ಫಾರಿನ್‌ ಟ್ರಿಪ್‌ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ! 12 ವರ್ಷಗಳಲ್ಲಿ 100 ವಿದೇಶಿ ಪ್ರವಾಸ

Date:

ಪ್ರಧಾನಿ ನರೇಂದ್ರ ಮೋದಿ ಅವರ ದಾಖಲೆಗಳ ಪಟ್ಟಿಗೆ ಇನ್ನೊಂದು ದಾಖಲೆ ಸೇರಿಕೊಂಡಿದೆ. ಅವರು ಪ್ರಸ್ತುತ ಹಮ್ಮಿಕೊಂಡಿರುವ ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳ ಒಂದು ವಾರದ ಪ್ರವಾಸವು, ಕಳೆದ 12 ವರ್ಷಗಳ ಅವರ ಪ್ರಧಾನಿ ಅವಧಿಯ 100ನೇ ವಿದೇಶಿ ಪ್ರವಾಸವಾಗಿದೆ. ಪ್ರಧಾನಿ ಮಂತ್ರಿ ಕಾರ್ಯಾಲಯದ (PMO) ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿಯವರು ತಮ್ಮ 12 ವರ್ಷಗಳ ಅಧಿಕಾರಾವಧಿಯಲ್ಲಿ ಇದುವರೆಗೆ ಒಟ್ಟು 78 ದೇಶಗಳಿಗೆ ಭೇಟಿ ನೀಡಿದ್ದಾರೆ.

- Advertisement -

2014ರ ಮೇ 26ರಂದು ದೇಶದ ಪ್ರಧಾನಿಯಾಗಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡ ಮೋದಿ, ಜೂನ್ 15-16 ರಂದು ಭೂತಾನ್‌ಗೆ ತಮ್ಮ ಚೊಚ್ಚಲ ವಿದೇಶಿ ಪ್ರವಾಸ ಕೈಗೊಂಡಿದ್ದರು. ತಮ್ಮ ಮೊದಲ 5 ವರ್ಷಗಳ ಅವಧಿಯಲ್ಲಿ ಒಟ್ಟು 49 ವಿದೇಶಿ ಪ್ರವಾಸಗಳನ್ನು ಕೈಗೊಂಡಿದ್ದ ಅವರು, ಎರಡನೇ ಅವಧಿಯಲ್ಲಿ 27 ಪ್ರವಾಸಗಳನ್ನು ಪೂರ್ಣಗೊಳಿಸಿದ್ದರು. ಇನ್ನು 2024ರಲ್ಲಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಇಟಲಿ ಭೇಟಿಯೊಂದಿಗೆ ಆರಂಭವಾದ ಜಾಗತಿಕ ಸಂಚಾರ, ಪ್ರಸ್ತುತ ಫ್ರಾನ್ಸ್ ಮತ್ತು ಸ್ಲೋವಾಕಿಯಾ ಭೇಟಿಯ ಮೂಲಕ ಮೂರನೇ ಅವಧಿಯಲ್ಲೇ 24ನೇ ಪ್ರವಾಸವನ್ನು ತಲುಪಿದೆ. ಜೂನ್ 18 ರವರೆಗೆ ನಡೆಯಲಿರುವ ಈ ಪ್ರವಾಸದಲ್ಲಿ ಅವರು G7 ಶೃಂಗಸಭೆಯಲ್ಲಿ ಭಾಗವಹಿಸಿ ಜಾಗತಿಕ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಈ ಪ್ರವಾಸಗಳು ಭಾರತವನ್ನು ಅತ್ಯಂತ ಪ್ರಭಾವಶಾಲಿ ದೇಶವನ್ನಾಗಿ ಬಿಂಬಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎನ್ನುತ್ತಾರೆ ಬೆಂಬಲಿಗರು. ‘ಮೇಕ್ ಇನ್ ಇಂಡಿಯಾ’ ಯೋಜನೆಗೆ ಜಾಗತಿಕ ಹೂಡಿಕೆ ಆಕರ್ಷಿಸುವುದು, ಆಪಲ್ ಅಥವಾ ಸೆಮಿಕಂಡಕ್ಟರ್‌ನಂತಹ ದೈತ್ಯ ಕಂಪನಿಗಳು ಭಾರತದ ಕಡೆ ಮುಖ ಮಾಡುವಂತೆ ಮಾಡಿದ್ದು ಈ ನಿರಂತರ ಪ್ರವಾಸಗಳ ಫಲಶೃತಿ ಎನ್ನಲಾಗುತ್ತಿದೆ. ಆದರೆ, ದೇಶ  ಆಂತರಿಕ ಸಮಸ್ಯೆಗಳಿಂದ ತತ್ತರಿಸುತ್ತಿರುವಾಗ ಅವುಗಳನ್ನು ಪರಿಹರಿಸುವುದನ್ನು ಬಿಟ್ಟು ಜಾಗತಿಕ ನಾಯಕನ ಪಟ್ಟಕ್ಕಾಗಿ ಸಾರ್ವಜನಿಕರ ಕೋಟ್ಯಂತರ ರೂಪಾಯಿ ತೆರಿಗೆ ಹಣವನ್ನು ಅದ್ದೂರಿ ಪ್ರಚಾರ ಮತ್ತು ವಿಮಾನ ಪ್ರಯಾಣಕ್ಕೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ನೆರೆಯ ಚೀನಾದ ಪ್ರಭಾವವನ್ನೇ ಸಂಪೂರ್ಣವಾಗಿ ತಡೆಯಲು ಸಾಧ್ಯವಾಗದಿರುವುದು ಕೂಡ ಈ ವಿದೇಶಾಂಗ ನೀತಿಯ ಮಿತಿಯನ್ನು ತೋರಿಸುತ್ತದೆ ಎಂಬ ವಾದವೂ ಇದೆ.

ಇದನ್ನೂ ಓದಿ: ವ್ಯಕ್ತಿಚಿತ್ರ | ಅಭಿನಯ ಗಾರುಡಿಗ ರಂಗಾಯಣ ರಘು ಈಗ 400 ಚಿತ್ರಗಳ ಸರದಾರ

ದೇಶದಲ್ಲಿ ಸದ್ಯ ಪಿಡುಗಾಗಿ ಮಾರ್ಪಟ್ಟಿರುವ ಪೇಪರ್‌ ಲೀಕ್‌ ಹಗರಣ, ಆಕಾಶ ಮುಟ್ಟಿರುವ ಹಸಿವಿನ ಪ್ರಮಾಣ, ವರ್ಷದಿಂದ ವರ್ಷಕ್ಕೆ ಏರುತ್ತಲೇ ಇರುವ ನಿರುದ್ಯೋಗಿ ಯುವಕರ ಸಂಖ್ಯೆ, ಹೊರದೇಶಗಳಲ್ಲಿ ಭಾರತೀಯರ ಸಾವು, ಈ ಎಲ್ಲವಕ್ಕೂ ಪ್ರಧಾನಿಯವರ ನಿರಂತರ ಮೌನ ಎಲ್ಲಿವರೆಗೆ ಮುಂದುವರೆಯುತ್ತದೆಯೋ ಅಲ್ಲಿವರೆಗೆ ಈ ಅಂತಾರಾಷ್ಟ್ರೀಯ ಒಪ್ಪಂದಗಳು ಮತ್ತು ಜಾಗತಿಕ ಗೌರವಗಳು ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮ್‌ ಗೋಪಾಲ ವರ್ಮಾಗೆ ₹29.67 ಕೋಟಿ ರಿಕವರಿ ನೋಟಿಸ್!

ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ‘ಎಕ್ಲಟಾಂಟ್ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್’...

ಗಾಯಕ ದಿಲ್ಜಿತ್ ಬಳಿ ಕ್ಷಮೆಯಾಚಿಸಿದ ಅಭಿಜೀತ್ ದೀಪ್ಕೆ!

NEET ಪ್ರಶ್ನೆಪತ್ರಿಕೆ ಸೋರಿಕೆ ಕುರಿತಾದ ವಿದ್ಯಾರ್ಥಿ ಪ್ರತಿಭಟನೆಗಳ ಸಂದರ್ಭದಲ್ಲಿ ಗಾಯಕ ದಿಲ್ಜಿತ್...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್ ಗ್ರಂಥಾಲಯಕ್ಕೆ ʼಬೀಗ ಭಾಗ್ಯʼ!

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ...

ಭಾರತದಲ್ಲಿ ತೀವ್ರ ಬಡತನ ಶೇ 2.6ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ

ಕಳೆದ ಒಂದು ದಶಕದಲ್ಲಿ ಬಡತನ ನಿರ್ಮೂಲನೆಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿಯೇ ಅತಿ...