ಖಾಸಗಿ ವಿಡಿಯೋ ಪ್ರಕರಣ: ‘ಆಕೆ ನನ್ನ ಮಗಳಾಗಿದ್ದರೆ’; ಕೋರ್ಟ್‌ನಲ್ಲಿ ಗದ್ಗರಿತರಾದ ನ್ಯಾಯಾಧೀಶ

Date:

ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ ಕದ್ದು ಚಿತ್ರೀಕರಿಸಿ, ಅವುಗಳನ್ನು ಅಂತರ್ಜಾಲದಲ್ಲಿ ಹರಿಬಿಟ್ಟಿದ್ದ. ಅವುಗಳನ್ನು 48 ಗಂಟೆಗಳ ಒಳಗೆ ತೆಗೆದುಹಾಕುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.

- Advertisement -

ವಿಚಾರಣೆ ವೇಳೆ ಭಾವನಾತ್ಮಕವಾಗಿ ಮಾತನಾಡಿದ ನ್ಯಾಯಾಧೀಶ ಎನ್‌ ಆನಂದ ವೆಂಕಟೇಶ, “ಈ ವಕೀಲೆ ಮಾನಸಿಕವಾಗಿ ನೊಂದಿದ್ದಾರೆ. ಆಕೆ ನನ್ನ ಮಗಳಾಗಿದ್ದರೆ ಏನಾಗುತ್ತಿತ್ತು ಎಂಬುದಾಗಿ ನಾನು ಯೋಚಿಸುತ್ತಿದ್ದೆ. ಆಕೆಯನ್ನು ನನ್ನ ಚೇಂಬರ್‌ನಲ್ಲಿ ಭೇಟಿಯಾಗಿ ಬೆಂಬಲದ ಮಾತುಗಳನ್ನಾಡಬೇಕೆಂದು ನಾನು ಉದ್ದೇಶಿಸಿದ್ದೇನೆ. ಮಾತ್ರವಲ್ಲ, ನಾನೂ ಕೂಡ ಸ್ವಯಂ ಖಿನ್ನತೆಗೊಳಗಾಗದಂತೆ ಸಿದ್ದನಾಗಬೇಕಿದೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂತ್ರಸ್ತ ವಕೀಲೆಯ ಮಾಜಿ ಪ್ರೇಮಿ ಆಕೆಯ ಸಮ್ಮತಿ ಇಲ್ಲದೆ, ಆಕೆಗೆ ಗೊತ್ತಾಗದಂತೆ ವಕೀಲೆಯ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಚಿತ್ರೀಕರಿಸಿ ಅಶ್ಲೀಲ ವೆಬ್‌ಸೈಟ್‌ಗಳು, ಮೆಸೇಜಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದನೆಂದು ಆರೋಪಿಸಲಾಗಿದೆ. ತನ್ನ ಖಾಸಗಿ ವಿಡಿಯೋ-ಚಿತ್ರಗಳನ್ನು ಅಂತರ್ಜಾಲದಿಂದ ತೆಗೆದುಹಾಕುವಂತೆ ಕೋರಿ ಸಂತ್ರಸ್ತ ವಕೀಲೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಧೀಶ ಆನಂದ ವೆಂಕಟೇಶ, “48 ಗಂಟೆಗಳಲ್ಲಿ ಚಿತ್ರಗಳು ಮತ್ತು ವೀಡಿಯೊಗಳನ್ನು ಪತ್ತೆ ಹಚ್ಚಬೇಕು. ಅವುಗಳನ್ನು ನಿರ್ಬಂಧಿಸಿ, ತೆಗೆದುಹಾಕಬೇಕು. ಈ ಬಗ್ಗೆ ಜುಲೈ 14ರೊಳಗೆ ಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ರಾಜ್ಯ ಪೋಲಿಸ್ ಮಹಾನಿರ್ದೇಶಕರನ್ನು (ಡಿಜಿಪಿ) ಪ್ರಕರಣದ ಪ್ರತಿವಾದಿಯನ್ನಾಗಿ ಸ್ವಯಂಪ್ರೇರಿತವಾಗಿ ಸೇರಿಸಿರುವ ನ್ಯಾಯಾಲಯವು, “ಮಹಿಳೆಯರನ್ನು ಇಂತಹ ಆಘಾತಗಳಿಂದ ರಕ್ಷಿಸಲು ವ್ಯವಸ್ಥಿತ ಸುಧಾರಣೆಗಳನ್ನು ತರಬೇಕು” ಎಂದು ಸೂಚಿಸಿದ್ದಾರೆ.

“ಅರ್ಜಿದಾರರ ಮನೋಬಲವು ಅವರ ಕಾನೂನು ತರಬೇತಿ ಮತ್ತು ಬೆಂಬಲ ವ್ಯವಸ್ಥೆಯಿಂದ ರೂಪುಗೊಂಡಿದೆ. ಅದೃಷ್ಟವಶಾತ್ ಅವರು ಈ ವೃತ್ತಿಯಲ್ಲಿದ್ದಾರೆ. ಅವರಿಗೆ ನಮ್ಮೆಲ್ಲರ ನೆರವು-ಬೆಂಬಲವಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಮೂಲಭೂತ ಹಕ್ಕನ್ನು ರಕ್ಷಿಸುವುದು ಸರ್ಕಾರ ಮತ್ತು ನ್ಯಾಯಾಲಯಗಳ ಸಾಂವಿಧಾನಿಕ ಕರ್ತವ್ಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...