾರಣಕ್ಕೆ, ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...