ಖಾಸಗೀಕರಣ ಕುತ್ತು; ಸೈನಿಕ ಶಾಲೆಗಳ ಮೇಲೆ ಆರೆಸ್ಸೆಸ್ ಹಿಡಿತ: ರಾಹುಲ್ ಗಾಂಧಿ ಕಳವಳ

Date:

ದೇಶದ ಪ್ರತಿಷ್ಠಿತ ಸೈನಿಕ ಶಾಲೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (PPP ಮಾದರಿ) ನಡೆಸುವ ಕೇಂದ್ರ ಸರ್ಕಾರದ ನೀತಿಯಿಂದಾಗಿ, ಈ ಶಾಲೆಗಳ ನಿರ್ವಹಣೆ ಹಾಗೂ ಹಿಡಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಅಂಗಸಂಸ್ಥೆಗಳು ಮತ್ತು ಆಡಳಿತಾರೂಢ ಬಿಜೆಪಿಗೆ ನಿಕಟವಾಗಿರುವ ಟ್ರಸ್ಟ್‌ಗಳ ಪಾಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ ಸಂಸದೀಯ ಸಲಹಾ ಸಮಿತಿಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಶಸ್ತ್ರ ಪಡೆಗಳಿಗೆ ಯುವಕರನ್ನು ತರಬೇತುಗೊಳಿಸುವ ಪ್ರಮುಖ ಸಂಸ್ಥೆಗಳ ಸೈದ್ಧಾಂತಿಕ ಸ್ವರೂಪ ಮತ್ತು ಜಾತ್ಯತೀತ ಪರಂಪರೆಗೆ ಇದರಿಂದ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ, ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದ ಕೇಂದ್ರ!

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ನೂತನವಾಗಿ ಆರಂಭಿಸಲಾದ ಪಿಪಿಪಿ (PPP) ಮಾದರಿಯ ಸೈನಿಕ ಶಾಲೆಗಳ ಹಂಚಿಕೆ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಪ್ರಶ್ನಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಂಜೂರು ಮಾಡಿರುವ 60ಕ್ಕೂ ಹೆಚ್ಚು ನೂತನ ಸೈನಿಕ ಶಾಲೆಗಳ ಪೈಕಿ ಗಮನಾರ್ಹ ಸಂಖ್ಯೆಯ ಶಾಲೆಗಳು ಆರ್‌ಎಸ್‌ಎಸ್, ಆರ್‌ಎಸ್‌ಎಸ್ ಬೆಂಬಲಿತ ಸಂಸ್ಥೆಗಳು, ಬಿಜೆಪಿ ನಾಯಕರು ಹಾಗೂ ಮೈತ್ರಿಕೂಟದ ಪಾಲುದಾರರಿಗೆ ಸೇರಿದ ಟ್ರಸ್ಟ್‌ಗಳಿಗೆ ಲಭಿಸಿವೆ ಎಂದು ಮಾಧ್ಯಮ ವರದಿಗಳು ಹಾಗೂ ವಿಪಕ್ಷಗಳ ಕಳವಳವನ್ನು ಸಭೆಯ ಗಮನಕ್ಕೆ ತಂದರು.

“ಸೈನಿಕ ಶಾಲೆಗಳು ದೇಶದ ಸಶಸ್ತ್ರ ಪಡೆಗಳಿಗೆ ಶಿಸ್ತುಬದ್ಧ ಹಾಗೂ ತಟಸ್ಥ ಹಿನ್ನೆಲೆಯ ಅಧಿಕಾರಿಗಳನ್ನು ಒದಗಿಸುವ ಶಕ್ತಿ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳನ್ನು ಯಾವುದೇ ನಿರ್ದಿಷ್ಟ ರಾಜಕೀಯ ಅಥವಾ ಸೈದ್ಧಾಂತಿಕ ಹಿನ್ನೆಲೆಯುಳ್ಳ ಸಂಸ್ಥೆಗಳಿಗೆ ವಹಿಸಿಕೊಡುವುದರಿಂದ ಮಿಲಿಟರಿ ತರಬೇತಿಯ ಸ್ವರೂಪವೇ ಬದಲಾಗುವ ಅಪಾಯವಿದೆ. ಇದು ಭಾರತೀಯ ಸೇನೆಯ ಜಾತ್ಯತೀತ ಮತ್ತು ರಾಜಕೀಯೇತರ ಸ್ವರೂಪದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ,” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಖಾಸಗೀಕರಣ ನೀತಿಯ ಮರುಪರಿಶೀಲನೆಗೆ ಆಗ್ರಹ

ಈ ಸಂದರ್ಭದಲ್ಲೇ ರಾಹುಲ್ ಗಾಂಧಿ ಸೈನಿಕ ಶಾಲೆಗಳ ಈ ಖಾಸಗೀಕರಣ/ಪಿಪಿಪಿ ಮಾದರಿಯನ್ನು ತಕ್ಷಣವೇ ಮರುಪರಿಶೀಲಿಸಬೇಕು, ಶಾಲಾ ಆಡಳಿತ ವ್ಯವಸ್ಥೆಯು ಸಂಪೂರ್ಣವಾಗಿ ರಕ್ಷಣಾ ಸಚಿವಾಲಯ ಹಾಗೂ ಸೈನಿಕ ಶಾಲಾ ಸೊಸೈಟಿಯ ನೇರ ಉಸ್ತುವಾರಿಯಲ್ಲೇ ಇರಬೇಕು ಎಂದು ಒತ್ತಾಯಿಸಿದರು.

ಆದಾಗ್ಯೂ, ಸಶಸ್ತ್ರ ಪಡೆಗಳ ತರಬೇತಿ ವ್ಯವಸ್ಥೆಯಲ್ಲಿ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಭಾವದ ಕುರಿತು ವಿಪಕ್ಷ ನಾಯಕರು ಎತ್ತಿರುವ ಈ ಪ್ರಶ್ನೆಯು ರಾಜಕೀಯ ಹಾಗೂ ರಕ್ಷಣಾ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಸೈನಿಕ ಶಾಲೆಗಳ ‘ಕೇಸರೀಕರಣ’: ಆರೆಸ್ಸೆಸ್‌, ಅದಾನಿ ಪಾಲಾದ 40 ಮಿಲಿಟರಿ ಶಾಲೆ

ಶೇ.62ರಷ್ಟು ಹೊಸ ಸೈನಿಕ ಶಾಲೆಗಳು ಸಂಘಪರಿವಾರಕ್ಕೆ ಹಸ್ತಾಂತರ!

ಈ ಹಿಂದೆ ರಿಪೋಟರ್ಸ್ ಕಲೆಕ್ಟಿವ್ ವರದಿ ಮಾಡಿದ ಪ್ರಕಾರ ಕೇಂದ್ರ ಸರ್ಕಾರವು ಸುಮಾರು ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ ಮತ್ತು ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದೆ. “ಕೇಂದ್ರ ಸರ್ಕಾರದ ಪತ್ರಿಕಾ ಹೇಳಿಕೆ ಮತ್ತು ಆರ್‌ಟಿಐನಿಂದ ಪಡೆದ ಮಾಹಿತಿ ಕಳವಳಕಾರಿಯಾಗಿದೆ. ನಮ್ಮ ವಿಚಾರಣೆಯಿಂದ ಸುಮಾರು 40ರಷ್ಟು ಅಂದರೆ ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ಆರ್‌ಎಸ್‌ಎಸ್‌, ಬಿಜೆಪಿ ನಾಯಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ” ಎಂದು ರಿಪೋಟರ್ಸ್ ಕಲೆಕ್ಟಿವ್ ವರದಿ ಹೇಳುತ್ತದೆ.

“ಸುಮಾರು ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಮತ್ತು ಅದರ ಅಂಗ ಸಂಸ್ಥೆಗಳೊಂದಿಗೆ ನಂಟು ಹೊಂದಿರುವ ಶಾಲೆಗಳಿಗೆ ನೀಡಲಾಗಿದೆ. ಜೊತೆಗೆ ಬಿಜೆಪಿ, ಅದರ ಮಿತ್ರಪಕ್ಷ, ಅದರ ಹಿತೈಷಿಗಳು, ಹಿಂದುತ್ವ ಸಂಘಟನೆಗಳು, ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ” ಎಂದು ವರದಿ ಉಲ್ಲೇಖಿಸಿದೆ.

2021ರಲ್ಲಿ ಕೇಂದ್ರ ಸರ್ಕಾರವು ಭಾರತದಲ್ಲಿ ಸೈನಿಕ ಶಾಲೆಯನ್ನು ಖಾಸಗಿ ಸಂಸ್ಥೆಗಳು ನಿರ್ವಹಣೆ ಮಾಡುವ ಅವಕಾಶವನ್ನು ನೀಡಿದೆ. ಆ ವರ್ಷದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ನೂರು ಹೊಸ ಸೈನಿಕ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದೆ. ಅದಾದ ಬಳಿಕ ಖಾಸಗೀಕರಣದ ನೆಪದಲ್ಲಿ ಆರ್‌ಎಸ್‌ಎಸ್ ಸಿದ್ಧಾಂತವನ್ನು ಹರಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...