ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

Date:

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೌಟುಂಬಿಕ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪರ್ಯಾಯ ವಿವಾದ ಪರಿಹಾರ (ADR) ಮಾರ್ಗವಾದ ‘ಮಧ್ಯಸ್ಥಿಕೆ’ ಪ್ರಕ್ರಿಯೆಯನ್ನು ವ್ಯಾಪಕವಾಗಿ ಬಳಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಬಿ ವಿ ನಾಗರತ್ನ ಸಲಹೆ ನೀಡಿದ್ದಾರೆ.

- Advertisement -

ಗೌಹಾಟಿಯಲ್ಲಿ ಸುಪ್ರೀಂ ಕೋರ್ಟ್‌ನ ಕೌಟುಂಬಿಕ ನ್ಯಾಯಾಲಯಗಳ ಸಮಿತಿಯು ಆಯೋಜಿಸಿದ್ದ ಪ್ರಾದೇಶಿಕ ಸಮ್ಮೇಳನದಲ್ಲಿ ‘ಕೌಟುಂಬಿಕ ವಿವಾದಗಳಲ್ಲಿ ನ್ಯಾಯಾಲಯದ ತೀರ್ಪು vs ಮಧ್ಯಸ್ಥಿಕೆ’ ವಿಷಯದ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಇದನ್ನೂ ಓದಿ: ಶಬರಿಮಲೆ ಪ್ರವೇಶ | ಮಾಸಿಕ ಮೂರು ದಿನ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸಲ್ಲದು: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ನ್ಯಾಯಾಲಯಗಳಲ್ಲಿ ದೀರ್ಘಾವಧಿ ವ್ಯಾಜ್ಯಗಳನ್ನು ನಡೆಸುವ ಬದಲು, ಮಧ್ಯಸ್ಥಿಕೆ ಮೂಲಕ ರಹಸ್ಯಾತ್ಮಕತೆ ಮತ್ತು ಶೀಘ್ರ ಪರಿಹಾರ ಕಂಡುಕೊಳ್ಳಬಹುದು. ಇದು ದಂಪತಿಗಳು ಹಾಗೂ ಕುಟುಂಬ ಸದಸ್ಯರ ನಡುವಿನ ಮನಸ್ತಾಪವನ್ನು ಶಮನಗೊಳಿಸಲು ನೆರವಾಗುತ್ತದೆ ಎಂದು ಹೇಳಿದ್ದಾರೆ.

ಮಕ್ಕಳ ಪಾಲನೆ ಹಾಗೂ ಭೇಟಿಯ ಹಕ್ಕುಗಳ ವ್ಯಾಜ್ಯಗಳಲ್ಲಿ ಕೇವಲ ಕೋರ್ಟ್ ಆದೇಶ ನೀಡುವುದಕ್ಕಿಂತ, ತರಬೇತಿ ಪಡೆದ ಮಕ್ಕಳ ಮನಶ್ಶಾಸ್ತ್ರಜ್ಞರ ನೆರವಿನಿಂದ ದಂಪತಿಗಳ ಒಪ್ಪಂದದ ಮೂಲಕ ‘ಮಧ್ಯಸ್ಥಿಕೆ ಪೋಷಕರ ಯೋಜನೆ’ ರೂಪಿಸುವುದು ಮಗುವಿನ ಹಿತದೃಷ್ಟಿಯಿಂದ ಉತ್ತಮ ಎಂದು ಅಭಿಪ್ರಾಯಿಸಿದ್ದಾರೆ.

ದೇಶಾದ್ಯಂತ ಇರುವ ಸುಮಾರು 820ಕ್ಕೂ ಹೆಚ್ಚು ಕೌಟುಂಬಿಕ ನ್ಯಾಯಾಲಯಗಳಲ್ಲಿ ಶಾಶ್ವತ ಹಾಗೂ ಅರ್ಹ ಕೌನ್ಸಿಲಿಂಗ್ ಮತ್ತು ಮಧ್ಯಸ್ಥಿಕೆ ಘಟಕಗಳನ್ನು ಸ್ಥಾಪಿಸಬೇಕು. ಇವುಗಳಲ್ಲಿ ಮನಃಶಾಸ್ತ್ರಜ್ಞರು ಮತ್ತು ಸಮಾಜ ಸೇವಕರು ಇರಬೇಕು ಎಂದು ನ್ಯಾಯಮೂರ್ತಿ ಬಿ ವಿ ನಾಗರತ್ನ ಪ್ರತಿಪಾದಿಸಿದರು.

ಗೃಹಬಂಧನ, ತೀವ್ರ ದೌರ್ಜನ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರ ಪ್ರಕರಣಗಳಲ್ಲಿ ಮಧ್ಯಸ್ಥಿಕೆ ನಡೆಸುವುದು ಸೂಕ್ತವಲ್ಲ. ಅಂತಹ ಸೂಕ್ಷ್ಮ ಸನ್ನಿವೇಶಗಳಲ್ಲಿ ನ್ಯಾಯಾಲಯದ ಕಾನೂನಾತ್ಮಕ ತೀರ್ಪೇ ಸರಿಯಾದ ಮಾರ್ಗ ಎಂದೂ ಎಚ್ಚರಿಸಿದರು.

ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ಬರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪ್ರತ್ಯೇಕ ‘ವೃದ್ಧಾಪ್ಯ ಮಧ್ಯಸ್ಥಿಕೆ ಪ್ಯಾನಲ್’ ರಚಿಸಬೇಕೆಂದು ನ್ಯಾ. ನಾಗರತ್ನ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗರಹೊಳೆ: ಜೇನುಕುರುಬ ಕುಟುಂಬಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರದ ಕ್ರಮಕ್ಕೆ ಆದಿವಾಸಿಗಳ ಆಕ್ರೋಶ

ಕೊಡಗು ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ‘ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ’ದಲ್ಲಿ...

ಹಾವೇರಿ | ನ.14ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ

ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕರ್ನಾಟಕದ ಜೈನ ಪರಂಪರೆಗೆ ಹಾವೇರಿಯ ಕೊಡುಗೆ ಅಪಾರ: ಡಾ. ಶಿವಯೋಗಿ ಆರ್ ಕೋರಿಶೆಟ್ಟರ್‌

ಕರ್ನಾಟಕದಲ್ಲಿ ಪ್ರತಿ ಐದು ಗ್ರಾಮಗಳಿಗೆ ಒಂದು ಜೈನಧರ್ಮಕ್ಕೆ ಸಂಬಂಧಿದ ಕುರುಹುಗಳು ದೊರೆಯುತ್ತವೆ....

ಸೌದಿ ಅರೇಬಿಯಾ: ವಿವಾಹೇತರ ಗರ್ಭಧಾರಣೆಗೆ ಕೀನ್ಯಾ ಮಹಿಳೆಗೆ 100 ಛಡಿಯೇಟಿನ ಶಿಕ್ಷೆ

ಸೌದಿ ಅರೇಬಿಯಾದಲ್ಲಿ ವಿವಾಹೇತರ ಸಂಬಂಧದಿಂದ ಮಗುವಿಗೆ ಜನ್ಮ ನೀಡಿದ ಕೀನ್ಯಾದ ಗೃಹ...