Viral Video| ಕರಣ್ ಥಾಪರ್ ಪ್ರಶ್ನೆಗೆ ತಬ್ಬಿಬ್ಬಾದ ಪ್ರಶಾಂತ್ ಕಿಶೋರ್; ಬೆವರಿಳಿಸಿದ ನೆಟ್ಟಿಗರು

Date:

ಸಂದರ್ಶನದ ವೇಳೆ ಪತ್ರಕರ್ತ ಕರಣ್ ಥಾಪರ್ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಬೆವರಿಳಿಸಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

- Advertisement -

ಇತ್ತೀಚಿನ ಸಂದರ್ಶನವೊಂದರಲ್ಲಿ, ಥಾಪರ್ ಅವರು ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಎಕ್ಸ್‌ (ಟ್ವಿಟ್ಟರ್) ಪೋಸ್ಟ್‌ ಒಂದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ ಪ್ರಶಾಂತ್ ಮಾತ್ರ ತಾನು ಆ ರೀತಿ ಹೇಳಿಕೆ ನೀಡೇ ಇಲ್ಲ ಎಂದು ವಾದಿಸುವ ಮೂಲಕ ಈ ಟ್ರೋಲಿಗರಿಗೆ ಬಲಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ಮೇ 2022 ಮತ್ತು ಸೆಪ್ಟೆಂಬರ್ 2023ರಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಕಿಶೋರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಆದರೆ, ಸಂದರ್ಶನದ ವೇಳೆ ಕಿಶೋರ್ ಅವರು ಕಾಂಗ್ರೆಸ್ ಬಗ್ಗೆ ಈ ಹಿಂದೆ ಹೇಳಿದ್ದನ್ನೆಲ್ಲಾ ನಿರಾಕರಿಸಿದ್ದಾರೆ.

ಥಾಪರ್ ಅವರು ಪ್ರಶಾಂತ್‌ರ ಈ ಹಿಂದಿನ ಹೇಳಿಕೆಯನ್ನು ಉಲ್ಲೇಖ ಮಾಡಿದಾಗ ಆಕ್ರೋಶಗೊಂಡ ಪ್ರಶಾಂತ್ ಏರುದನಿಯಲ್ಲಿ ಥಾಪರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ತಬ್ಬಿಬ್ಬಾಗಿದ್ದಾರೆ.

ಇದನ್ನು ಓದಿದ್ದೀರಾ?  ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಕಾಂಗ್ರೆಸ್ 100 ಸ್ಥಾನಗಳನ್ನು ಕೂಡಾ ಗೆಲ್ಲುವುದು ಕಷ್ಟ ಎಂದು ಸಂದರ್ಶನದಲ್ಲಿ ಕಿಶೋರ್ ಭವಿಷ್ಯ ನುಡಿದಿದ್ದರು. ಆದರೆ ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಭವಿಷ್ಯಗಳು ಸುಳ್ಳಾಗಿರುವುದನ್ನು ಥಾಪರ್ ಪ್ರಶ್ನಿಸಿದ್ದಾರೆ.

ಈ ಸಂದರ್ಶನದಲ್ಲಿ ನಡೆದ ಈ ವಾಗ್ವಾದವನ್ನು ಎಡಿಟ್ ಮಾಡದೆಯೇ ‘ದಿ ವೈರ್’ ಮಾಧ್ಯಮ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪಬ್ಲಿಷ್ ಮಾಡಿದ್ದು, ಪ್ರಶಾಂತ್ ಕಿಶೋರ್ ಅವರ ಟ್ವೀಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಹಾಕಿದೆ. ತಾನು ನೀಡಿದ ಹೇಳಿಕೆಯನ್ನು ನೀಡೇ ಇಲ್ಲ ಎಂದು ಹೇಳುವ ಮೂಲಕ ಈ ಪ್ರಶಾಂತ್ ಕಿಶೋರ್ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡಾ ಈಗ ಪ್ರಶಾಂತ್ ಕಿಶೋರ್‌ರ ಟ್ವೀಟ್‌ನ ಸ್ಕ್ರೀನ್‌ಶಾಟ್‌ ಮತ್ತು ಈ ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದೆ. ಜೊತೆಗೆ ಈ ಹಿಂದೆ ಥಾಪರ್ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀರು ಕುಡಿಯುತ್ತಿರುವ ಮತ್ತು ಈಗ ಪ್ರಶಾಂತ್ ಕಿಶೋರ್ ಥಾಪರ್ ಸಂದರ್ಶನದಲ್ಲಿ ನೀರು ಕುಡಿಯುವ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರು, “ನೀರು ಉಳಿಸಿ. ಕರಣ್ ಥಾಪರ್‌ಗೆ ಸಂದರ್ಶನ ನೀಡಬೇಡಿ” ಎಂದು ಗೇಲಿ ಮಾಡಿದ್ದಾರೆ.

ಇನ್ನು “ನಾನು ಈ ರೀತಿ ಹೇಳಿದ ವಿಡಿಯೋವನ್ನು ನೀವು ತೋರಿಸಿದರೆ ನಾನು ನನ್ನ ಉದ್ಯೋಗವನ್ನೇ ತ್ಯಜಿಸುತ್ತೇನೆ, ನೀವು ತಪ್ಪಾಗಿದ್ದರೆ ನೀವು ಕ್ಷಮೆ ಕೇಳಬೇಕು” ಎಂದೂ ಸಂದರ್ಶನದಲ್ಲಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಈಗ ಪ್ರಶಾಂತ್ ಕಿಶೋರ್ ಟ್ವೀಟ್‌ ಅನ್ನು ಹಂಚಿಕೊಂಡಿರುವ ನೆಟ್ಟಿಗರು, “ಪ್ರಶಾಂತ್ ಕಿಶೋರ್ ಅವರೇ ಯಾವಾಗ ಉದ್ಯೋಗ ತ್ಯಜಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...