ಮಾಂಸಾಹಾರ ತಿನ್ನದಂತೆ ಪ್ರಿಯಕರ ನಿರಂತರವಾಗಿ ಒತ್ತಡ ಹಾಕುತ್ತಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದಿದೆ.
ಏರ್ ಇಂಡಿಯಾ ಸಂಸ್ಥೆಯಲ್ಲಿ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಸೃಷ್ಟಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಆಕೆ ತಾನು ನೆಲೆಸಿದ್ದ ಅಂಧೇರಿಯ ಮಯೋಲ್ ಪ್ರದೇಶದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಯುವತಿಯ ಪ್ರಿಯಕರ ಆದಿತ್ಯ ಪಂಡಿತ್‌ನನ್ನು (27) ಪೊಲೀಸರು ಬಂಧಿಸಿದ್ದಾರೆ.
ಯುವತಿಗೆ ಆದಿತ್ಯ ಪದೇ-ಪದೇ ಅವಮಾನಿಸುತ್ತಿದ್ದ. ಮಾಂಸಾಹಾರ ಸೇವಿಸುತ್ತಿದ್ದ ಕಾರಣಕ್ಕೆ ನಿಂದಿಸುತ್ತಿದ್ದ. ಆಹಾರ ಪದ್ದತಿಯನ್ನು ಬದಲಾಯಿಸಿಕೊಳ್ಳುವಂತೆ ನಿರಂತರವಾಗಿ ಒತ್ತಡ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆದಿತ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 108 (ಆತಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸೃಷ್ಟಿ ಉತ್ತರಪ್ರದೇಶ ಮೂಲದವರಾಗಿದ್ದು, ಕಳೆದ 7 ತಿಂಗಳಿಂದ ಮುಂಬೈನಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
