ಸೋನಮ್‌ರನ್ನು ಹೊತ್ತೊಯ್ದ ಪೊಲೀಸರು; ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ ಅಭಿಜಿತ್ ದೀಪ್ಕೆ

Date:

ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ. ಉಪವಾಸ ಆರಂಭಿಸಿದ್ದಾರೆ. ಜುಲೈ 20ರಂದು ನಿಗದಿಯಾಗಿರುವ ‘ಚಲೋ ಸಂಸದ್’ ಮೆರವಣಿಗೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಡಿರುವ ದೀಪ್ಕೆ, “ಈ ಕ್ಷಣದಿಂದಲೇ ನಾನು ಅನಿರ್ದಿಷ್ಟಾವಧಿ ಉಪವಾಸ ಆರಂಭಿಸುತ್ತಿದ್ದೇನೆ. ಯಾರೂ ಹಿಂದೆ ಸರಿಯಬೇಡಿ. ಈ ಹೋರಾಟ ಇನ್ನಷ್ಟು ಬಲವಾಗಿ ಮುಂದುವರಿಯಲಿದೆ. ಸರ್ಕಾರ ದೊಡ್ಡ ತಪ್ಪು ಮಾಡಿದೆ. ಎಲ್ಲರೂ ಜಂತರ್ ಮಂತರ್‌ಗೆ ಆಗಮಿಸಿ, ಜುಲೈ 20ರಂದು ನಡೆಯಲಿರುವ ಸಂಸತ್ ಚಲೋ ಮೆರವಣಿಗೆಯಲ್ಲಿ ಭಾಗವಹಿಸಿ” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಬೆಳವಣಿಗೆಯ ನಂತರ ನಮ್ಮ ಬೇಡಿಕೆ ಇನ್ನಷ್ಟು ವಿಸ್ತರಿಸಿದೆ. ಇಲ್ಲಿಯವರೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸುತ್ತಿದ್ದ ಪ್ರತಿಭಟನೆ, ಈಗ ಮತ್ತೊಂದು ರಾಜಕೀಯ ಹಂತ ತಲುಪಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಯನ್ನೂ ನಾವು ಕೇಳುತ್ತೇವೆ” ಎಂದು ದೀಪ್ಕೆ ತಿಳಿಸಿದ್ದಾರೆ.

ನೀಟ್ ಸೇರಿದಂತೆ ಹಲವು ಪರೀಕ್ಷಾ ಅಕ್ರಮಗಳ ವಿರುದ್ಧ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜೂನ್ 20ರಿಂದ ಕಾಕ್ರೋಚ್ ಜನತಾ ಪಕ್ಷವು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಯನ್ನು ಬೆಂಬಲಿಸಿ ಜೂನ್ 28ರಿಂದ ಸೋನಮ್ ವಾಂಗ್ಚುಕ್ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು. ಶನಿವಾರ, ಅವರ ಉಪವಾಸ 21ನೇ ದಿನಕ್ಕೆ ಕಾಲಿಟ್ಟಿದ್ದಾಗ ಪೊಲೀಸರು ಅವರನ್ನು ವೇದಿಕೆಯಿಂದ ತೆರವುಗೊಳಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕ್ರಮದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂದು ದೀಪ್ಕೆ ಆರೋಪಿಸಿದ್ದಾರೆ. ವಾಂಗ್ಚುಕ್ ಅವರನ್ನು ಸ್ಥಳಾಂತರಿಸುವುದರಿಂದ ಹೋರಾಟ ಕೊನೆಗೊಳ್ಳುತ್ತದೆ ಎಂದು ಸರ್ಕಾರ ಭಾವಿಸಿದ್ದರೆ ಅದು ತಪ್ಪು ಲೆಕ್ಕಾಚಾರ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...