ಕೋರ್ಟ್, ಪೊಲೀಸರ ಎಡವಟ್ಟು: ಬೇರೆ ಪ್ರಕರಣ ಆಧರಿಸಿ ಶಿಕ್ಷೆ; 14 ವರ್ಷ ಜೈಲಿನಲ್ಲಿ ಕಳೆದ ಇಬ್ಬರು ಅಮಾಯಕರು!

Date:

ಮಧ್ಯಪ್ರದೇಶ ಪೊಲೀಸರು ಮತ್ತು ಕೋರ್ಟ್ ಮಾಡಿದ ಎಡವಟ್ಟಿನಿಂದಾಗಿ ಇಬ್ಬರು ಅಮಾಯಕರು 14 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಿದೆ. ಬೇರೆ ಪ್ರಕರಣದ ವರದಿ ಆಧರಿಸಿ ಶಿಕ್ಷೆ ನೀಡಿದ 14 ವರ್ಷದ ಬಳಿಕ ಸತ್ಯಾಂಶ ಹೊರಬಿದ್ದಿದ್ದು, ಸದ್ಯ ಅಮಾಯಕರಿಗೆ ಆದ ನಷ್ಟವನ್ನು ಭರಿಸುವವರು ಯಾರು, ಕಳೆದು ಹೋದ 14 ವರ್ಷಗಳನ್ನು ಮರಳಿ ಕೊಡುವವರು ಯಾರು ಎಂಬ ಪ್ರಶ್ನೆ ನೆಟ್ಟಿಗರದ್ದು.

- Advertisement -

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ತುಳಸಿರಾಮ್ ರಾಜ್‌ಪಾಲ್ ಹಾಗೂ ಹರ್‌ಪ್ರಸಾದ್ ಎಂಬ ಇಬ್ಬರು ವ್ಯಕ್ತಿಗಳು ಕೊಲೆ ಪ್ರಕರಣವೊಂದರಲ್ಲಿ 14 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ನಂತರ, ಮಧ್ಯಪ್ರದೇಶ ಹೈಕೋರ್ಟ್‌ ಅವರನ್ನು ನಿರ್ದೋಷಿಗಳೆಂದು ಖುಲಾಸೆಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸಿದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಇದನ್ನೂ ಓದಿ: ದೆಹಲಿ ಗಲಭೆ ಸಮಯದಲ್ಲಿ ನನ್ನ ಮಗ ದೆಹಲಿಯಲ್ಲಿ ಇರಲಿಲ್ಲ: ಉಮರ್ ಖಾಲಿದ್ ತಂದೆ

ವಿಚಾರಣಾ ನ್ಯಾಯಾಲಯವು ಆಧಾರವಾಗಿಟ್ಟುಕೊಂಡ ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಯು ಸಂಪೂರ್ಣವಾಗಿ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ್ದು ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ.

ಏನಿದು ಪ್ರಕರಣ, ಎಡವಟ್ಟು ಆಗಿದ್ದು ಎಲ್ಲಿ?

2009ರ ಆಗಸ್ಟ್ 25ರಂದು ಪ್ಯಾರೇಲಾಲ್ ಗಾಡರಿಯಾ ಎಂಬುವವರ ಮೇಲೆ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಈ ಇಬ್ಬರನ್ನು ಬಂಧಿಸಲಾಗಿತ್ತು. ದಾಮೋಹ್‌ನ ವಿಶೇಷ ಸೆಷನ್ಸ್ ನ್ಯಾಯಾಲಯವು 2012ರ ಜೂನ್ 29ರಂದು ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಹೈಕೋರ್ಟ್‌ ಮೇಲ್ಮನವಿಯ ವಿಚಾರಣೆ ನಡೆಸುವಾಗ, ಪ್ರಕರಣದಲ್ಲಿ ಸಲ್ಲಿಸಲಾದ ಎಫ್‌ಎಸ್‌ಎಲ್ ವರದಿಯು ಸಂಪೂರ್ಣವಾಗಿ ಬೇರೊಂದು ಪ್ರಕರಣದ ಆರೋಪಿಗಳು, ಆಯುಧಗಳು ಮತ್ತು ಸಂತ್ರಸ್ತರಿಗೆ ಸಂಬಂಧಿಸಿದ್ದು ಎಂಬುದು ಬೆಳಕಿಗೆ ಬಂದಿದೆ. ಈ ಗಂಭೀರ ತಪ್ಪನ್ನು ವಿಚಾರಣೆಯ ಸಮಯದಲ್ಲಿ ಪ್ರಾಸಿಕ್ಯೂಷನ್ ಅಥವಾ ವಿಚಾರಣಾ ನ್ಯಾಯಾಲಯ ಗಮನಿಸದೆ ಶಿಕ್ಷೆ ಪ್ರಕಟಿಸಿತ್ತು.

ಪ್ರಕರಣದ ಎಫ್‌ಐಆರ್ ಬರೆದ ಪೊಲೀಸ್ ಸಿಬ್ಬಂದಿ ಯಾರೆಂಬುದನ್ನು ತನಿಖಾಧಿಕಾರಿಯೇ ಗುರುತಿಸಲು ಸಾಧ್ಯವಾಗಿರಲಿಲ್ಲ. ಸಂತ್ರಸ್ತ ಪ್ಯಾರೇಲಾಲ್ ಮೃತಪಟ್ಟ ನಂತರವೇ ಆತನ ಹೆಬ್ಬೆರಳ ಗುರುತನ್ನು ಎಫ್‌ಐಆರ್ ಮೇಲೆ ಒತ್ತಲಾಗಿದೆ ಎಂಬ ಅನುಮಾನವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ವಿವೇಕ್ ಅಗರ್ವಾಲ್ ಹಾಗೂ ಅವನೀಂದ್ರ ಕುಮಾರ್ ಸಿಂಗ್ ಅವರಿದ್ದ ಪೀಠವು ವಿಚಾರಣಾ ನ್ಯಾಯಾಲಯದ ಈ ನಿರ್ಲಕ್ಷ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ

“ತನಿಖೆಯಲ್ಲಿನ ಗಂಭೀರ ಲೋಪಗಳು ಮತ್ತು ಆಧಾರರಹಿತ ಸಾಕ್ಷ್ಯಗಳಿಂದಾಗಿ ಈ ಶಿಕ್ಷೆಯನ್ನು ಕಾಯ್ದುಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ ಪೀಠವು, ಕೀಳುಮಟ್ಟದ ತನಿಖೆಯಿಂದಾಗಿ ಇಬ್ಬರು ಅಮಾಯಕರು ತಮ್ಮ ಜೀವನದ 14 ಅತ್ಯಮೂಲ್ಯ ವರ್ಷಗಳನ್ನು ಜೈಲಿನಲ್ಲಿ ಕಳೆಯುವಂತಾಯಿತು ಎಂದು ಕಳವಳ ವ್ಯಕ್ತಪಡಿಸಿ ಬಿಡುಗಡೆಗೆ ಆದೇಶಿಸಿದೆ.

ಹೀಗೆಯೇ ವಿದ್ಯಾರ್ಥಿ ನಾಯಕರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತು ಇತರೆ ವಿಚಾರಣಾಧೀನ ಕೈದಿಗಳು ಸುದೀರ್ಘ ಕಾಲ ಜೈಲಿನಲ್ಲಿ ಕಾಲ ಕಳೆಯುತ್ತಿರುವ ವಿಷಯವು ಪ್ರಸ್ತುತ ದೇಶದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 2020ರ ದೆಹಲಿ ಗಲಭೆಯ ಸಂಚಿನ ಆರೋಪದ ಮೇಲೆ ಸೆಪ್ಟೆಂಬರ್ 2020ರಲ್ಲಿ ಬಂಧಿತರಾದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರು ಕಳೆದ 5 ವರ್ಷಗಳಿಗೂ ಹೆಚ್ಚು ಕಾಲದಿಂದ ಜೈಲಿನಲ್ಲಿಯೇ ಇದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅವರಿಗೆ ಸುಲಭವಾಗಿ ಜಾಮೀನು ಸಿಗುತ್ತಿಲ್ಲ ಹಾಗೂ ಪ್ರಕರಣದ ಸಂಪೂರ್ಣ ವಿಚಾರಣೆ (Trial) ಇನ್ನೂ ಆರಂಭವಾಗಿಲ್ಲ.

ಹಾಗೆಯೇ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರೊ. ಸಾಯಿಬಾಬಾ ಅವರಂತಹವರು ಹಲವು ವರ್ಷಗಳ ಜೈಲುವಾಸದ ನಂತರ ನಿರ್ದೋಷಿ ಎಂದು ಖುಲಾಸೆಯಾಗಿದ್ದರು. ಇದು ಸುದೀರ್ಘ ವಿಚಾರಣಾಧೀನ ಬಂಧನದ ಗಂಭೀರತೆಯನ್ನು ಎತ್ತಿಹಿಡಿಯುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು...

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...