ಪೋಕ್ಸೋ ಪ್ರಕರಣ | ಬಿಜೆಪಿ ನಾಯಕ, ಕೇಂದ್ರ ಸಚಿವನ ಮಗನ ವಿರುದ್ಧ ‘ಲುಕ್‌ ಔಟ್‌’ ನೋಟಿಸ್‌ ಜಾರಿ

Date:

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಸಾಯಿ ಭಗೀರಥ್ ವಿರುದ್ಧ ತೆಲಂಗಾಣ ಪೊಲೀಸರು ಲುಕ್‌ ಔಟ್ ನೋಟಿಸ್‌ ಹೊರಡಿಸಿದ್ದಾರೆ. ಆರೋಪಿ ಭಗೀರತ್ ದೇಶ ಬಿಟ್ಟು ಪಲಾಯನ ಮಾಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕರಣದ ವಿಶೇಷ ತನಿಖಾಧಿಕಾರಿ, ಕೂಕಟ್‌ಪಲ್ಲಿಯ ಡಿಸಿಪಿ ರಿತಿರಾಜ್ ತಿಳಿಸಿದ್ದಾರೆ.

- Advertisement -

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕೇಂದ್ರ ಸಚಿವರ ಪುತ್ರ ಭಗೀರತ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ, ಆರೋಪಿ ತಲೆಮರೆಸಿಕೊಂಡಿದ್ದಾರೆ. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲಾಗಿದ್ದು, ತನಿಖಾಧಿಕಾರಿಗಳು ಆರೋಪಿಯ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇತ್ತೀಚೆಗೆ, ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಭಗೀರಥ್ ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಬೆನ್ನಲೇ, ಎಸ್‌ಐಟಿ ಪೊಲೀಸರು ಕರಿಮ್‌ನಗರದಲ್ಲಿರುವ ಸಚಿವ ಸಂಜಯ್ ಕುಮಾರ್ ಅವರ ನಿವಾಸ, ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅವರ ಸಂಬಂಧಿಕರ ಮನೆ ಹಾಗೂ ಯೂಸುಫ್‌ಗುಡಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

ದೂರಿನ ವಿವರಗಳ ಪ್ರಕಾರ, 2025ರ ಜೂನ್ ತಿಂಗಳಿನಲ್ಲಿ ಸ್ನೇಹಿತರ ಮೂಲಕ ಪರಿಚಯವಾಗಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ, ಅದೇ ವರ್ಷದ ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ಭಗೀರಥ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿ ಮೇಲಿನ ದೌರ್ಜನ್ಯ ಕುರಿತು ಸಂತ್ರಸ್ತೆಯ ತಾಯಿ ಮೇ 8 ರಂದು ಪೆಟ್‌ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಭಗೀರಥ್ ತಮ್ಮ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಭಗೀರಥ್ ಆಕೆಯನ್ನು ಇಡೀ ಕೂಡಿಹಾಕಿ ಆಕೆಯ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದ ನಿರ್ಧಾರಗಳನ್ನೂ ತಾನೇ ನಿಯಂತ್ರಿಸುತ್ತಿದ್ದ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...