ಕೇರಳ | ಉದುಮದಲ್ಲಿ ಯುಡಿಎಫ್ ಚುನಾವಣಾ ಏಜೆಂಟ್‌ ಬಂಧನ

Date:

ಮತಗಟ್ಟೆಯೊಂದರಲ್ಲಿ ಕ್ಯಾಮೆರಾ ಅಳವಡಿಸಿದ ಕನ್ನಡಕ ಬಳಸಿ ಚುನಾವಣಾ ಪ್ರಕ್ರಿಯೆಗಳನ್ನು ರೆಕಾರ್ಡ್ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ ಕಾಸರಗೋಡಿನ ಉದುಮದ ಯುಡಿಎಫ್ ಅಭ್ಯರ್ಥಿಯ ಪ್ರಮುಖ ಚುನಾವಣಾ ಏಜೆಂಟ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

- Advertisement -

ಕೇರಳದಲ್ಲಿಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವಕೀಲ ಮತ್ತು ಯುಡಿಎಫ್ ಅಭ್ಯರ್ಥಿ ಕೆ. ನೀಲಕಂಠನ್ ಅವರ ಮುಖ್ಯ ಚುನಾವಣಾ ಏಜೆಂಟ್ ಬಿ.ಎಂ. ಜಮಾಲ್ ಚುನಾವಣಾ ಪ್ರಕ್ರಿಯೆಯನ್ನು ರೆಕಾರ್ಡ್ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬೇಕಲ್ ಇಸ್ಲಾಮಿಕ್ ಎಎಲ್‌ಪಿ ಶಾಲೆಯ ಮತಗಟ್ಟೆಯಲ್ಲಿ ಪೊಲೀಸರು ಜಮಾಲ್‌ನ ಬಂಧನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಕೇರಳ | ಯುಡಿಎಫ್-ಎಲ್‌ಡಿಎಫ್ ಜಿದ್ದಾಜಿದ್ದಿನ ಸ್ಪರ್ಧೆ: ನಾಲ್ಕೈದು ಸ್ಥಾನ ಪಡೆಯಲೂ ಬಿಜೆಪಿ ಹರಸಾಹಸ

ಮತಗಟ್ಟೆಯೊಳಗೆ ಜಮಾಲ್ ಅಸಹಜವಾದ ಕನ್ನಡಕ ಧರಿಸಿದ್ದರು. ಇದರಿಂದ ಅನುಮಾನ ಉಂಟಾಯಿತು. ನಂತರ ತಪಾಸಣೆ ಮಾಡಿದಾಗ ಕನ್ನಡಕದಲ್ಲಿ ಕ್ಯಾಮೆರಾ ಇರುವುದು ತಿಳಿದುಬಂದಿದೆ ಎಂದು ಕರ್ತವ್ಯದಲ್ಲಿದ್ದ ಅಧಿಕಾರಿಗಳು ತಿಳಿಸಿದರುವುದಾಗಿ ವರದಿಯಾಗಿದೆ.

ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, ಕನ್ನಡಕವನ್ನು ವಶಪಡಿಸಿಕೊಂಡಿದ್ದಾರೆ. ಹಾಗೆಯೆ ಆವರಣದಿಂದ ಜಮಾಲ್‌ನನ್ನು ಹೊರ ಕರೆದೊಯ್ದಿದ್ದಾರೆ. ಮತದಾನ ಪ್ರಕ್ರಿಯೆಯ ಗೌಪ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತಂದ ಆರೋಪದಲ್ಲಿ ಬಂಧಿಸಿದ್ದಾರೆ. ಮತಗಟ್ಟೆಗಳ ಒಳಗೆ ರೆಕಾರ್ಡಿಂಗ್ ಸಾಧನಗಳನ್ನು ಬಳಸುವುದನ್ನು ಚುನಾವಣಾ ನಿಯಮಗಳ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇರಳದಲ್ಲಿ ಒಟ್ಟು 140 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಮೇ 4ರಂದು ಫಲಿತಾಂಶ ಹೊರಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...