ಲಿಫ್ಟ್ ಪಡೆದು 20 ಸಾವಿರ ಎಗರಿಸಿದ ಪೊಲೀಸ್; 13 ಕಿ.ಮೀ ಬೆನ್ನಟ್ಟಿ ಹಿಡಿದ ಲಾರಿ ಚಾಲಕ

Date:

ಲಾರಿ ಚಾಲಕನೊಬ್ಬನಿಂದ ಲಿಫ್ಟ್ ಪಡೆದುಕೊಂಡ ಪೊಲೀಸ್ ಅಧಿಕಾರಿಯೊಬ್ಬರು, ಅದೇ ಲಾರಿಯಲ್ಲಿದ್ದ 20,000 ರೂಪಾಯಿ ನಗದು ಕದ್ದು ಪರಾರಿಯಾಗಲು ಯತ್ನಿಸಿದ ಅಚ್ಚರಿಯ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಹಣ ಕಳ್ಳತನವಾಗಿರುವುದನ್ನು ಅರಿತ ಚಾಲಕ, ಅಧಿಕಾರಿಯನ್ನು ಸುಮಾರು 13 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ ಹಿಡಿದಿದ್ದಾನೆ. ಈ ಹೈಡ್ರಾಮಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆರೋಪಿ ಎಸ್‌ಐ ಇಲಾಖೆಯು ಅಮಾನತುಗೊಳಿಸಿದೆ.

- Advertisement -

ಹಮೀರ್‌ಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿಯನ್ನು ತಡೆದ ಎಸ್‌ಐ, ಚಾಲಕನ ಬಳಿ ಲಿಫ್ಟ್ ಕೇಳಿದ್ದಾರೆ. ಇದಕ್ಕೆ ಒಪ್ಪಿದ ಚಾಲಕ, ಟೋಲ್ ಪ್ಲಾಜಾ ಬಳಿ ಅವರನ್ನು ಇಳಿಸಿದ್ದಾನೆ. ಅಲ್ಲಿಂದ ಎಸ್‌ಐ ತಮ್ಮ ಸ್ವಂತ ವಾಹನದಲ್ಲಿ ತೆರಳಿದ್ದಾರೆ. ಸ್ವಲ್ಪ ದೂರ ಕ್ರಮಿಸಿದ ಬಳಿಕ ಲಾರಿ ಚಾಲಕನಿಗೆ ತನ್ನ ಬಳಿಯಿದ್ದ 20,000 ರೂಪಾಯಿ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಲಿಫ್ಟ್ ಪಡೆದಿದ್ದ ಪೊಲೀಸ್ ಅಧಿಕಾರಿಯೇ ಹಣ ಕದ್ದಿರಬಹುದು ಎಂದು ಶಂಕಿಸಿದ ಚಾಲಕ, ತಕ್ಷಣವೇ ಲಾರಿಯನ್ನು ಹಿಂದಕ್ಕೆ ತಿರುಗಿಸಿ ಅಧಿಕಾರಿಯ ವಾಹನವನ್ನು ಹಿಂಬಾಲಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸತತ 13 ಕಿ.ಮೀ. ವರೆಗೆ ಬೆನ್ನಟ್ಟಿದ ಚಾಲಕ, ಅಂತಿಮವಾಗಿ ಎಸ್‌ಐ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾನೆ. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಚಾಲಕ ಎಸ್‌ಐ ಮೇಲೆ ಕಳ್ಳತನದ ಆರೋಪ ಮಾಡಿದ್ದಾನೆ. ಬಳಿಕ ತಪಾಸಣೆ ನಡೆಸಿದಾಗ, ಕಳೆದುಹೋಗಿದ್ದ 20,000 ರೂಪಾಯಿ ಹಣ ಪೊಲೀಸ್ ಅಧಿಕಾರಿಯ ಸಮವಸ್ತ್ರದೊಳಗೆ ಪತ್ತೆಯಾಗಿದೆ. ಈ ನಡುವೆ ಇಬ್ಬರ ನಡುವೆ ನಡೆದ ವಾಗ್ವಾದದಲ್ಲಿ ಎಸ್‌ಐಗೆ ಲಾರಿ ಚಾಲಕ ಹಲ್ಲೆ ನಡೆಸಿದ್ದಾನೆ. ರಸ್ತೆ ಮಧ್ಯೆ ನಡೆದ ಈ ಘಟನೆಯ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಜುಲೈ 6ರಂದು ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಗೆದ್ದರೂ, ರೆಫರಿಗಳ ವಿವಾದಾತ್ಮಕ VAR ತೀರ್ಪುಗಳಿಂದ ಸೋತ ಈಜಿಪ್ಟ್

ವಿಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಹಮೀರ್‌ಪುರ ಜಿಲ್ಲಾ ಪೊಲೀಸ್ ಇಲಾಖೆ, ಅಧಿಕಾರಿ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಂಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಹಮೀರ್‌ಪುರ ಪೊಲೀಸ್ ವೃತ್ತ ನಿರೀಕ್ಷಕ ಯಶ್ಪಾಲ್ ಸಿಂಗ್, “ವೈರಲ್ ಆಗಿರುವ ವಿಡಿಯೊ ಮತ್ತು ಲಾರಿ ಚಾಲಕನ ಲಿಖಿತ ದೂರಿನ ಆಧಾರದ ಮೇಲೆ, ಹಮೀರ್‌ಪುರದ ಕೊತ್ವಾಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ.

ಆರೋಪಿ ಸಬ್‌-ಇನ್ಸ್‌ಪೆಕ್ಟರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಪ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ಡಿಸಿಎಂ ಪರ್ವೇಶ್ ವರ್ಮಾ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ...

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...