ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌: ಹೊಸ ಸರ್ಕಾರ ರಚನೆಗೆ ಹಾದಿ ಸುಗಮ

Date:

Advertisements

ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಹಿಂದೆ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾಗಿದೆ. 31ನೇ ಅಕ್ಟೋಬರ್ 2019ರ ಆದೇಶವು ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಲು ಸಕಲ ತಯಾರಿ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ 2019ರ ಅ.31ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಯಿತು. ನಂತರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಯಿತು.

2019ರ ಅ.31ಕ್ಕೂ ಮುನ್ನ ಬಿಜೆಪಿಯು ಪಿಡಿಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ 2017ರ ರಿಂದ ಕೇಂದ್ರ ಆಡಳಿತವು ಮುಂದುವರಿದಿತ್ತು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X