ನೀಟ್ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ: ಸಂಸತ್ತಿನ ಕಲಾಪ ತಡೆದು ಚರ್ಚೆಗೆ ಕಾಂಗ್ರೆಸ್ ಸದಸ್ಯರ ನೋಟಿಸ್

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ದೌರ್ಜನ್ಯ ಹಾಗೂ ಬಲಪ್ರಯೋಗವನ್ನು ಖಂಡಿಸಿ ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) ತುರ್ತು ಚರ್ಚೆಗೆ ಒತ್ತಾಯಿಸಿ ನೋಟಿಸ್ ಸಲ್ಲಿಕೆ ಮಾಡಿದ್ದಾರೆ.

- Advertisement -

ಕೇಂದ್ರ ಸರ್ಕಾರವು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಕಠಿಣ ಶಿಕ್ಷೆ ವಿಧಿಸುವ ನೂತನ ವಿಧೇಯಕವನ್ನು ಲೋಕಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಸಂಸದರಾದ ರಣದೀಪ್ ಸುರ್ಜೇವಾಲಾ ಮತ್ತು ಸಯ್ಯದ್ ನಸೀರ್ ಹುಸೇನ್ ಅವರು ನಿಯಮ 267ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ. ನಿಗದಿತ ಕಲಾಪಗಳನ್ನು ರದ್ದುಗೊಳಿಸಿ ದೌರ್ಜನ್ಯದ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಇದನ್ನೂ ಓದಿ: ಲೋಹದ ಪೆಲೆಟ್ ಗನ್ ನಿಷೇಧ, ಪರಿಹಾರಕ್ಕೆ ಆಗ್ರಹ: ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತರು!

ಲೋಕಸಭೆಯ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೋಯ್ ಹಾಗೂ ಚಂಡೀಗಢ ಸಂಸದ ಮನೀಷ್ ತಿವಾರಿ ಅವರು ಕಲಾಪ ಮುಂದೂಡಿಕೆ ನೋಟಿಸ್ ನೀಡಿ, ಶೂನ್ಯ ವೇಳೆ ಹಾಗೂ ಪ್ರಶ್ನೋತ್ತರ ವೇಳೆಯನ್ನು ಅಮಾನತುಗೊಳಿಸಿ ಈ ವಿಷಯವನ್ನು ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಮತ್ತು ‘ಪೆಲೆಟ್ ಗನ್’ (Pellet guns) ಬಳಸಿದ ಹಾಗೂ ಮಹಿಳಾ ವಿದ್ಯಾರ್ಥಿನಿಯರು ಮತ್ತು ಮಾಧ್ಯಮಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.

ಬಲಪ್ರಯೋಗಕ್ಕೆ ಯಾರು ಅನುಮತಿ ನೀಡಿದ್ದರು ಎಂಬುದನ್ನು ಗೃಹ ಸಚಿವರು ಸ್ಪಷ್ಟಪಡಿಸಬೇಕು ಹಾಗೂ ಸರ್ಕಾರದ ಜವಾಬ್ದಾರಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರಧಾನಿಯವರು ಹೇಳಿಕೆ ನೀಡಬೇಕು ಎಂದು ನೋಟಿಸ್‌ನಲ್ಲಿ ಆಗ್ರಹಿಸಲಾಗಿದೆ.

ಜುಲೈ 20ರಂದು ಸಂಸತ್ತಿಗೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಸಂದರ್ಭದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ (RAF) ಅತಿಯಾದ ಬಲಪ್ರಯೋಗ ಮಾಡಿದೆ ಎಂಬುದನ್ನು RAF ನ ಮಹಾನಿರ್ದೇಶಕರು ಒಪ್ಪಿಕೊಂಡಿದ್ದಾರೆ ಎಂದೂ ಗೌರವ್ ಗೊಗೋಯ್ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

170ಕ್ಕೂ ಹೆಚ್ಚು ಜನರಿಗೆ ಗಾಯ, ಭಾರಿ ಹಿಂಸಾಚಾರ

ಈ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ 170ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 60 ರಿಂದ 90 ಪ್ರತಿಭಟನಾಕಾರರು ತೀವ್ರ ಗಾಯಗೊಂಡಿದ್ದಾರೆ. ಪೆಲೆಟ್ ಗನ್ ಬಳಕೆಯ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬನ ಕಣ್ಣಿಗೆ ತೀವ್ರ ಗಾಯವಾಗಿದೆ.

ಇದನ್ನೂ ಓದಿ: ದೆಹಲಿ ಪ್ರತಿಭಟನೆಯಲ್ಲಿ ಬಳಕೆಯಾದ ಮಾರಕ ‘ಪೆಲೆಟ್ ಗನ್’ ಅಸ್ತ್ರಗಳ ಅಸಲಿಯತ್ತೇನು?

ಮಹಿಳಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ದೈಹಿಕ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪಗಳಿದ್ದು, ಸಮವಸ್ತ್ರಧಾರಿಗಳ ಹೊರತಾಗಿ ಸಾದಾ ಉಡುಪಿನಲ್ಲಿದ್ದ ಗುರುತು ಸಿಗದ ವ್ಯಕ್ತಿಗಳೂ ಈ ಕಾರ್ಯಾಚರಣೆಯಲ್ಲಿದ್ದರು ಎಂಬುದನ್ನು ಹಲವು ವಿಡಿಯೋಗಳು ಸಾಬೀತುಪಡಿಸಿದೆ.

ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯದ ನೇರ ಆಡಳಿತಾತ್ಮಕ ನಿಯಂತ್ರಣಕ್ಕೆ ಬರುವುದರಿಂದ, ಈ ಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಸಚಿವಾಲಯವೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಇನ್ನು ಲೋಹದ ಪೆಲೆಟ್ ಗನ್ ನಿಷೇಧಕ್ಕೆ ಆಗ್ರಹಿಸಿ ಸಂತ್ರಸ್ತರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪೆಲೆಟ್ ಗನ್‌ನಿಂದ ಹೊರಬರುವ ನೂರಾರು ಸಣ್ಣ ಹರಳುಗಳು ಅನಿರ್ದಿಷ್ಟ ದಿಕ್ಕಿನಲ್ಲಿ ಹರಡುವುದರಿಂದ ಕಣ್ಣುಗಳು ಮತ್ತು ಸೂಕ್ಷ್ಮ ಅಂಗಾಂಗಗಳಿಗೆ ಶಾಶ್ವತ ಹಾನಿಯಾಗುವ ಅಪಾಯ ಹೆಚ್ಚಾಗಿರುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...

ಔಷಧ ಮಾರಾಟದಲ್ಲಿ ಲೂಟಿ! MRP-ಮಾರಾಟ ದರದ ನಡುವೆ ಇಷ್ಟೊಂದು ಅಂತರವೇಕೆ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಭಾರತದಲ್ಲಿ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಚಿಲ್ಲರೆ ವ್ಯಾಪಾರಿಗಳು...

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...