ಉತ್ತರ ಪ್ರದೇಶ | ಕಳಪೆ ಊಟ, ಶಿಕ್ಷಕರ ಅಭಾವ: ಹೆದ್ದಾರಿ ತಡೆದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು

Date:

ಶಾಲೆಯಲ್ಲಿ ಸೂಕ್ತ ಶಿಕ್ಷಕರಿಲ್ಲದಿರುವುದು ಮತ್ತು ನಿತ್ಯ ನೀಡಲಾಗುವ ಕಳಪೆ ಮಟ್ಟದ ಮಧ್ಯಾಹ್ನದ ಬಿಸಿಯೂಟವನ್ನು ಖಂಡಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಮುಖ ರಸ್ತೆಗೆ ಇಳಿದು ಬೃಹತ್ ಪ್ರತಿಭಟನೆ ನಡೆಸಿರುವ ಘಟನೆ ಯೋಗಿ ಆದಿತ್ಯನಾಥ್ ಆಡಳಿತವಿರುವ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ. ವಿದ್ಯಾರ್ಥಿನಿಯರ ಏಕಾಏಕಿ ರಸ್ತೆ ತಡೆಯಿಂದಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

- Advertisement -

ಶಾಲೆಯಲ್ಲಿ ದೀರ್ಘಕಾಲದಿಂದ ವಿಷಯವಾರು ಶಿಕ್ಷಕರ ಕೊರತೆ ಇದೆ. ಇದರಿಂದಾಗಿ ನಮ್ಮ ಶೈಕ್ಷಣಿಕ ಭವಿಷ್ಯ ಹಾಳಾಗುತ್ತಿದೆ. ಇದರೊಂದಿಗೆ, ಶಾಲೆಯಲ್ಲಿ ಸರಬರಾಜು ಮಾಡಲಾಗುವ ಮಧ್ಯಾಹ್ನದ ಊಟದ ಗುಣಮಟ್ಟ ತೀರಾ ಕಳಪೆಯಾಗಿರುತ್ತದೆ. ಅದು ಸೇವಿಸಲು ಯೋಗ್ಯವಾಗಿರುವುದಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಸರ್ಕಾರಿ ಶಾಲೆಗಳ ಅಸಲಿ ಚಿತ್ರಣ ಬಿಚ್ಚಿಡಲು ಅಭಿಜೀತ್ ದೀಪ್ಕೆ ಕರೆ: ಈಗ ‘ಸ್ಕೂಲ್ ಠೀಕ್ ಕರೋ’ ಹ್ಯಾಷ್‌ಟ್ಯಾಗ್ ಸದ್ದು!

ಇನ್ನು ಈ ಸಂಬಂಧ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ, ಹಲವು ಬಾರಿ ಈ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಜೆನ್ ಆಲ್ಫಾ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಬಂದು ರಸ್ತೆಯಲ್ಲಿ ಕುಳಿತು ಧರಣಿ ಆರಂಭಿಸಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿನಿಯರ ಜತೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ಅಗತ್ಯ ಶಿಕ್ಷಕರ ನೇಮಕ ಮಾಡಲಾಗುವುದು. ಆಹಾರದ ಗುಣಮಟ್ಟ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲಿಖಿತವಾಗಿ ಭರವಸೆ ನೀಡಿದ್ದಾರೆ. ಇದಾದ ಬಳಿಕವೇ ವಿದ್ಯಾರ್ಥಿನಿಯರು ಪ್ರತಿಭಟನೆಯನ್ನು ಹಿಂಪಡೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ದೇಶದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಕೊರತೆ ಮತ್ತು ಶೋಚನೀಯ ಸ್ಥಿತಿಯನ್ನು ಸಾರ್ವಜನಿಕವಾಗಿ ಬೆಳಕಿಗೆ ತರಲು ಸಾಮಾಜಿಕ ಜಾಲತಾಣಗಳಲ್ಲಿ #SchoolThikKaro (ಸ್ಕೂಲ್ ಠೀಕ್ ಕರೋ- ಶಾಲೆಗಳನ್ನು ಸರಿಪಡಿಸಿ) ಎಂಬ ವಿನೂತನ ಅಭಿಯಾನಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ, ಸಾಮಾಜಿಕ ಕಾರ್ಯಕರ್ತ ಅಭಿಜಿತ್ ದೀಪ್ಕೆ ಇತ್ತೀಚೆಗೆ ಕರೆ ನೀಡಿದ್ದಾರೆ.

“ನಿಮ್ಮ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ. ಅಲ್ಲಿನ ಕಟ್ಟಡಗಳ ಸ್ಥಿತಿ, ಶೌಚಾಲಯ, ಕುಡಿಯುವ ನೀರು, ತರಗತಿಗಳ ಕೊಠಡಿ ಹಾಗೂ ವಿದ್ಯಾರ್ಥಿಗಳಿಗೆ ಇರುವ ಮೂಲಸೌಕರ್ಯಗಳ ಕುರಿತು ವಿಡಿಯೋ ಅಥವಾ ಫೋಟೋಗಳನ್ನು ಸೆರೆಹಿಡಿಯಿರಿ” ಎಂದು ದೀಪ್ಕೆ ತಿಳಿಸಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಸರ್ಕಾರಿ ಶಾಲೆಯ ದುಸ್ಥಿತಿಯ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಜೆನ್-ಆಲ್ಫಾಗಳು ಶಾಲೆಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...