ಪೊಲೀಸರ ಕಿರುಕುಳದ ಆರೋಪದ ನಂತರ ಅಯೋಧ್ಯೆ ದೇವಸ್ಥಾನದಲ್ಲಿ ಅರ್ಚಕರ ಶವ ಪತ್ತೆ

Date:

  • ಮೃತದೇಹ ಪತ್ತೆಯಾಗುವ ಮೊದಲು ಫೇಸ್‌ಬುಕ್‌ ಲೈವ್‌ ಮಾಡಿದ್ದ ಅರ್ಚಕ
  • ಮೃತರು ತಮ್ಮ 12ನೇ ವಯಸ್ಸಿನಿಂದ ಅಯೋಧ್ಯೆ ದೇಗುಲದಲ್ಲಿ ವಾಸಿಸುತ್ತಿದ್ದರು

ಪೊಲೀಸರ ಕಿರುಕುಳದ ಆರೋಪದ ನಂತರ ಅಯೋಧ್ಯೆ ದೇವಸ್ಥಾನದ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

- Advertisement -

ರಾಮ್ ಶಂಕರ್ ದಾಸ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸ್ಥಳೀಯ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಏತನ್ಮಧ್ಯೆ, ಪೊಲೀಸ್‌ ಅಧಿಕಾರಿಗಳು ಅರ್ಚಕರು ಮಾದಕ ವ್ಯಸನಿಯಾಗಿದ್ದು, ಅವರು ಮಾಡಿರುವ ಆರೋಪಗಳು ಆಧಾರರಹಿತ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

28ರಿಂದ 30 ವರ್ಷ ವಯಸ್ಸಿನವರು ಎಂದು ಅಧಿಕಾರಿಗಳು ಹೇಳಿರುವ ರಾಮ್ ಶಂಕರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಫೇಸ್‌ಬುಕ್‌ ಲೈವ್‌ನಲ್ಲಿ ತಮಗೆ ಇಬ್ಬರು ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಮತ್ತು ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ. ನಾನು ಆ ಹಣವನ್ನು ಎಲ್ಲಿಂದ ತರಬೇಕು ಎಂದು ತಿಳಿದಿಲ್ಲ ಎಂದು ಆರೋಪಿಸಿದ್ದರು.

ಈ ಸುದ್ದಿ ಓದಿದ್ದೀರಾ? ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ, ಪ್ರಣಾಳಿಕೆ ಭರವಸೆ ಈಡೇರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

“ಈ ವರ್ಷದ ಜನವರಿಯಲ್ಲಿ ಮುಖ್ಯ ಅರ್ಚಕ ರಾಮ್ ಸರಣ್ ದಾಸ್ ನಾಪತ್ತೆಯಾದ ನಂತರ ರಾಮ್ ಶಂಕರ್ ದಾಸ್ ದೇವಸ್ಥಾನದಲ್ಲಿ ಒಬ್ಬರೇ ಉಳಿದುಕೊಂಡಿದ್ದರು. ಸೋಮವಾರ ಬೆಳಿಗ್ಗೆ ನರಸಿಂಗ ದೇವಸ್ಥಾನದ ಅರ್ಚಕರು ‘ಎಷ್ಟು ಬಾರಿ ಬಡಿದರೂ ರಾಮ್‌ ಶಂಕರ್‌ ಕೋಣೆಯ ಬಾಗಿಲು ತೆರೆಯುತ್ತಿಲ್ಲ’ ಎಂದು ದೂರು ನೀಡಿದ್ದರು. ನಮ್ಮ ತಂಡ, ಎಸ್‌ಪಿ ಮತ್ತು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ದೇವಾಲಯದ ಕೋಣೆಯ ಬಾಗಿಲುಗಳನ್ನು ಒಡೆದು ನೋಡಿದ ನಂತರ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅಯೋಧ್ಯೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಅವರು ಈ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ” ಎಂದು ಅಯೋಧ್ಯೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುವನ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಮ್ ಶಂಕರ್ ತಮ್ಮ 12ನೇ ವಯಸ್ಸಿನಿಂದ ದೇವಸ್ಥಾನದಲ್ಲಿ ವಾಸಿಸುತ್ತಿದ್ದರು. ಅವರ ಎಲ್ಲ ವಿಡಿಯೋಗಳನ್ನು ತನಿಖೆ ಮಾಡಲಾಗುವುದು. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ, ದೇವಾಲಯದ ಪ್ರಧಾನ ಅರ್ಚಕ 80 ವರ್ಷದ ರಾಮ್ ಸರಣ್ ದಾಸ್, ಪ್ರಯಾಗ್‌ರಾಜ್‌ಗೆ ಹೋದವರು ಮರಳಿ ಬಂದಿರಲಿಲ್ಲ. ಆರಂಭದಲ್ಲಿ ಅವರ ಬಗ್ಗೆ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ನಂತರ ಸುಮಾರು ಎರಡು ತಿಂಗಳ ನಂತರ, ಅದನ್ನು ಅಪಹರಣದ ದೂರಿಗೆ ಬದಲಾಯಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

ಅ. 10ರಂದು ಜನರ ಧ್ವನಿ ಅಡಗಿಸಲು ರೈಲು ಸಂಚಾರವೇ ಸ್ತಬ್ಧ: ಪ್ರತಿಭಟನೆಗೆ ಬೆಚ್ಚಿದ ಸರ್ಕಾರದ ಅಮಾನವೀಯ ನಡೆ!

ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...