ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗರಿಯಾಬಂದ್ ಮಹಾಸಮುಂಡ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ
ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಜಿಯಾಲಾಲ್ ಪವಾರ್ ಅವರು ಬೆಳಿಗ್ಗೆ 9.30 ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜಿಯಾಲಾಲ್ ಮೀಸಲು ತಂಡದಲ್ಲಿದ್ದರು ಮತ್ತು ಸಕ್ರಿಯ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ದೆಹಲಿ | ಇಬ್ಬರು ಮಕ್ಕಳನ್ನು ಕೊಂದು, ರೈಲ್ವೆ ಹಳಿಗೆ ಬಿದ್ದು ತಂದೆ ಆತ್ಮಹತ್ಯೆ
(ನಿಮಗೆ ಆತ್ಮಹತ್ಯೆಯ ಆಲೋಚನೆಗಳು ಬಂದರೆ, ಭಾವನಾತ್ಮಕ ಬೆಂಬಲ ಬೇಕಾದರೆ ಈ ಯಾರಲ್ಲೂ ಕೇಳಲು ಹಿಂಜರಿಯಬೇಡಿ. ಸ್ನೇಹ ಫೌಂಡೇಶನ್ – 04424640050, ಟೆಲಿ ಮನಸ್ – 14416 (ಲಭ್ಯವಿದೆ 24×7) ಅಥವಾ ಐಕಾಲ್, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್’ ಸಹಾಯವಾಣಿ – 02225521111 ಗೆ ನೇರವಾಗಿ ಕರೆ ಮಾಡಿ. ಇದು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ)