ಕುಟುಂಬಸ್ಥರಿಗೆ ಫೋನ್‌ ಕರೆ ಮಾಡುವ ಅವಕಾಶಕ್ಕೆ ಕೊಕ್ಕೆ; ಜೈಲಿನಲ್ಲಿ ಕೈದಿಗಳಿಂದ ಉಪವಾಸ ಪ್ರತಿಭಟನೆ

Date:

ಕುಟುಂಬಸ್ಥರಿಗೆ ಫೋನ್ ಕರೆ ಮಾಡಲು ನೀಡಲಾಗುತ್ತಿದ್ದ ಅವಕಾಶವನ್ನು ಹರಿಯಾಣದ ಫರಿದಾಬಾದ್‌ ಜೈಲಿನಲ್ಲಿ ಕಡಿತಗೊಳಿಸಲಾಗಿದೆ. ಜೈಲು ಅಧಿಕಾರಿಗಳ ಈ ಕ್ರಮವನ್ನು ವಿರೊಧಿಸಿ ನೀಮ್ಕಾ ಕೇಂದ್ರ ಕಾರಾಗೃಹದಲ್ಲಿನ 40ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಪ್ರತಿಭಟನಾ ನಿರತರಿಗೆ ಜೈಲು ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

- Advertisement -

ಜೈಲು ಅಧಿಕಾರಿಗಳ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕೈದಿಗಳು ಬರೆದಿರುವ ಟಿಪ್ಪಣಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ, ವಾರಕ್ಕೆ ಮೂರು ದಿನ ಮನೆಗೆ ಫೋನ್ ಕರೆ ಮಾಡಲು ಅವಕಾಶವಿತ್ತು. ಅದನ್ನು ಇತ್ತೀಚೆಗೆ ಎರಡು ದಿನಗಳಿಗೆ ಇಳಿಸಲಾಗಿತ್ತು. ಇದೀಗ, ವಾರಕ್ಕೆ ಒಂದು ಮಾತ್ರವೇ ಕರೆ ಮಾಡಲು ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಲ್ಲದೆ, ಬದಲಾವಣೆಗೆ ಕಾರಣ ಕೇಳಿದ ಕೈದಿಗಳೊಂದಿಗೆ ಅಧಿಕಾರಿಗಳು ದುರ್ವತನೆ ತೋರಿದ್ದಾರೆಂದು ಕೈದಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜೈಲು ಆಡಳಿತದ ವಿರುದ್ಧ ಧ್ವನಿ ಎತ್ತಿದರೆ ಹೊರಗೆ ಬಿಡುವುದಿಲ್ಲ ಹಾಗೂ ಬ್ಯಾರಕ್‌ಗಳಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು ಬೆದಿರಕೆ ಹಾಕಲಾಗಿದೆ ಎಂದು ಕೈದಿಗಳು ಆರೋಪಿಸಿದ್ದಾರೆ.

“ನಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಲಾಗಿದೆ. ನಮಗೆ ಏನಾದರೂ ಅನಾಹುತವಾದರೆ ಜೈಲು ಆಡಳಿತವೇ ಹೊಣೆ. ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿದ ನಂತರ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...