ಕುಟುಂಬಸ್ಥರಿಗೂ ತಿಳಿಸದೆ ಮುಸ್ಲಿಂ ಯುವಕನ ಮೃತದೇಹ ಸುಟ್ಟು ಹಾಕಿದ ಪೊಲೀಸರು

Date:

ಮುಸ್ಲಿಂ ಯುವಕನೊಬ್ಬನ ಮೃತದೇಹವನ್ನು ಆತನ ಕುಟುಂಬಸ್ಥರಿಗೂ ತಿಳಿಸದೆ ಪೊಲೀಸರು ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಪೊಲೀಸರ ನಡೆಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

ಇಸ್ಮಾಯಿಲ್ (20) ಎಂಬ ಯುವಕನ ಮೃತದೇಹವನ್ನು ಜೋಧ್‌ಪುರದ ಗುಲಾಬ್ ಸಾಗರ್‌ ಪ್ರದೇಶದಲ್ಲಿ ಪೊಲೀಸರು ಸುಟ್ಟುಹಾಕಿದ್ದಾರೆ. ಆತನ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸದೆ, ʼವಾರಸುದಾರರಿಲ್ಲದ ಮೃತದೇಹʼ ಎಂದು ಹೇಳಿ ಪೊಲೀಸರು ದಹಿಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ಮುಸ್ಲಿಂ ಸಂಪ್ರದಾಯದಂತೆ ಅಂತ್ರಕ್ರಿಯೆ ಮಾಡಲು ಅವಕಾಶ ನೀಡಿಲ್ಲ ಎಂದು ಇಸ್ಮಾಯಿಲ್ ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೃತ ಇಸ್ಮಾಯಿಲ್ ಅವರು ಜೋಧ್‌ಪುರದ ಚಿಮನ್ಪುರ ಗಲಿ-4ರಲ್ಲಿ ವಾಸಿಸುತ್ತಿದ್ದರು. ಅವರು ಜೂನ್ 17ರಂದು ನಾಪತ್ತೆಯಾಗಿದ್ದರು. ಆತನಿಗಾಗಿ ಹುಡುಕಾಟ ನಡೆಸಿದ ಕುಟುಂಬಸ್ಥರು, ಆತ ಪತ್ತೆಯಾಗದಿದ್ದಾಗ, ಜೂನ್ 20ರಂದು ಸದರ್ ಬಝಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಮರುದಿನ, (ಜೂನ್ 21) ಗುಲಾಬ್ ಸಾಗರ್ ಬಳಿ ಯುವಕನೋರ್ವನ ಮೃತದೇಹ ಪತ್ತೆಯಾಗಿತ್ತು. ಆ ಮೃತದೇಹವನ್ನು ಸದರ್ ಕೊತ್ವಾಲಿಯ ಮಹಾತ್ಮ ಗಾಂಧಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿತ್ತು. ಜೂನ್ 25ರಂದು ಸದರ್ ಕೊತ್ವಾಲಿ ಪೊಲೀಸರು ಮೃತದೇಹವನ್ನು ಸುಟ್ಟುಹಾಕಿದ್ದರು.

ಇಸ್ಮಾಯಿಲ್ ನಾಪತ್ತೆಯಾಗಿರುವ ಬಗ್ಗೆ ಸದರ್ ಬಝಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸದರ್ ಕೊತ್ವಾಲಿ ಠಾಣಾ ಪೊಲೀಸರಿಗೆ ಮಾಹಿತಿ ಇರಲಿಲ್ಲ. ಪೊಲೀಸರ ನಡುವೆ ಸಮನ್ವಯದ ಕೊರತೆಯಿಂದಾಗಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ | ವಿಪಕ್ಷಗಳ ಗಂಭೀರ ಪ್ರಶ್ನೆಗಳಿಗೆ ಮೋದಿ ನಿರುತ್ತರ!

ಜೂನ್ 26ರಂದು ಇಸ್ಮಾಯಿಲ್ ಕುಟುಂಬಸ್ಥರಿಗೆ ಮೃತದೇಹೊಂದು ಪತ್ತೆಯಾದ ಬಗ್ಗೆ ಮಾಹಿತಿ ದೊರೆತಿತ್ತು. ಆ ಮೃತದೇಹ ಇಸ್ಮಾಯಿಲ್ ಅವರದ್ದೇ ಆಗಿರಬಹುದು ಎಂದು ಅನುಮಾನಿಸಿದ ಕುಟುಂಬಸ್ಥರು, ಪೊಲೀಸರನ್ನು ವಿಚಾರಿಸಿದ್ದಾರೆ. ಇಸ್ಮಾಯಿಲ್‌ನಿಂದ ಪೊಲೀಸರು ಪಡೆದಿದ್ದ ಡಿಎನ್‌ಎ ಮಾದರಿ ಮತ್ತು ಇಸ್ಮಾಯಿಲ್ ತಾಯಿ ಮಲ್ಕಾ ಅವರ ಡಿಎನ್‌ಎ ಮಾದರಿಯನ್ನು ಪರೀಕ್ಷಿಸಿದಾಗ, ಎರಡೂ ಮಾದರಿಗಳಿಗೆ ಹೊಂದಿಕೆಯಾಗಿದ್ದು, ಅದು ಇಸ್ಮಾಯಿಲ್ ಅವರ ಮೃತದೇಹ ಎಂಬುದು ದೃಢಪಟ್ಟಿದೆ.

ಪೊಲೀಸರು ಮೃತದೇಹದ ವಾರಸುದಾರರನ್ನು ಪತ್ತೆ ಹಚ್ಚದೆ, ತಾವೇ ಯುವಕನ ಮೃತದೇಹವನ್ನು ಸುಟ್ಟುಹಾಕಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...