ಅತ್ಯಾಚಾರ ಆರೋಪಿಯನ್ನು ಬಂಧಿಸದ ಪೊಲೀಸರು; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

Date:

ತನ್ನ ಮೇಲೆ ಅತ್ಯಾಚಾರ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲವೆಂದು ಆಕ್ರೋಶಗೊಂಡ ಸಂತ್ರಸ್ತೆ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಮೋದಿನಗರದ ತಾಲೂಕು ಕಚೇರಿ ಆವರಣದಲ್ಲಿ ಮಹಿಳೆಯು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಆಕೆಯಿಂದ ‘ಲೈಟರ್‌’ಅನ್ನು ಕಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂತ್ರಸ್ತೆ ಪ್ರಕಾರ; ಆರೋಪಿಯು ಮದುವೆಯ ನೆಪದಲ್ಲಿ ಹಲವು ತಿಂಗಳುಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಆದರೆ, ಈಗ ಮದುವೆಯಾಗಲು ನಿರಾಕಿಸಿದ್ದು, ಆಕೆಯಿಂದ ದೂರ ಉಳಿದಿದ್ಧಾನೆ. ತನ್ನ ಮೇಲೆ ನಡೆದ ದೌರ್ಜನ್ಯ ಮತ್ತು ವಂಚನೆ ಬಗ್ಗೆ ಸುಮಾರು 2 ತಿಂಗಳ ಹಿಂದೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಈವರೆಗೆ ಆರೋಪಿಯನ್ನು ಬಂಧಿಸಿಲ್ಲ.

ಆರೋಪಿಯೊಂದಿಗೆ ಪೊಲೀಸ್‌ ಅಧಿಕಾರಿಗಳು ಶಾಮೀಲಾಗಿದ್ದಾರೆ. ಆತನನ್ನು ಬಂಧಿಸಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಸಂತ್ರಸ್ತೆ, ಆರೋಪಿಯನ್ನು 48 ಗಂಟೆಗಳ ಒಳಗೆ ಬಂಧಿಸದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಈ ಲೇಖನ ಓದಿದ್ದೀರಾ?: “ಕನ್ನಡನಾಡು ನನ್ನ ಪ್ರೀತಿಯ ನಾಡು” ಎಂದು ಇಡೀ ಜಗತ್ತಿಗೆ ಸಾರುತ್ತಾ ಬಂದ ಬಾನು ದಸರಾ ಉದ್ಘಾಟಿಸಿದರೆ ತಪ್ಪೇ!

ಇದೀಗ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ, ಆರೋಪಿ ವಿರುದ್ಧ ಕೇವಲ ‘ಶಾಂತಿ ಭಂಗ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ವಿರುದ್ಧ ‘ಶಾಂತಿ ಭಂಗ’ ಆರೋಪವಲ್ಲ, ಅತ್ಯಾಚಾರದ ಪ್ರಕರಣ ದಾಖಲಿಸಬೇಕು ಎಂದು ಮಹಿಳೆ ಒತ್ತಾಯಿಸಿದ್ದಾರೆ.

ಪ್ರಕರಣದ ಬಗ್ಗೆ ವಿವರಿಸಿರುವ ಡಿಸಿಪಿ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ, “ನೀರಜ್ ಗೋಯೆಲ್ ಎಂಬ ಆರೋಪಿ ಮೋದಿನಗರದ ತಿಂಡಿ ಕಾರ್ಖಾನೆಯ ಮಾಲೀಕನಾಗಿದ್ದಾನೆ. ಆತ ಅಲಹಾಬಾದ್ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ, ಆತನ ವಿರುದ್ಧ ಶಾಂತಿ ಭಂಗದ ಆರೋಪದಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...