ಉತ್ತರ ಪ್ರದೇಶದ ಲಕ್ನೋದಲ್ಲಿ ಸಿವಿಲ್ ನ್ಯಾಯಾಲಯದ ಸಂಕೀರ್ಣದ ಹೊರಗೆ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ವಕೀಲರುಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಕೀಲರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು, ವಕೀಲರ ನಡುವೆ ಘರ್ಷಣೆ ನಡೆದಿದೆ.
ಲಕ್ನೋ ಹೈಕೋರ್ಟ್‌ನ ಲಕ್ನೋ ಪೀಠದ ಆದೇಶದ ಮೇರೆಗೆ ಹೈಕೋರ್ಟ್ ಮತ್ತು ಸಿವಿಲ್ ನ್ಯಾಯಾಲಯದ ಆವರಣದ ಬಳಿ ನಿರ್ಮಿಸಲಾದ ಕೊಠಡಿಗಳನ್ನು ಧ್ವಂಸ ಮಾಡಲಾಗುತ್ತಿದೆ. ಈ ಕಾರ್ಯಾಚರಣೆಯನ್ನು ವಿರೋಧಿಸಿ ವಕೀಲರ ಗುಂಪು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಇದನ್ನು ಓದಿದ್ದೀರಾ? ದೆಹಲಿ | ಕೇಜ್ರಿವಾಲ್ ಬಂಧನಕ್ಕೆ ವಕೀಲರ ಖಂಡನೆ; ಪ್ರತಿಭಟನೆ ನಡೆಸದಂತೆ ಹೈಕೋರ್ಟ್ ಎಚ್ಚರಿಕೆ
ಈ ಬಗ್ಗೆ ಮಾಹಿತಿ ನೀಡಿದ ಲಕ್ನೋದ ಉಪ ಪೊಲೀಸ್ ಆಯುಕ್ತ ಕಮಲೇಶ್ ದೀಕ್ಷಿತ್, “ಕೈಸರ್‌ಬಾಗ್‌ನ ಹೈಕೋರ್ಟ್ ಬಳಿ ನಿರ್ಮಿಸಲಾದ ಕೊಠಡಿಗಳ ಧ್ವಂಸ ಕಾರ್ಯಾಚರಣೆಗಳು ನಡೆಯುತ್ತಿವೆ. ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಹೇಳಿದರು.




