ದಲ್ಲೇವಾಲ್ ಉಪವಾಸ – ದೆಹಲಿ ಚಲೋಗೆ ಮಂಡಿಯೂರಿದ ಪ್ರಧಾನಿ ಮೋದಿ; ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ

Date:

ಕಳೆದ 55 ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ರೈತರು ಜನವರಿ ಜನವರಿ 21ರಂದು ದೆಹಲಿ ಚಲೋ ನಡೆಸುವುದಾಗಿ ಘೋಷಿಸಿದ್ದಾರೆ. ರೈತ ಹೋರಾಟಕ್ಕೆ ಸ್ಪಂದಿಸದೆ ಮೊಂಡು ಧೋರಣೆ ತಳೆದಿದ್ದ ಕೇಂದ್ರ ಸರ್ಕಾರ, ಇದೀಗ ರೈತ ಹೋರಾಟದ ಎದುರು ಮಂಡಿಯೂರಿದೆ. ಪ್ರತಿಭಟನಾನಿರತ ರೈತರಿಗೆ ಪ್ರಸ್ತಾವನೆ ಕಳಿಸಿದೆ.

- Advertisement -

ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿರುವ ಖನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು, “ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಪ್ರಿಯ ರಂಜನ್ ನೇತೃತ್ವದ ಕೇಂದ್ರ ಸರ್ಕಾರದ ತಂಡವು ಶನಿವಾರ ನಮಗೆ ಪ್ರಸ್ತಾವನೆಯೊಂದನ್ನು ನೀಡಿದೆ. ಅದನ್ನು ನಾವು ಪರಿಶೀಲಿಸುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲ್ ಅವರನ್ನು ಕೂಡ ತಂಡವು ಭೇಟಿ ಮಾಡಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

“ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ಸರ್ಕಾರ ಕಾಳಜಿ ಇದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳಾದ ಎಸ್‌ಕೆಎಂ ಮತ್ತು ಕೆಎಂಎಂ ನಾಯಕರನ್ನು ಕೇಳಿಕೊಂಡಿದ್ದಾರೆ. ರೈತ ನಾಯಕರೊಂದಿಗೆ ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಿದ್ದಾರೆ” ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಇನ್ನು, ಎಸ್‌ಕೆಎಂ ಮತ್ತು ಕೆಎಂಎಂ ನಡುವೆ ಒಗ್ಗಟ್ಟು ಮೂಡಿಸಲು ಸಭೆಗಳು ನಡೆಯುತ್ತಿವೆ. ಅವರು (ಎಸ್‌ಕೆಎಂ) ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ. ಆದರೆ, ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆ ಮುಂದೂಡುವಂತೆ ಅವರು ಎಸ್‌ಕೆಎಂ ಮುಖಂಡರು ಒತ್ತಾಯಿಸಿದ್ದಾರೆ. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...