ರಾಜಿ ಮಾಡಿಕೊಂಡು, ದೇಶವನ್ನು ಮಾರಾಟ ಮಾಡಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

Date:

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಲು ಅವಕಾಶ ನಿರಾಕರಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು (ಫೆ. 3) ಸಂಸತ್ತಿನ ಹೊರಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ನಮ್ಮ ಪ್ರಧಾನಿಯವರು ರಾಜಿ ಮಾಡಿಕೊಂಡಿದ್ದಾರೆ ಮತ್ತು ಅವರು ದೇಶವನ್ನು ಮಾರಾಟ ಮಾಡಿದ್ದಾರೆ,” ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.
​
ಇತ್ತೀಚೆಗೆ ಅಮೆರಿಕದೊಂದಿಗೆ ಸಹಿ ಹಾಕಲಾದ ‘ವ್ಯಾಪಾರ ಒಪ್ಪಂದ’ದ (Trade Deal) ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೀವ್ರ ಒತ್ತಡಕ್ಕೆ ಮಣಿದು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಆರೋಪಿಸಿದರು. “ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಒಪ್ಪಂದಕ್ಕೆ, ಏಕಾಏಕಿ ನಿನ್ನೆ ಸಂಜೆ ಏಕೆ ಸಹಿ ಹಾಕಲಾಯಿತು? ಪ್ರಧಾನಿ ಮೋದಿ ವಿಚಲಿತರಾಗಿದ್ದಾರೆ ” ಎಂದು ಅವರು ಹೇಳಿದರು.
​
ಅಮೆರಿಕದಲ್ಲಿ ಗೌತಮ್ ಅದಾನಿ ವಿರುದ್ಧ 1,111 ಪ್ರಕರಣಗಳಿವೆ. ಅದಾನಿ ಸಮೂಹ ಕೇವಲ ಒಂದು ಉದ್ಯಮವಲ್ಲ, ಅದು ಪ್ರಧಾನಿ ಮೋದಿಯವರ “ಆರ್ಥಿಕ ಆಧಾರಸ್ತಂಭ”. ಅದಾನಿಯವರನ್ನು ಗುರಿಯಾಗಿಸುವುದು ಎಂದರೆ ಮೋದಿಯವರನ್ನೇ ಗುರಿಯಾಗಿಸಿದಂತೆ ಎಂದು ರಾಹುಲ್ ಹೇಳಿದರು.

- Advertisement -

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಇದ್ರೆ ಎಲ್ಲವೂ ಸಾಧ್ಯ- ಇದು ಬಿಜೆಪಿ ಮಂತ್ರ!
​
ಎಪ್ಸ್ಟೀನ್ ಫೈಲ್ಸ್‌ನಲ್ಲಿ ಇನ್ನೂ ಬಹಿರಂಗವಾಗದ ಅನೇಕ ಅಂಶಗಳಿದ್ದು, ಇಡೀ ದೇಶಕ್ಕೆ ಆ ಸತ್ಯ ತಿಳಿಯಬೇಕಿದೆ. ಇದು ಮೋದಿಯವರ ಮೇಲಿರುವ ಇನ್ನೊಂದು ದೊಡ್ಡ ಒತ್ತಡ ಎಂದು ಅವರು ಪ್ರತಿಪಾದಿಸಿದರು.
​
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಕುರಿತು ಮಾತನಾಡಲು ವಿಪಕ್ಷ ನಾಯಕನಿಗೆ ಅವಕಾಶ ನೀಡಲಿಲ್ಲ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ನಾಯಕನ ಭಾಷಣಕ್ಕೆ ತಡೆಯೊಡ್ಡಲಾಗಿದೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಸಂಸತ್ತಿನ ಕಲಾಪದಲ್ಲಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಆತ್ಮಕಥೆಯ ಕೆಲವು ಭಾಗಗಳನ್ನು ಉಲ್ಲೇಖಿಸಲು ರಾಹುಲ್ ಪ್ರಯತ್ನಿಸಿದಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ತೀವ್ರ ವಿರೋಧ ವ್ಯಕ್ತಪಡಿಸಿದರು. ಆ ಪುಸ್ತಕ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ ಎಂಬುದು ಆಡಳಿತ ಪಕ್ಷದ ವಾದವಾಗಿತ್ತು.
​
ದೇಶದ ರೈತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಈ ವ್ಯಾಪಾರ ಒಪ್ಪಂದದಲ್ಲಿ ಪ್ರಧಾನಿ ಮೋದಿ ನಿಮ್ಮ ರಕ್ತ ಮತ್ತು ಬೆವರನ್ನು ಮಾರಾಟ ಮಾಡಿದ್ದಾರೆ. ಅವರು ಕೇವಲ ನಿಮ್ಮನ್ನು ಮಾರಿಲ್ಲ, ಪೂರ್ತಿ ದೇಶವನ್ನೇ ಮಾರಾಟ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...