‘ಪ್ರೀಮಿಯಂ ನಿಮ್ಮದು, ಲಾಭ ಅದಾನಿಗೆ’; ಎಲ್‌ಐಸಿಯ 5,000 ಕೋಟಿ ರೂ. ಹೂಡಿಕೆಗೆ ರಾಹುಲ್ ಆಕ್ಷೇಪ

Date:

ಅದಾನಿ ಗ್ರೂಪ್‌ನಲ್ಲಿ ಭಾರತೀಯ ವಿಮಾ ಕಂಪನಿ (ಎಲ್‌ಐಸಿ) 5,000 ಕೋಟಿ ರೂ. ಹೂಡಿಕೆ ಮಾಡಿರುವುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

- Advertisement -

“ಸಾರ್ವಜನಿಕರ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಕಂಪನಿಯವರು ಕಳೆದ ವಾರ ನೀಡಿದ ಪ್ರಕಟಣೆಯಲ್ಲಿ, “ಎಲ್‌ಐಸಿಯಿಂದ ರೂ. 5,000 ಕೋಟಿ ಸಂಗ್ರಹಿಸಲಾಗಿದೆ” ಎಂದು ತಿಳಿಸಲಾಗಿತ್ತು.

15 ವರ್ಷಗಳ ಅವಧಿಯಲ್ಲಿ ಮರುಪಾವತಿ ಮಾಡುವ ಷರತ್ತಿನ ಮೇಲೆ, ವರ್ಷಕ್ಕೆ 7.75% ಬಡ್ಡಿ ದರದಲ್ಲಿ ಎಲ್‌ಐಸಿಯಿಂದ ಅದಾನಿ ಕಂಪನಿಯು ಹಣ ಪಡೆದುಕೊಂಡಿದೆ.

ಇದನ್ನೂ ಓದಿರಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ; ಗಗನ್‌ ದೀಪ್‌ ಅರೆಸ್ಟ್

“ನಮ್ಮಂತಹ ಸಾಮಾನ್ಯ ಜನರ ವಿಮಾ ಕಂತುಗಳ ಮೂಲಕ ಸಂಗ್ರಹಿಸಿದ ಎಲ್‌ಐಸಿ ಹಣವನ್ನು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ಟ್ವೀಟ್ ಮಾಡುವ ಮೂಲಕ, ಎಲ್‌ಐಸಿ ಹೂಡಿಕೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದ ದೊಡ್ಡ ವಿಮಾ ಕಂಪನಿ ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ). ಇದು ಸರ್ಕಾರಿ ಕಂಪನಿಯಾಗಿದ್ದು, ನಮ್ಮಂತಹ ಸಾಮಾನ್ಯ ಜನರು ಕಟ್ಟುವ ವಿಮಾ ಕಂತುಗಳಿಂದ ಸಂಗ್ರಹವಾದ ಹಣವನ್ನು ವಿವಿಧೆಡೆ ಹೂಡಿಕೆ ಮಾಡುತ್ತದೆ. ಆದರೆ ಅದಾನಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂಬ ಗಂಭೀರ ಆರೋಪಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...