ಲಡಾಖ್‌ನಲ್ಲಿ ಜಮ್ಮು-ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆ: ರಾಷ್ಟ್ರಪತಿ ಮುರ್ಮು ಅಸ್ತು

Date:

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜಂಟಿ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನಿಯಮಿತ ಪೀಠವನ್ನು ಸ್ಥಾಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ಲಡಾಖ್‌ನ ನಿವಾಸಿಗಳು ನ್ಯಾಯಕ್ಕಾಗಿ ಶ್ರೀನಗರ ಅಥವಾ ಜಮ್ಮುವಿಗೆ ದೂರದ ಪ್ರಯಾಣ ಬೆಳೆಸುವ ಕಷ್ಟಕ್ಕೆ ಮುಕ್ತಿ ಸಿಗಲಿದೆ.

- Advertisement -

ರಾಷ್ಟ್ರಪತಿಯವರು ಸಂವಿಧಾನದ ವಿಧಿ 240 ಮತ್ತು ಜಮ್ಮು-ಕಾಶ್ಮೀರ ಮರುಸಂಘಟನೆ ಕಾಯ್ದೆ 2019ರ ಸೆಕ್ಷನ್ 58(2)ರ ಅಡಿಯಲ್ಲಿ ‘ದಿ ಯೂನಿಯನ್ ಟೆರಿಟರಿ ಆಫ್ ಲಡಾಖ್ (ಸಿಟ್ಟಿಂಗ್ ಆಫ್ ಬೆಂಚ್ ಆಫ್ ದಿ ಹೈಕೋರ್ಟ್ ಆಫ್ ಜಮ್ಮು ಮತ್ತು ಕಾಶ್ಮೀರ, ಮತ್ತು ಲಡಾಖ್ ಇನ್ ಲಡಾಖ್) ವಿನಿಯಮಗಳು-2026’ ನಿಯಮಾವಳಿಗೆ ಅನುಮೋದನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಅಸ್ತು: ಜಡ್ಜ್‌ಗಳ ಸಂಖ್ಯೆ 37ಕ್ಕೆ ಏರಿಕೆ

ಜಮ್ಮು-ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಲಡಾಖ್‌ನ ಉಪರಾಜ್ಯಪಾಲರ (LG) ಅನುಮೋದನೆಯೊಂದಿಗೆ ಲಡಾಖ್‌ನಲ್ಲಿ ಪೀಠವು ಕುಳಿತುಕೊಳ್ಳುವ ನಿರ್ದಿಷ್ಟ ಸ್ಥಳವನ್ನು (ಉದಾಹರಣೆಗೆ ಲೇಹ್ ಅಥವಾ ಕಾರ್ಗಿಲ್) ನಿಗದಿಪಡಿಸಲಿದ್ದಾರೆ. ಈ ವಿನಿಯಮದಿಂದಾಗಿ ಹೈಕೋರ್ಟ್‌ನ ಮೂಲ ಕೇಂದ್ರ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.

ಲಡಾಖ್‌ಗೆ ಸಂಬಂಧಿಸಿದ ಕೆಲವು ನಿರ್ದಿಷ್ಟ ಪ್ರಮುಖ ಪ್ರಕರಣಗಳನ್ನು ಜಮ್ಮು ಅಥವಾ ಶ್ರೀನಗರದ ಪೀಠಗಳಲ್ಲೇ ವಿಚಾರಣೆ ನಡೆಸುವ ವಿವೇಚನಾಧಿಕಾರವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಲಾಗಿದೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ, ಎರಡೂ ಪ್ರದೇಶಗಳಿಗೂ ಒಂದೇ ಹೈಕೋರ್ಟ್ ಕಾರ್ಯನಿರ್ವಹಿಸುತ್ತಿತ್ತು. ಲಡಾಖ್‌ನ ಕಠಿಣ ಭೌಗೋಳಿಕ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಹಾಗೂ ವಕೀಲರು ಜಮ್ಮು ಮತ್ತು ಶ್ರೀನಗರದ ನ್ಯಾಯಾಲಯಗಳಿಗೆ ಅಲೆಯುವುದು ಸವಾಲಾಗಿತ್ತು. ಈ ನೂತನ ಪೀಠದ ಸ್ಥಾಪನೆಯಿಂದ ಸ್ಥಳೀಯವಾಗಿ ಕಾನೂನು ಹೋರಾಟ ನಡೆಸಲು ಸುಲಭವಾಗಲಿದೆ. ಲಡಾಖ್ ಆಡಳಿತವು ಅಧಿಕೃತ ಗೆಜೆಟ್‌ನಲ್ಲಿ ಸೂಚಿಸುವ ದಿನಾಂಕದಿಂದ ಈ ಕಾಯ್ದೆ ಜಾರಿಗೆ ಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...