ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ನಾಪತ್ತೆ: ತಾವೇ ಸ್ಪರ್ಧಿಸಿದ್ದ ಕ್ಷೇತ್ರದಲ್ಲಿ ಮತದಾನದ ಹಕ್ಕಿಲ್ಲ ಎಂದ ನಟ

Date:

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸದಾ ಧ್ವನಿ ಎತ್ತುವ ಬಹುಭಾಷಾ ನಟ ಪ್ರಕಾಶ್ ರಾಜ್, ಇದೀಗ ಸ್ವತಃ ತಾವೇ ಹುಟ್ಟಿ ಬೆಳೆದ ಬೆಂಗಳೂರಿನ ಕ್ಷೇತ್ರದಲ್ಲಿ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಮತದಾರರ ಪಟ್ಟಿಯಿಂದ ಏಕಾಏಕಿ ತಮ್ಮ ಹೆಸರನ್ನು ಕೈಬಿಟ್ಟಿರುವುದರ ವಿರುದ್ಧ ಅವರು ಚುನಾವಣಾ ಆಯೋಗದ (EC) ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

- Advertisement -

​ಈ ಕುರಿತು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹಾಗೂ ಎಕ್ಸ್ (X) ಖಾತೆಗಳಲ್ಲಿ ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವೇ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕ್ಷೇತ್ರದಲ್ಲೇ ಇಂದು ಮತದಾನದ ಹಕ್ಕಿಲ್ಲದಿರುವುದು ‘ಪ್ರಜಾಪ್ರಭುತ್ವದ ಅಣಕ’ ಎಂದು ಅವರು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ವಿಡಿಯೊದಲ್ಲಿ ತೀವ್ರ ಅಸಮಾಧಾನ ಹೊರಹಾಕಿರುವ ಪ್ರಕಾಶ್ ರಾಜ್, ಬೆಂಗಳೂರಿನೊಂದಿಗಿನ ತಮ್ಮ ಅವಿನಾಭಾವ ನಂಟನ್ನು ಸ್ಮರಿಸಿದ್ದಾರೆ. “ನಾನು ಹುಟ್ಟಿ ಬೆಳೆದ, ಓಡಾಡಿದ, ನನ್ನ ಶಾಲಾ-ಕಾಲೇಜು ಶಿಕ್ಷಣವನ್ನು ಪೂರೈಸಿದ ಕ್ಷೇತ್ರದ ಮತದಾರರ ಪಟ್ಟಿಯಿಂದಲೇ ನನ್ನ ಹೆಸರನ್ನು ತೆಗೆದುಹಾಕಲಾಗಿದೆ. ನಟನಾ ಶಾಲೆಗೆ ಹೋಗಿದ್ದು, ನನ್ನ ಸಿನಿಮಾಗಳ ಆರಂಭಿಕ ಜೀವನ ಕಳೆದಿದ್ದು ಇದೇ ಊರಿನಲ್ಲಿ. ಅಷ್ಟೇ ಏಕೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಆದರೂ ಸಹ ಇಂದು ಮತದಾರರ ಪಟ್ಟಿಯಲ್ಲಿ ನನ್ನ ಹೆಸರಿಲ್ಲ. ಇದು ತಮಾಷೆಯಲ್ಲದೆ ಮತ್ತೇನು?” ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. (ಪ್ರಕಾಶ್ ರಾಜ್ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ‘ಬೆಂಗಳೂರು ಕೇಂದ್ರ’ ಕ್ಷೇತ್ರದಿಂದ ಸ್ಪರ್ಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು).

ಇದು ಕೇವಲ ತಮ್ಮೊಬ್ಬರ ಸಮಸ್ಯೆಯಲ್ಲ, ಬದಲಾಗಿ ವ್ಯವಸ್ಥಿತ ಲೋಪ ಎಂದು ಆರೋಪಿಸಿರುವ ಅವರು, “ಮತದಾರರ ಪಟ್ಟಿ ಪರಿಷ್ಕರಣೆ (SIR/SSR) ನೆಪವೊಡ್ಡಿ ಬೆಂಗಳೂರಿನಲ್ಲಿ ಲಕ್ಷಾಂತರ ಜನರ ಮತಗಳನ್ನು ಅಳಿಸಿಹಾಕಲಾಗಿದೆ. ಏಕಾಏಕಿ ಈ ರೀತಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ದುರದೃಷ್ಟಕರ ಮತದಾರರಲ್ಲಿ ನಾನೂ ಒಬ್ಬನಾಗಿದ್ದೇನೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಮತದಾನ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಸಾರ್ವಜನಿಕರ ಹಕ್ಕುಗಳನ್ನು ಕಸಿಯುವ ರೀತಿಯಲ್ಲಿ ಈ ರೀತಿ ಲಕ್ಷಾಂತರ ಮತಗಳನ್ನು ಡಿಲೀಟ್ ಮಾಡಿರುವುದು ಎಷ್ಟು ಸರಿ? ಇಂತಹ ಗಂಭೀರ ತಪ್ಪುಗಳು ಹೇಗೆ ಸಾಧ್ಯವಾಗುತ್ತವೆ?” ಎಂದು ಅವರು ಚುನಾವಣಾ ಆಯೋಗ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಕಾಶ್ ರಾಜ್ ಅವರ ಈ ವಿಡಿಯೊ ಅಭಿಯಾನ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಮತದಾರರ ಪಟ್ಟಿಯಲ್ಲಿನ ನಿರಂತರ ಗೊಂದಲಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ನೆಟ್ಟಿಗರು ತಮ್ಮ ಅಥವಾ ತಮ್ಮ ಕುಟುಂಬದವರ ಹೆಸರುಗಳೂ ಇದೇ ರೀತಿ ಪಟ್ಟಿಯಿಂದ ನಾಪತ್ತೆಯಾಗಿರುವ ಬಗ್ಗೆ ಕಮೆಂಟ್‌ಗಳ ಮೂಲಕ ದನಿಗೂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | ದಲಿತ ಬಾಲಕಿ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ; ಸಂತ್ರಸ್ತೆ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ದೈಹಿಕ...

ಬೀದರ್‌ | ಸತ್ಯಶುದ್ಧ ಕಾಯಕ, ಪ್ರಾಮಾಣಿಕತೆಯಿಂದ ಜೀವನದಲ್ಲಿ ಯಶಸ್ಸು: ಬಸವಲಿಂಗ ಪಟ್ಟದ್ದೇವರು

ಭಾಲ್ಕಿ: ಸತ್ಯಶುದ್ಧ ಕಾಯಕ, ಕಾಯಕನಿಷ್ಠೆ, ಪ್ರಾಮಾಣಿಕ ನಡೆ ಹಾಗೂ ನಿರಂತರ ಪರಿಶ್ರಮದಿಂದ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ ಕಲಿಯುವುದು ಯಾವಾಗ?

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ...

ಬೀದರ್‌ | ಹುಬ್ಬಳಿಯಲ್ಲಿ ನ.17ರಂದು ಖಾಸಗಿ ಶಾಲೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಬೇಡಿಕೆಗಳ...