ಇದೇ ಮೊದಲು | ಸಿಬಿಸಿಐ ಅಧ್ಯಕ್ಷರಾಗಿ ‘ದಲಿತ’ ಪೂಲಾ ಆಯ್ಕೆ

Date:

ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನದ (ಸಿಬಿಸಿಐ) ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆಯಾಗಿದ್ದಾರೆ. ಪೂಲಾ ಆಂಥೋನಿ ಅವರು ದೇಶದ ಕ್ಯಾಥೋಲಿಕ್ ಚರ್ಚ್‌ನ ಸರ್ವೋಚ್ಚ ಸಂಸ್ಥೆಯ ಮುಖ್ಯಸ್ಥರಾದ ಮೊದಲ ದಲಿತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ನಡೆದ ಸಿಬಿಸಿಐನ ಸಾಮಾನ್ಯ ಸಭೆಯಲ್ಲಿ ಚುನಾವಣೆ ನಡೆಯಿತು. ಹೈದರಾಬಾದ್‌ನ ಆರ್ಚ್‌ಬಿಷಪ್ ಆಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಪೂಲಾ ಆಂಥೋನಿ ಅವರನ್ನು ಸಿಬಿಸಿಐನ ಅಧ್ಯಕ್ಷರಾಗಿ ಸಭೆಯು ಮಾಡಿದೆ. ಇದು ಭಾರತದ ಸುಮಾರು ಎರಡು ಕೋಟಿ ಕ್ಯಾಥೋಲಿಕರಿಗೆ ಐತಿಹಾಸಿಕ ಕ್ಷಣವೆಂದು ಸಿಬಿಸಿಐ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಧ್ಯಕ್ಷರ ಜೊತೆಗೆ, ಎರಡು ವರ್ಷಗಳ ಅವಧಿಗೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಿರುವನಂತಪುರದ ಆರ್ಚ್‌ಬಿಷಪ್ ಥಾಮಸ್ ಮಾರ್ ಕೂರಿಲೋಸ್ ಮತ್ತು ಕೊಟ್ಟಾಯಂನ ಆರ್ಚ್‌ಬಿಷಪ್ ಮ್ಯಾಥ್ಯೂ ಮೂಲಕ್ಕಟ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಆರ್ಚ್‌ಬಿಷಪ್ ಅನಿಲ್ ಕೌಟೊ ಅವರು ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ.

ಹಿಂದಿನ ಅವಧಿಯಲ್ಲಿ ಸಿಬಿಸಿಐನ ನಾಯಕತ್ವ ವಹಿಸಿದ್ದಕ್ಕಾಗಿ ನಿರ್ಗಮಿತ ಪದಾಧಿಕಾರಿಗಳಾದ ಆರ್ಚ್‌ಬಿಷಪ್ ಮಾರ್ ಆಂಡ್ರ್ಯೂಸ್ ಥಝತ್, ಆರ್ಚ್‌ಬಿಷಪ್ ಜಾರ್ಜ್ ಅಂತೋನಿಸಾಮಿ ಮತ್ತು ಬಿಷಪ್ ಜೋಸೆಫ್ ಮಾರ್ ಥಾಮಸ್ ಅವರಿಗೆ ಸಮ್ಮೇಳನವು ಅಭಿನಂದನೆ ಸಲ್ಲಿಸಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...