ಸಿರಾಜ್ ಕೈಬಿಟ್ಟ ವಿಚಾರಕ್ಕೆ ರಾಜಕೀಯ ತಿರುವು: ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು!

Date:

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟಿರುವ ನಿರ್ಧಾರವು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಧರ್ಮದ ಆಧಾರದ ಮೇಲೆ ಸಿರಾಜ್ ಅವರಿಗೆ ತಾರತಮ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆರೋಪಿಸಿದ್ದರೆ, ಭಾರತೀಯ ಕ್ರಿಕೆಟ್ ತಂಡದ ಆಯ್ಕೆಯಲ್ಲೂ ಕಾಂಗ್ರೆಸ್ “ವೋಟ್ ಬ್ಯಾಂಕ್ ಮತ್ತು ಕೋಮು ರಾಜಕಾರಣ” ಮಾಡುತ್ತಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

- Advertisement -

ಕಾಂಗ್ರೆಸ್ ಸಂಸದರ ಆರೋಪವೇನು?
ಶುಕ್ರವಾರ ಸುದ್ದಿಸಂಸ್ಥೆ ಎಎನ್‌ಐ (ANI) ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, “ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಸಿರಾಜ್ ಅವರಿಗೆ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಅವರ ಹೆಸರು ‘ಸಿರಾಜ್’ ಎಂಬ ಒಂದೇ ಕಾರಣಕ್ಕೆ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಉತ್ತಮ ಪ್ರದರ್ಶನದ ನಡುವೆಯೂ ಆಯ್ಕೆ ಮಾಡದಿದ್ದರೆ, ಅಲ್ಲಿ ತಾರತಮ್ಯ ನಡೆದಿರುವುದು ಸ್ಪಷ್ಟ” ಎಂದು ಆರೋಪ ಮಾಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಆದರೆ, ಸ್ವಪಕ್ಷದ ನಾಯಕನ ಈ ಹೇಳಿಕೆಯಿಂದ ಕಾಂಗ್ರೆಸ್ ಹಿರಿಯ ನಾಯಕ ಹುಸೇನ್ ದಳವಾಯಿ ಅಂತರ ಕಾಯ್ದುಕೊಂಡಿದ್ದಾರೆ. “ಕ್ರಿಕೆಟ್‌ನಲ್ಲಿ ಇಂತಹ ಆಯ್ಕೆಗಳು ಸಹಜ. ಪ್ರತಿಯೊಂದು ವಿಷಯವನ್ನೂ ಒಂದೇ ದೃಷ್ಟಿಕೋನದಿಂದ ನೋಡುವುದು ಸಂಪೂರ್ಣ ತಪ್ಪು” ಎಂದು ದಳವಾಯಿ ಅಭಿಪ್ರಾಯಪಟ್ಟಿದ್ದಾರೆ.

ಇಮ್ರಾನ್ ಮಸೂದ್ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, “ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಈಗ ಕ್ರಿಕೆಟ್ ತಂಡದ ಆಯ್ಕೆಯಲ್ಲೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಎಂಬ ಕಾರಣಕ್ಕೆ ಸಿರಾಜ್ ಅವರನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಹಾಗಿದ್ದರೆ ರವೀಂದ್ರ ಜಡೇಜಾ ಅವರನ್ನೂ ತಂಡದಿಂದ ಹೊರಗಿಡಲಾಗಿದೆ. ಪ್ರತಿಯೊಬ್ಬ ಕ್ರಿಕೆಟಿಗನೂ ಭಾರತವನ್ನು ಪ್ರತಿನಿಧಿಸುವ ಜೆರ್ಸಿ ಧರಿಸುತ್ತಾನೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭಾರತೀಯ ಕ್ರಿಕೆಟ್ ತಂಡವನ್ನು ವಿಭಜಿಸುವುದನ್ನು ನಿಲ್ಲಿಸಿ” ಎಂದು ಕಿಡಿಕಾರಿದ್ದಾರೆ.

ಇನ್ನು ರಾಜಕೀಯ ಆರೋಪ-ಪ್ರತ್ಯಾರೋಪಗಳ ನಡುವೆ, ಕ್ರೀಡಾ ವಲಯದಲ್ಲೂ ಸಿರಾಜ್ ಅವರನ್ನು ಕೈಬಿಟ್ಟ ನಿರ್ಧಾರಕ್ಕೆ ಅಚ್ಚರಿ ವ್ಯಕ್ತವಾಗಿದೆ. ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆವೃತ್ತಿಯಲ್ಲಿ 11 ಪಂದ್ಯಗಳಿಂದ 43 ವಿಕೆಟ್ ಪಡೆದು ಭಾರತದ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಸಿರಾಜ್ ಅವರನ್ನು ವೆಲ್ಲಿಂಗ್ಟನ್‌ನ ಹಸಿರು ಪಿಚ್‌ನಲ್ಲಿ ಆಡಿಸದಿರುವುದು ಹಲವು ಮಾಜಿ ಕ್ರಿಕೆಟಿಗರ ಪ್ರಶ್ನೆಗೆ ಕಾರಣವಾಗಿದೆ.

“ವೇಗ, ಕೌಶಲ್ಯ ಮತ್ತು ಸೀಮ್ ಚಲನೆ ಮಾನದಂಡವಾಗಿದ್ದರೆ, ಮೊಹಮ್ಮದ್ ಸಿರಾಜ್ ಎಲ್ಲಿ? ಅವರ ಅನುಭವ, ಆಕ್ರಮಣಕಾರಿ ಆಟ ಮತ್ತು ವಿಕೆಟ್ ಪಡೆಯುವ ಸಾಮರ್ಥ್ಯಕ್ಕೆ ಬೆಲೆಯಿಲ್ಲವೇ?” ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಪ್ರಶ್ನಿಸಿದ್ದಾರೆ.

48 ಟೆಸ್ಟ್ ಪಂದ್ಯಗಳ ಅನುಭವಿ ಸಿರಾಜ್ ಅವರನ್ನು ಕೈಬಿಟ್ಟಿರುವುದು ನಿಜಕ್ಕೂ ಆಘಾತಕಾರಿ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. “ಅವರ ಬೌಲಿಂಗ್‌ನಲ್ಲಿ ಯಾವುದೇ ಸಮಸ್ಯೆಯಿರಲಿಲ್ಲ, ಅವರು ಎಂದಿಗೂ ಭಾರತಕ್ಕೆ ನಿರಾಸೆ ಮೂಡಿಸಿಲ್ಲ” ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಈ ಆಯ್ಕೆಯನ್ನು ಟೀಕಿಸಿದ್ದಾರೆ.

ಟೀಕೆಗಳ ನಡುವೆಯೂ ತಂಡದ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್, “ಸಿರಾಜ್ ಅವರಲ್ಲಿ ಯಾವುದೇ ಸಮಸ್ಯೆಯಿಲ್ಲ. ಪಂದ್ಯದ ಮೊದಲ ದಿನವನ್ನ  ಮಾತ್ರವಲ್ಲದೆ, ಪೂರ್ತಿ ಐದು ದಿನಗಳ ಆಟವನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮ ಹನ್ನೊಂದರ ಬಳಗವನ್ನು ಆಯ್ಕೆ ಮಾಡಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ವೆಲ್ಲಿಂಗ್ಟನ್ ಟೆಸ್ಟ್‌ನಲ್ಲಿ ಭಾರತವು ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್, ಅನ್ಶುಲ್ ಕಾಂಬೋಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನೊಳಗೊಂಡ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಮಕ್ಕಳ ಭವಿಷ್ಯ ರೂಪಿಸುವಲ್ಲಿ ಬಾಲಭವನಗಳ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಫಣೀಂದ್ರ

ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಬಾಲಭವನಗಳು ಮಹತ್ವದ ಕೇಂದ್ರಗಳಾಗಬೇಕು....

ಬಾಗಲಕೋಟೆ |ಸಂಶೋಧನೆಯಲ್ಲಿ ನವೀನತೆ, ಆವಿಷ್ಕಾರಕ್ಕೆ ಆದ್ಯತೆ ನೀಡಿ: ಡಾ. ಮೃತ್ತ್ಯುಂಜಯ ಎಸ್.

ಸಂಶೋಧನೆ ಕೇವಲ ಪದವಿ, ಪ್ರಬಂಧ ಪ್ರಕಟಣೆ ಹಾಗೂ ಪ್ರಶಸ್ತಿಗಳಿಗೆ ಸೀಮಿತವಾಗದೆ, ಸಮಾಜದ...

ವಿಜಯಪುರ |ವಿದ್ಯುತ್ ಅವಘಡ ;92 ಫೀಡರ್‌ಗಳ ದುರಸ್ತಿ

ವಿದ್ಯುತ್ ಅವಘಡಗಳಿಗೆ ಕಡಿವಾಣ ಹಾಕುವ ಹಾಗೂ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸುವ...

ವಿಜಯಪುರ |ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ...