ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

Date:

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ ಹೊಟ್ಟೆಗೆ ಒದ್ದು ಕ್ರೌರ್ಯ ಮೆರೆದಿದ್ದಾರೆ. ಪೊಲೀಸರ ಕ್ರೌರ್ಯದಿಂದಾಗಿ ಆಕೆ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಿಕೋಹಾಬಾದ್‌ನಲ್ಲಿ‌ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಉಪನಿರೀಕ್ಷಕರು ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರವಿವಾರ ರಾತ್ರಿ ಉಪನಿರೀಕ್ಷಕ ಧರಮ್‌ಪಾಲ್ ಸಿಂಗ್ ನೇತೃತ್ವದ ಪೊಲೀಸ್ ತಂಡವು ಕಳ್ಳತನ ಪ್ರಕರಣದ ಆರೋಪಿ ಗೌರವ್ ಎಂಬಾತನನ್ನು ಬಂಧಿಸಲು ಆತನ ಮನೆಗೆ ದಾಳಿ ನಡೆಸಿತ್ತು. ಈ ವೇಳೆ ಗೌರವ್ ಪತ್ನಿ ಅಂಜಲಿ (28), ತನ್ನ ಪತಿಯನ್ನು ಕರೆದೊಯ್ಯದಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಸಬ್-ಇನ್ಸ್‌ಪೆಕ್ಟರ್ ಧರಮ್‌ಪಾಲ್ ಸಿಂಗ್, ಗರ್ಭಿಣಿ ಅಂಜಲಿ ಅವರ ಹೊಟ್ಟೆಗೆ ಬಲವಾಗಿ ಒದ್ದಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸರು ಗೌರವ್‌ನನ್ನು ವಶಕ್ಕೆ ಪಡೆದು ತೆರಳಿದ ಬಳಿಕ, ತೀವ್ರ ಅಸ್ವಸ್ಥಗೊಂಡ ಅಂಜಲಿ ಅವರನ್ನು ಶಿಕೋಹಾಬಾದ್‌ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದರಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಫಿರೋಝಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.

ಸದ್ಯ ನವಜಾತ ಶಿಶುವಿನ ಸ್ಥಿತಿಯೂ ಚಿಂತಾಜನಕವಾಗಿದ್ದು, ಆಗ್ರಾದ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಯ ಸಾವು ಗ್ರಾಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...