ವಿದ್ಯಾರ್ಥಿಗಳ ಮೇಲಿನ ಪೊಲೀಸ್‌ ದೌರ್ಜನ್ಯ: ವಿಡಿಯೋ, ಫೋಟೋಗಳ ಆರ್ಕೈವ್ ಮಾಡಲು ಸಿಜೆಪಿ ವೆಬ್‌ಸೈಟ್ ಚಾಲನೆ

Date:

ಸಂಸತ್ ಚಲೋ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಮತ್ತು ಬಲಪ್ರಯೋಗದ ಘಟನೆಗಳನ್ನು ದಾಖಲಿಸಲು ಹಾಗೂ ಪುರಾವೆಗಳನ್ನು ಸಂಗ್ರಹಿಸಲು ‘ಸಿಜೆಪಿ’ (ಕಾಕ್ರೋಚ್ ಜನತಾ ಪಾರ್ಟಿ) ಪ್ರತ್ಯೇಕ ವೆಬ್‌ಸೈಟ್‌ ಒಂದನ್ನು ಚಾಲನೆಗೊಳಿಸಿದೆ.

- Advertisement -

ಸಂಸತ್‌ ಚಲೋ ಮೆರವಣಿಗೆಯ ಸಮಯದಲ್ಲಿ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಂದ ವಿಡಿಯೋಗಳು ಮತ್ತು ಫೋಟೋಗಳನ್ನು ಸಂಗ್ರಹಿಸಿ ಆರ್ಕೈವ್ (ಸಂಗ್ರಹ) ಮಾಡಲಾಗುವುದು ಎಂದು ಸಿಜೆಪಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಆಹಾರ ನೀಡುತ್ತಿದ್ದ ಜುನೈದ್ ಮನೆಗೆ ಯುಪಿ ಪೊಲೀಸ್ ದಾಳಿ: ನೆಟ್ಟಿಗರ ಆಕ್ರೋಶ

ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿಯ ಗುರುತು ಪತ್ತೆಹಚ್ಚಲು ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾನೂನು ಹೋರಾಟ ರೂಪಿಸುವ ಉದ್ದೇಶದಿಂದ ಈ ಹೆಜ್ಜೆ ಇಡಲಾಗಿದೆ.

ಪ್ರತಿಭಟನಾಕಾರರ ಮೇಲೆ ಅತಿಯಾದ ಬಲಪ್ರಯೋಗ, ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ಮಾಡಿದ ಘಟನೆಗಳ ದೃಶ್ಯಾವಳಿಗಳನ್ನು ವೆಬ್‌ಸೈಟ್ ಮೂಲಕ ಕ್ರೋಢೀಕರಿಸಲಾಗುತ್ತಿದೆ.

ಇನ್ನು ಜುಲೈ 20ರಂದು ನಡೆದ ಈ ಘಟನೆಗೆ ಸಂಬಂಧಿಸಿದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ದೆಹಲಿ ಹೈಕೋರ್ಟ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ದೌರ್ಜನ್ಯದ ಆರೋಪಗಳ ಕುರಿತು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಇನ್ನು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಕುರಿತು ಪ್ರತ್ಯೇಕ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿ ಸಂಘಟನೆಗಳು ಈ ದೃಶ್ಯಾವಳಿಗಳನ್ನು ಆಧಾರವಾಗಿಟ್ಟುಕೊಂಡು ಕಾನೂನು ಸಮರವನ್ನು ಮುಂದುವರಿಸಲು ತೀರ್ಮಾನಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...