ತಿರುಪತಿ ದೇವಸ್ಥಾನದ ಬಳಿ ರಾಜಕೀಯ, ದ್ವೇಷದ ಭಾಷಣ ನಿಷೇಧ: ಟಿಟಿಡಿ

Date:

ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಯಾವುದೇ ರಾಜಕೀಯ ಅಥವಾ ದ್ವೇಷ ಭಾಷಣಗಳನ್ನು ಮಾಡುವಂತಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಹೇಳಿದೆ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

- Advertisement -

ದರ್ಶನದ ನಂತರ ದೇವಾಲಯದ ಆವರಣದ ಬಳಿ ಮಾಧ್ಯಮಗಳ ಮುಂದೆ ರಾಜಕೀಯ ಮುಖಂಡರು ಸೇರಿದಂತೆ ಕೆಲವು ವ್ಯಕ್ತಿಗಳು ರಾಜಕೀಯ ಅಥವಾ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, ಆಧ್ಯಾತ್ಮಿಕ ಶಾಂತಿಗೆ ಭಂಗ ತಂದ ಘಟನೆಗಳು ಇತ್ತೀಚೆಗೆ ನಡೆದಿವೆ. ಈ ಬೆನ್ನಲ್ಲೇ ಟಿಟಿಡಿ ಹೊಸ ನಿರ್ಧಾರ ತೆಗೆದುಕೊಂಡಿದೆ. ದೇವಾಲಯದ ಆವರಣದಲ್ಲಿ ರಾಜಕೀಯ ಮತ್ತು ದ್ವೇಷ ಭಾಷಣವನ್ನು ನಿಷೇಧಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೇವಾಲಯಕ್ಕೆ ಬರುವ ಎಲ್ಲ ಭಕ್ತರು ಮತ್ತು ಸಂದರ್ಶಕರು ತಮ್ಮ ನಿರ್ಧಾರವನ್ನು ಗೌರವಿಸುವಂತೆ ಟಿಟಿಪಿ ಮನವಿ ಮಾಡಿದೆ. ತಿರುಮಲದ ದೈವಿಕ ಮತ್ತು ಪರಿಸರವನ್ನು ಸಂರಕ್ಷಿಸುವ ತನ್ನ ಬದ್ಧತೆಯನ್ನು ಮುಂದುವರೆಸುವುದಾಗಿ ಹೇಳಿದೆ.

ಈ ನಿಯಮವು ಬಹಳ ಹಿಂದಿನಿಂದಲೂ ಜಾರಿಯಲ್ಲಿದೆ ಮತ್ತು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡಿರುವ ಉದಾಹರಣೆಗಳೂ ಇವೆ ಎಂದು ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡಿದ ಆಂಧ್ರಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಎಲ್ವಿ ಸುಬ್ರಹ್ಮಣ್ಯಂ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...