ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 33ರಿಂದ 37ಕ್ಕೆ ಏರಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

Date:

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು ತಕ್ಷಣವೇ 33ರಿಂದ 37ಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ಹೊರಡಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಸಹಿ ಹಾಕಿದ್ದಾರೆ. “ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯಿದೆ, 1956ರ ಸೆಕ್ಷನ್ 2ರಲ್ಲಿ, ‘ಮೂವತ್ತಮೂರು’ ಪದಕ್ಕೆ ಬದಲಾಗಿ, ‘ಮೂವತ್ತೇಳು’ ಪದವನ್ನು ಬದಲಿಸಬೇಕು” ಎಂದು ಸುಗ್ರೀವಾಜ್ಞೆ ಹೇಳುತ್ತದೆ. 37ರಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸೇರಿಲ್ಲ. ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿದರೆ 38 ಆಗಲಿದೆ.

- Advertisement -

ಮೇ 5ರಂದು ಕೇಂದ್ರ ಸಚಿವ ಸಂಪುಟವು ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ, 2026 ಅನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಸ್ತಾವನೆಯನ್ನು ಅನುಮೋದಿಸಿತ್ತು. ಆದರೆ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? ದೆಹಲಿ ಸುಗ್ರೀವಾಜ್ಞೆ ವಿವಾದ; ಕೇಂದ್ರಕ್ಕೆ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್

ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ಸುಗ್ರೀವಾಜ್ಞೆಗಳನ್ನು ಹೊರಡಿಸಲು 123ನೇ ವಿಧಿಯು ಅಧಿಕಾರ ನೀಡುತ್ತದೆ. ಆದಾಗ್ಯೂ, ಸರ್ಕಾರವು ಆರು ತಿಂಗಳೊಳಗೆ ಅಥವಾ ಸಂಸತ್ತಿನ ಮರು ಸಭೆಯ ಆರು ವಾರಗಳ ಒಳಗೆ ಸಂಸತ್ತಿನಲ್ಲಿ ಅದನ್ನು ಅಂಗೀಕರಿಸಲು ಸಾಧ್ಯವಾಗದಿದ್ದರೆ ಸುಗ್ರೀವಾಜ್ಞೆಯು ರದ್ದಾಗುತ್ತದೆ. ಜುಲೈನಲ್ಲಿ ಮಳೆಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಈ ನಡುವೆ ಈಗ ಸುಗ್ರೀವಾಜ್ಞೆಯನ್ನು ತರುವ ತುರ್ತು ಸ್ಪಷ್ಟವಾಗಿಲ್ಲ.

ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳವಾದರೆ ಸುಪ್ರೀಂ ಕೋರ್ಟ್ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು, ತ್ವರಿತ ನ್ಯಾಯವನ್ನು ಒದಗಿಸಲು ಅನುವು ಮಾಡಿಕೊಡುತ್ತದೆ ಎಂದು ಸರ್ಕಾರ ಈ ಹಿಂದೆ ಹೇಳಿತ್ತು. ಸಂವಿಧಾನವು ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಏಳು ನ್ಯಾಯಮೂರ್ತಿಗಳಿಗೆ ಅವಕಾಶ ನೀಡಿದ್ದರೂ, ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯ್ದೆ 1956 ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹತ್ತಕ್ಕೆ ಹೆಚ್ಚಿಸಲು ಅವಕಾಶ ನೀಡಿದೆ.

1960ರಲ್ಲಿ ಕಾಯ್ದೆಯ ತಿದ್ದುಪಡಿ ಮೂಲಕ ನ್ಯಾಯಮೂರ್ತಿಗಳ ಸಂಖ್ಯೆಯನ್ನು 13ಕ್ಕೆ ಮತ್ತು 1977ರ ತಿದ್ದುಪಡಿ ಮೂಲಕ 17ಕ್ಕೆ ಹೆಚ್ಚಿಸಲಾಗಿದೆ. 1979ರ ಅಂತ್ಯದವರೆಗೆ ದೇಶದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ 15 ನ್ಯಾಯಮೂರ್ತಿಗಳಿಗೆ ಸೀಮಿತಿಗೊಳಿಸಲಾಗಿತ್ತು. ನಂತರ ಮುಖ್ಯ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ನಿರ್ಬಂಧವನ್ನು ತೆಗೆದುಹಾಕಲಾಗಿತ್ತು.

1986ರಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಬಲವನ್ನು 17ರಿಂದ 25 ಕ್ಕೆ ಮತ್ತು 2008 ರಲ್ಲಿ 25ರಿಂದ 30ಕ್ಕೆ ಹೆಚ್ಚಿಸಲು ಕಾನೂನು ತಿದ್ದುಪಡಿ ಮಾಡಲಾಯಿತು. ಅದಾದ ಬಳಿಕ ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಕಾಯ್ದೆ, 2019 ಮೂಲಕ ಕೊನೆಯದಾಗಿ 30ರಿಂದ 33 ಕ್ಕೆ ಹೆಚ್ಚಿಸಲಾಗಿತ್ತು. ಈಗ 33ರಿಂದ 37ಕ್ಕೆ ಏರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...