ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗಿಲ್ಲ, ಕ್ಷಮಿಸಿ: ಪಿಎಂ ನರೇಂದ್ರ ಮೋದಿ

Date:

ದೇಶದ ಮಹಿಳೆಯರ ಕನಸುಗಳು ಭಗ್ನಗೊಂಡಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

- Advertisement -

ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿ ಮಸೂದೆಯು ನಿನ್ನೆ ಅಗತ್ಯವಿದ್ದ ಮೂರನೇ ಎರಡರಷ್ಟು ಬಹುಮತ ಪಡೆಯಲು ವಿಫಲವಾಗಿದೆ. ಮಸೂದೆಯ ಪರವಾಗಿ 298 ಮತಗಳು ಬಂದರೆ, ವಿರುದ್ಧವಾಗಿ 230 ಮತಗಳು ಬಿದ್ದವು. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟೀಕಿಸುತ್ತಿದೆ. ಆದರೆ ವಿಪಕ್ಷಗಳು ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿ ತಿದ್ದುಪಡಿ ಮಾಡಿದ ಮಹಿಳಾ ಮೀಸಲಾತಿ ಮಸೂದೆ ಬದಲಾಗಿ 2023ರಲ್ಲಿ ಅಂಗೀಕಾರಗೊಂಡ ಮಸೂದೆಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? 2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನು ಮೋದಿ ಸರ್ಕಾರ ಜಾರಿ ಮಾಡಬಹುದಲ್ಲವೇ?

ಈ ನಡುವೆ ದೇಶವನ್ನುದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಮಹಿಳೆಯರಿಗಾಗಿದ್ದ ಮಸೂದೆ ವಿಫಲವಾದಾಗ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್‌ಪಿ ಪಕ್ಷಗಳು ಸಂತೋಷಪಟ್ಟು ಚಪ್ಪಾಳೆ ತಟ್ಟಿದವು. ಪ್ರತಿಪಕ್ಷಗಳು ಮೇಜು ಬಡಿಯುವುದು ಮಹಿಳೆಯರಿಗೆ ಮಾಡಿದ ಅವಮಾನ. ಪ್ರತಿಪಕ್ಷಗಳು ನಾರಿ ಶಕ್ತಿಯನ್ನು ಹಗುರವಾಗಿ ಪರಿಗಣಿಸುತ್ತಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿಫಲಗೊಳಿಸಿದ್ದಕ್ಕಾಗಿ ವಿರೋಧ ಪಕ್ಷಗಳಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದ್ದಾರೆ.

“ಮಹಿಳಾ ಮೀಸಲಾತಿ ಮಸೂದೆ ಏನನ್ನೂ ಕಸಿದುಕೊಳ್ಳುವ ಉದ್ದೇಶವನ್ನು ಹೊಂದಿರಲಿಲ್ಲ. ಬದಲಾಗಿ ಉತ್ತಮ ಉದ್ದೇಶ ಹೊಂದಿತ್ತು. ಮಹಿಳಾ ಮೀಸಲಾತಿ ಮಸೂದೆಯು 21 ನೇ ಶತಮಾನದ ಮಹಿಳೆಯರಿಗೆ ಹಾರಲು ರೆಕ್ಕೆಯಾಗಿತ್ತು. ಮಹಿಳಾ ಮೀಸಲಾತಿ ಮಸೂದೆಯು ಈ ಕಾಲದ ಅಗತ್ಯವಾಗಿದೆ” ಎಂದರು.

“ಕ್ಷೇತ್ರ ಮರುವಿಂಗಡಣೆಯಿಂದಾಗಿ ದಕ್ಷಿಣ ರಾಜ್ಯಗಳು ಪ್ರಾತಿನಿಧ್ಯ ಕಳೆದುಕೊಳ್ಳುತ್ತವೆ ಎಂಬ ಸುಳ್ಳನ್ನು ಹರಡಲಾಗಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈ ಸುಳ್ಳನ್ನು ಹರಡುತ್ತಿದೆ. ಸಂಸತ್ತಿನಲ್ಲಿ ತಮಿಳು ಪ್ರಾತಿನಿಧ್ಯವನ್ನು ಹೆಚ್ಚಿಸಲು ಡಿಎಂಕೆಗೆ ಅವಕಾಶವಿತ್ತು” ಎಂದು ಪ್ರಧಾನಿ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಮೀಸಲಾತಿ ಮರೆಯಲ್ಲಿ ಮೋದಿ ಸರ್ಕಾರದ ಮಸಲತ್ತು!

ಜನಸಂಖ್ಯೆಯ ಆಧಾರದಲ್ಲಿ ನಡೆಯುವ ಕ್ಷೇತ್ರ ಮರುವಿಂಗಡಣೆಗೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಕರ್ನಾಟಕ, ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುವ ಭೀತಿ ಉಂಟಾಗಿದೆ. ವಿರೋಧವಿರುವ ಈ ಮಸೂದೆಯ ಜತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸಿ ಮಂಡಿಸುವ ಕೇಂದ್ರದ ನಿಲುವಿಗೆ ವಿರೋಧ ಪಕ್ಷಗಳ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ಬೆಂಬಲವಾಗಿ ನಿಂತಿತ್ತು. ಆದರೆ ಈಗ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದರೆ ಕ್ಷೇತ್ರ ಮರುವಿಂಗಡಣೆಯನ್ನೂ ಅಂಗೀಕರಿಸಿದಂತೆ. ಈ ಕಾರಣದಿಂದಾಗಿ ವಿಪಕ್ಷಗಳು ಈ ಸಂವಿಧಾನ ತಿದ್ದುಪಡಿ ವಿರುದ್ಧವಾಗಿ ನಿಂತಿತು. ಚುನಾವಣಾ ಸಮಯದಲ್ಲಿ ಲಾಭಕ್ಕಾಗಿಯೇ ಈ ತಂತ್ರ ರೂಪಿಸಿದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈಗ ವಿಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸುವ ಯತ್ನ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಈ ನಿಟ್ಟಿನಲ್ಲಿಯೇ ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...