ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ: ಬಿಜೆಪಿ ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Date:

ತಾನು ಅಪ್ರಾಪ್ತ ವಯಸ್ಸಿನವಳಿದ್ದಾಗ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿಯೊಬ್ಬರು ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲಿಸಿದ್ದಾರೆ. ಹಿಮಾಚಲಪ್ರದೇಶದ ಬಿಜೆಪಿ ಶಾಸಕ ಹಂಸರಾಜ್ ವಿರುದ್ಧ ಯುವತಿ ಆರೋಪ ಮಾಡಿದ್ದು, ಪೊಲೀಸರು ಶಾಸಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

- Advertisement -

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ವಿಧಾನಸಭಾ ಕ್ಷೇತ್ರದ ಶಾಸಕ ಹಂಸರಾಜ್ ವಿರುದ್ಧ ಚಂಬಾದ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಆಕೆಯ ದೂರು ಆಧರಿಸಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು ಬಿಎನ್‌ಎಸ್‌ ಸೆಕ್ಷನ್ 69ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೂರುದಾರ ಯುವತಿ ಕಳೆದ ವಾರ ಫೇಸ್‌ಬುಕ್‌ ಲೈವ್‌ನಲ್ಲಿ ಮೊದಲ ಬಾರಿಗೆ ಶಾಸಕನ ವಿರುದ್ಧ ಆರೋಪ ಮಾಡಿದ್ದರು. ಶಾಸಕ ಹಂಸರಾಜ್ ಮತ್ತು ಅವರ ಸಹಾಯಕರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಬೆದರಿಕೆ ಹಾಕಿದ್ದಾರೆ. ಕನ್ನ ಕುಟುಂಬಕ್ಕೆ ಪ್ರಾಣಾಪಾಯವಿದೆ ಎಂದು ಆರೋಪಿಸಿದ್ದರು. ಅತ ಆರೋಪಗಳಿಗೆ ಸಂಬಂಧಿಸಿದಂತೆ ಹಲವು ಪುರಾವೆಗಳು ಇರುವುದಾಗಿಯೂ ಹೇಳಿಕೊಂಡಿದ್ದರು.

ಇದೀಗ, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶನಿವಾರ, ಸುದ್ದಿಗಾರರೊಂದಿಗೆ ಮಾತನಾಡಿದ್ದ ಯುವತಿಯ ತಂದೆ, “ಬಿಜೆಪಿ ಶಾಸಕ ಹಂಸರಾಜ್ ಹಾಗೂ ಅವರ ಸಹಚರರಾದ ಲೇಖರಾಜ್, ಸಂಗಡಿಗ ಮುನಿಯಾನ್ ಖಾನ್ ಸಹಾಯಕರು ತಮ್ಮನ್ನು ಅಪಹರಿಸಿದ್ದರು. ತನ್ನ ಮೊಬೈಲ್ ಪೋನ್‌ಗಳನ್ನು ಮುರಿದುಹಾಕಿದ್ದಾರೆ. ಅಲ್ಲದೆ, ಪ್ರಕರಣವನ್ನು ಹಿಂಪಡೆಯದೆ ಇದ್ದಲ್ಲಿ ಮನೆಗೆ ಬೆಂಕಿಹಚ್ಚುವುದಾಗಿಯೂ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್‌ ಅಧಿಕಾರಿ, “ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ದಾಖಲಿಸಿಕೊಳ್ಳಲಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...