ಮಾಂಸಾಹಾರ ತಿನ್ನದಂತೆ ಗೆಳೆಯನಿಂದ ಒತ್ತಡ; ಯುವತಿ ಆತ್ಮಹತ್ಯೆ

Date:

ಮಾಂಸಾಹಾರ ತಿನ್ನದಂತೆ ಪ್ರಿಯಕರ ನಿರಂತರವಾಗಿ ಒತ್ತಡ ಹಾಕುತ್ತಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದಿದೆ.

- Advertisement -

ಏರ್‌ ಇಂಡಿಯಾ ಸಂಸ್ಥೆಯಲ್ಲಿ ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ಸೃಷ್ಟಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಆಕೆ ತಾನು ನೆಲೆಸಿದ್ದ ಅಂಧೇರಿಯ ಮಯೋಲ್‌ ಪ್ರದೇಶದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಯುವತಿಯ ಪ್ರಿಯಕರ ಆದಿತ್ಯ ಪಂಡಿತ್‌ನನ್ನು (27) ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಯುವತಿಗೆ ಆದಿತ್ಯ ಪದೇ-ಪದೇ ಅವಮಾನಿಸುತ್ತಿದ್ದ. ಮಾಂಸಾಹಾರ ಸೇವಿಸುತ್ತಿದ್ದ ಕಾರಣಕ್ಕೆ ನಿಂದಿಸುತ್ತಿದ್ದ. ಆಹಾರ ಪದ್ದತಿಯನ್ನು ಬದಲಾಯಿಸಿಕೊಳ್ಳುವಂತೆ ನಿರಂತರವಾಗಿ ಒತ್ತಡ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆದಿತ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ 108 (ಆತಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೃಷ್ಟಿ ಉತ್ತರಪ್ರದೇಶ ಮೂಲದವರಾಗಿದ್ದು, ಕಳೆದ 7 ತಿಂಗಳಿಂದ ಮುಂಬೈನಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

image 25

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...