ಹೆರಿಗೆಗಾಗಿ 6 ಕಿ.ಮೀ ನಡೆದು ಬಂದ ಗರ್ಭಿಣಿ ಸಾವು

Date:

ಹೆರಿಗೆಗಾಗಿ ತನ್ನ ಗ್ರಾಮದಿಂದ ಆಸ್ಪತ್ರೆಗೆ 6 ಕಿ.ಮೀ ನಡೆದು ಬಂದ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಿಜೆಪಿ ನೇತೃತ್ವದ ಮಹಾಯುತಿ ಆಡಳಿತವಿರುವ ಮಹಾರಾಷ್ಟ್ರದಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ಮತ್ತು ವೈದ್ಯಕೀಯ ಸೌಲಭ್ಯಗಳಿಲ್ಲದೆ, ಆಸ್ಪತ್ರೆಗೆ ತೆರಳವು ಬೇರಾವುದೇ ವಾಹನ ವ್ಯವಸ್ಥೆಯೂ ದೊರೆಯದೆ ಆಕೆ ನಡೆದುಬಂದು, ಬಳಿಕ ಆಸ್ಪತ್ರೆಗೆ ತೆರಳಿದ್ದರು ಎಂದು ವರದಿಯಾಗಿದೆ.

- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ತಾಲೂಕಿನ ಆಲ್ದಂಡಿ ಟೋಲಾದ ನಿವಾಸಿ ಆಶಾ ಸಂತೋಷ್ ಕಿರಂಗ (24) ಮೃತ ಗರ್ಭಿಣಿ. “ಆಲ್ದಂಡಿ ಟೋಲಾ ಗ್ರಾಮಕ್ಕೆ ಮುಖ್ಯ ರಸ್ತೆಯಿಂದ ಸಂಪರ್ಕ ಕಡಿತಗೊಂಡಿದೆ. ಅಲ್ಲಿ ಯಾವುದೇ ಹೆರಿಗೆ ಸೌಲಭ್ಯಗಳು ಲಭ್ಯವಿಲ್ಲ. ಸಮಯೋಚಿತ ನೆರವಿಗಾಗಿ ಆಶಿಸುತ್ತಾ, ಆಕೆ ತನ್ನ ಪತಿಯೊಂದಿಗೆ ಕಾಡಿನ ಹಾದಿಯಲ್ಲಿ 6 ಕಿ.ಮೀ ನಡೆದು ಪೆಥಾದಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದಿದ್ದಾರೆ. ಅಲ್ಲಿಂದ ಆಕೆಯನ್ನು ಹೆಡ್ರಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಕೆಗೆ ವೈದ್ಯರು ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆದರೆ, ಆ ವೇಳೆಗಾಗಲೇ ಮಗು ಸಾವನ್ನಪ್ಪಿತ್ತು. ರಕ್ತದೊತ್ತಡ ಹೆಚ್ಚಾದ ಕಾರಣ, ಮಹಿಳೆ ಕೂಡ ಸಾವನ್ನಪ್ಪಿದರು” ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಹಠಾತ್ ಹೆರಿಗೆ ನೋವು ಮತ್ತು ಸಮಸ್ಯೆಗಳು ಎದುರಾದ ಕಾರಣ ಸಾವು ಸಂಭವಿಸಿರಬಹುದು. ವೈದ್ಯರು ಆಕೆಯನ್ನು ಉಳಿಸಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ. ತಾಲೂಕು ಆರೋಗ್ಯ ಅಧಿಕಾರಿಯಿಂದ ವಿವರವಾದ ವರದಿಯನ್ನು ಕೇಳಲಾಗಿದೆ. ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ” ಎಂದು ಗಡ್ಚಿರೋಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪ್ರತಾಪ್ ಶಿಂಧೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...