ನಿಶಾಂತ್ ಕುಮಾರ್ ಬಿಹಾರದ ‘ಮುಂದಿನ ಮುಖ್ಯಮಂತ್ರಿ’ – ಪೋಸ್ಟರ್‌ಗಳನ್ನು ಹಾಕಿದ ಬೆಂಬಲಿಗರು

Date:

ಬಿಹಾರ ರಾಜಧಾನಿ ಪಟನಾದಾದ್ಯಂತ ‘ಬಿಹಾರದ ಮುಂದಿನ ಮುಖ್ಯಮಂತ್ರಿ’ ನಿಶಾಂತ್ ಕುಮಾರ್ ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ನಿಶಾಂತ್ ಬೆಂಬಲಿಗರು, ಜನತಾ ದಳ (ಯುನೈಟೆಡ್) -ಜೆಡಿಯು ಕಾರ್ಯಕರ್ತರು ನಿಶಾಂತ್ ಅವರನ್ನೇ ಸಿಎಂ ಮಾಡಬೇಕು ಎಂದು ಆಗ್ರಹಿಸಿ ಪೋಸ್ಟರ್‌ಗಳನ್ನು ಹಾಕಿದ್ದಾರೆ.

- Advertisement -

ತಮ್ಮನ್ನು ತಾವು “ನಿತೀಶ್ ಸೇವಕರು” ಎಂದು ಗುರುತಿಸಿಕೊಂಡಿರುವ ಬೆಂಬಲಿಗರು ಭಾನುವಾರ ಮುಂಜಾನೆ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ನಿಶಾಂತ್ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳಬೇಕು ಎಂದು ಈ ಪೋಸ್ಟರ್‌ಗಳ ಮೂಲಕ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್ ಪುತ್ರ ನಿಶಾಂತ್ ಅಧಿಕೃತವಾಗಿ ಜೆಡಿಯು ಸೇರ್ಪಡೆ

ಹಿಂದಿಯಲ್ಲಿ ಬರೆದಿರುವ ಒಂದು ಪೋಸ್ಟರ್‌ನಲ್ಲಿ, “ನಮಗೆ ಬುಲ್ಡೋಜರ್ ಅಗತ್ಯವಿಲ್ಲ, ಬಿಹಾರದಲ್ಲಿ ಗಲಭೆ-ಅಶಾಂತಿಯೂ ಅಗತ್ಯವಿಲ್ಲ. ನಮಗೆ ಲೋಕನಾಯಕ ಬೇಕು. ಅವರು ನೆರಳಿನಿಂದ ಹೊರಬರುವ ಸಮಯ ಬಂದಿದೆ. ನಮಗೆ ಯುವ ನಾಯಕ ನಿಶಾಂತ್ ಕುಮಾರ್ ಬೇಕು” ಎಂದು ಉಲ್ಲೇಖಿಸಲಾಗಿದೆ. ಹಾಗೆಯೇ ಹಲವಾರು ಜೆಡಿಯು ನಾಯಕರ ಚಿತ್ರಗಳನ್ನೂ ಹಾಕಲಾಗಿದೆ.

ಏಪ್ರಿಲ್ 10ರಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ನಿಶಾಂತ್ ಕುಮಾರ್ ಉಪಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ, ಸಿಎಂ ಅಥವಾ ಡಿಸಿಎಂ ಹುದ್ದೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆಗಳಾಗಿಲ್ಲ.

ನಿತೀಶ್ ರಾಜ್ಯಸಭೆ ಸದಸ್ಯರಾಗುವುದರಿಂದಾಗಿ ಬಿಹಾರ ಸರ್ಕಾರದ ನಿಯಂತ್ರಣವು ಇದೀಗ ಸಂಪೂರ್ಣವಾಗಿ ಬಿಜೆಪಿ ಕೈಸೇರಲಿದೆ. ಈ ಹಿಂದೆ ಜೆಡಿಯು ಕೋಟೆಯಾಗಿದ್ದ ಬಿಹಾರದಲ್ಲಿ ಬಿಜೆಪಿ ವಿಸ್ತಾರಗೊಳಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಹಂತಹಂತವಾಗಿ ಮಾಡಿ ಇದೀಗ ಸಫಲವಾಗುತ್ತಿದೆ ಎಂಬ ವಾದಗಳೂ ಇವೆ.

ಅಷ್ಟಕ್ಕೂ ನಿಶಾಂತ್ ಕುಮಾರ್ ಈ ಹಿಂದೆ ಹಲವು ಬಾರಿ ತಾವು ರಾಜಕೀಯದಿಂದ ದೂರ ಇರುವುದಾಗಿ ಹೇಳಿದವರು. ಹಾಗೆಯೇ ಆಧ್ಯಾತ್ಮದತ್ತ ಒಲವು ಹೊಂದಿರುವವರು. ಆದರೆ ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡು ರಾಜಕೀಯ ಆಸಕ್ತಿ ತೋರಿಸಿದ್ದಾರೆ. ಜೆಡಿಯು ಸೇರ್ಪಡೆಯೂ ಆಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...